ನಾಳೆ ಕಾಂಗ್ರೆಸ್‌ ಟಿಕೆಟ್‌ ಅಂತಿಮ ಪಟ್ಟಿ

Team Udayavani, Jan 26, 2020, 3:00 AM IST

naale-cong

ಹುಣಸೂರು: ನಗರಸಭೆ ಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ಗೆ ಭಾರೀ ಬೇಡಿಕೆ ಇದೆ. 31 ಕ್ಷೇತ್ರಕ್ಕೆ 91 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಉಪ ಚುನಾವಣೆ ವೇಳೆ ಪಕ್ಷಕ್ಕೆ ಬಂದಿರುವವರನ್ನೂ ಪರಿಗಣಿಸಿ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಟಿಕೆಟ್‌ ಸಿಗದವರಿಗೆ ಮುಂದೆ ಅವಕಾಶ ಕಲ್ಪಿಸಲಾಗುವುದು ಎಂದು ಶಾಸಕ ಎಚ್‌.ಪಿ.ಮಂಜುನಾಥ್‌ ಭರವಸೆ ನೀಡಿದರು.

ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರು ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಗೆಲುವನ್ನೇ ಮಾನದಂಡವಾಗಿಸಿಕೊಂಡು ಪ್ರತಿ ವಾರ್ಡ್‌ನಲ್ಲೂ ಸಮೀಕ್ಷೆ ನಡೆಸಿ, ಜನಾಭಿಪ್ರಾಯ ಸಂಗ್ರಹಿಸಲಾಗುವುದು. ಮುಖ್ಯವಾಗಿ ಜನಪ್ರಿಯತೆ, ಚುನಾವಣಾ ವೆಚ್ಚ ಭರಿಸುವ ಶಕ್ತಿ ಇರುವವರಿಗೆ ಟಿಕೆಟ್‌ ನೀಡಲಾಗುವುದು. ಇದನ್ನು ಎಲ್ಲಾ ಆಕಾಂಕ್ಷಿಗಳು ಅರ್ಥ ಮಾಡಿಕೊಳ್ಳಬೇಕು ಎಂದರು.

ಕೆಲ ವಾರ್ಡ್‌ಗಳಲ್ಲಿ ಮತದಾರರ ಪಟ್ಟಿಯಲ್ಲಿ ಸಾಕಷ್ಟು ದೋಷ ಉಂಟುಮಾಡಿದ್ದಾರೆ. ಕೆಲವರು ಪ್ರಭಾವ ಬೀರಿ ತಮಗೆ ಬೇಕಾದ ವಾರ್ಡ್‌ಗಳಿಗೆ ವರ್ಗಾಯಿಸಿಕೊಂಡಿರುವ ಬಗ್ಗೆ ಜಿಲ್ಲಾಕಾರಿಗಳೊಂದಿಗೆ ಚರ್ಚಿಸಿ, ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳಲು ಮನವಿಮಾಡಿದ್ದೇನೆ. ತೊಂದರೆಗೊಳಗಾದವರು ಜಿಲ್ಲಾಧಿಕಾರಿಗೆ ದೂರು ನೀಡಬೇಕೆಂದು ಕೋರಿದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಜಿ.ಜೆ.ವಿಜಯಕುಮಾರ್‌ ಮಾತನಾಡಿ, ಕೆಪಿಸಿಸಿ ಮಾರ್ಗಸೂಚಿಯಂತೆ ಅಭ್ಯರ್ಥಿಗಳ ಆಯ್ಕೆಗೆ 10 ಮಂದಿ ಸ್ಕ್ರೀನಿಂಗ್‌ ಸಮಿತಿ ನೇಮಿಸಲಿದ್ದು, ಪ್ರತಿವಾರ್ಡ್‌ಗೆ ಭೇಟಿ ನೀಡಿ ಸಾರ್ವಜನಿಕ ಅಭಿಪ್ರಾಯ ಪಡೆಯಲಾಗುವುದು. ಜ.27 ರಂದು ಅಂತಿಮ ಪಟ್ಟಿ ಸಿದ್ದವಾಗಲಿದ್ದು, ಅಂದೇ ಬಿ.ಫಾರಂ ವಿತರಿಸಲಾಗುವುದು ಎಂದರು.

ಸಭೆಯಲ್ಲಿ ಕಾಂಗ್ರೆಸ್‌ ನಗರ ಅಧ್ಯಕ್ಷ ಶಿವಯ್ಯ, ಮಾಜಿ ಅಧ್ಯಕ್ಷ ಕೆಂಪೇಗೌಡ, ಜಿಪಂ ಉಪಾಧ್ಯಕ್ಷೆ ಗೌರಮ್ಮ, ತಾಪಂ ಅಧ್ಯಕ್ಷೆ ಪದ್ಮಮ್ಮ, ಉಪಾಧ್ಯಕ್ಷ ಪ್ರೇಮೇಗೌಡ, ಮುಖಂಡ ಅಶ್ವಿ‌ನ್‌ ಕುಮಾರ್‌ ರೈ ಇತರರಿದ್ದರು.

ಟಾಪ್ ನ್ಯೂಸ್

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.