ಅವೈಜ್ಞಾನಿಕ ಚರಂಡಿಯಿಂದ ಸಂಚಾರಕ್ಕೆ ತೊಂದರೆ


Team Udayavani, Jan 26, 2020, 3:00 AM IST

avygnanika_

ಯಳಂದೂರು: ತಾಲೂಕಿನ ಅಂಬಳೆ ಗ್ರಾಮದ ನಾಯಕರ ಹೊಸ ಮಾರ್ಗದಿಂದ ಅಂಬಳೆ ಹೊಮ್ಮ ಗ್ರಾಮಕ್ಕೆ ಸಂಪರ್ಕ ರಸ್ತೆಯ ಮಧ್ಯದಲ್ಲಿ ಚರಂಡಿಯ ನೀರು ಹೋಗಲು ಸ್ಲಾಬ್‌ ಚರಂಡಿ ನಿರ್ಮಾಣವಾಗಿದೆ. ಕಾಮಗಾರಿಯೂ ಅವೈಜ್ಞಾನಿಕವಾಗಿ ಇರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತದೆ. ಅಂಬಳೆ ಗ್ರಾಮದಲ್ಲಿ ಟಿಎಸ್‌ಪಿ ಯೋಜನೆಯಡಿ 20 ಲಕ್ಷ ರೂ. ಮಂಜೂರಾಗಿದ್ದು, ಇದರಲ್ಲಿ 4 ಡೆಕ್‌, 590 ಮೀಟರ್‌ ಚರಂಡಿ ಹಾಗೂ 60 ಮೀಟರ್‌ ರಸ್ತೆಯನ್ನು ನಿರ್ಮಿಸುವ ನಿಟ್ಟಿನಲ್ಲಿ 2019-ಆಗಸ್ಟ್‌ ತಿಂಗಳಲ್ಲಿ ಶಾಸಕ ಎನ್‌.ಮಹೇಶ್‌ ಭೂಮಿ ಪೂಜೆ ಸಲ್ಲಿಸಿ ಚಾಲನೆ ನೀಡಿದ್ದರು.

ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿ: ಕಾಮಗಾರಿಯು ಕಳೆದ 5 ತಿಂಗಳುಗಳಿಂದಲೂ ಆಮೆಗತಿಯಲ್ಲಿ ಕುಟುಂತ್ತಾ ಸಾಗುತ್ತಿದೆ. ಇದು ಅಂಬಳೆ ಗ್ರಾಮದಿಂದ ಹೊಮ್ಮ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ಆದರೆ, ಮಾರ್ಗ ಮಧ್ಯದಲ್ಲಿ ರಸ್ತೆಗಿಂತ 3 ಅಡಿ ಎತ್ತರಕ್ಕೆ ಸ್ಲಾಬ್‌ ನಿರ್ಮಿಸಲಾಗಿದೆ. ಇಲ್ಲಿ ದಿನನಿತ್ಯ ಬಸ್‌, ಲಾರಿ, ಟ್ರಾಕ್ಟರ್‌, ಆಟೋ, ಬೈಕ್‌ ಸೇರಿದಂತೆ ನೂರಾರು ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಈ ಕೂಡಲೇ ಎತ್ತರವನ್ನು ಕಡಿಮೆಗೊಳಿಸುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕಾಗಿದೆ ಎಂದು ವಾಹನ ಸವಾರರು ಆಗ್ರಹಿದ್ದಾರೆ.

ತಮಗೆ ಇಷ್ಟ ಬಂದಂತೆ ಚರಂಡಿ ನಿರ್ಮಾಣ: ಐದು ತಿಂಗಳು ಕಳೆದರೂ ಕಾಮಗಾರಿ ಮುಗಿಯುವ ಲಕ್ಷಣಗಳು ಮಾತ್ರ ಗೋಚರಿಸುತ್ತಿಲ್ಲ. ಚರಂಡಿಯನ್ನು ಮಾತ್ರ ನಿರ್ಮಾಣ ಮಾಡಿ, ಹಾಗೇ ಬಿಟ್ಟಿದ್ದಾರೆ. ಬಾಕಿ ಇರುವ ರಸ್ತೆ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಬೇಕು. ಈ ಬಗ್ಗೆ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಇದರಿಂದ ಗುತ್ತಿಗೆದಾರರು ತಮಗೆ ಇಷ್ಟ ಬಂದ ರೀತಿಯಲ್ಲಿ ಚರಂಡಿ ಕಾಮಗಾರಿಯನ್ನು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಆಮೆ ಗತಿಯಲ್ಲಿ ಸಾಗಿದೆ ಕಾಮಗಾರಿ: ಕಡಿಮೆ ಗುಣಮಟ್ಟದ ಸಾಮಾಗ್ರಿಗಳನ್ನು ಬಳಸಿಕೊಂಡು ಚರಂಡಿಯನ್ನು ನಿರ್ಮಾಣ ಮಾಡಿದ್ದಾರೆ. ಜೊತೆಗೆ ಕುಡಿಯುವ ನೀರಿನ ಕೈ ಪಂಪು ಕೂಡ ಪಕ್ಕದಲ್ಲಿದ್ದು, ಇದನ್ನೂ ಸೇರಿಸಿಕೊಂಡು ಚರಂಡಿ ನಿರ್ಮಾಣ ಮಾಡಲಾಗಿದೆ. ಇದರಿಂದ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾದಾಗ ಕೈ ಪಂಪ್‌ ಒತ್ತಲು ತೊಂದರೆಯಾಗುತ್ತದೆ. ಈ ಬಗ್ಗೆ ಸಂಬಂದಪಟ್ಟ ಎಇಇ ಹಾಗೂ ಮೇಲಾಧಿಕಾರಿಗಳು ಭೇಟಿ ನೀಡಿ ಕಾಮಗಾರಿಯು ಪರಿಶೀಲಿಸಬೇಕು. ಅಲ್ಲದೆ, ಆಮೆ ಗತಿಯಲ್ಲಿ ಸಾಗುತ್ತಿರುವ ರಸ್ತೆ ಕಾಮಗಾರಿ ಸೇರಿದಂತೆ ಇತರೇ ಕೆಲಸಗಳನ್ನು ಶೀಘ್ರದಲ್ಲಿಯೇ ಮುಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕಾಗಿದೆ ಎಂಬ ಆಗ್ರಹ ಗ್ರಾಮಸ್ಥರಿಂದ ಕೇಳಿ ಬರುತ್ತಿದೆ.

ನಡೆಯುತ್ತಿರುವ ಕಾಮಗಾರಿಯು ಅಂಬಳೆ ಗ್ರಾಮದಲ್ಲಿ ಬಡವಾಣೆಯು ಎತ್ತರದಲ್ಲಿರುವುದರಿಂದ ಅಲ್ಲಿಂದ ಚರಂಡಿ ನೀರು ಹಾದು ಹೋಗುವ ಉದ್ದೇಶದಿಂದ ಸ್ಲಾಬ್‌ ಎತ್ತರಿಸಲಾಗಿದೆ. ರಸ್ತೆಯಲ್ಲಿ ಸಂಚಾರ ಮಾಡುವ ವಾಹನ ಸವಾರರಿಗೆ ತೊಡಕುಂಟಾಗುತ್ತಿರುವ ಬಗ್ಗೆ ದೂರು ಕೇಳಿ ಬರುತ್ತಿದೆ. ಈ ಕೂಡಲೇ ಪರಿಶೀಲಿಸಿ ಮುಂದಿನ ಕ್ರಮ ವಹಿಸಲಾಗುವುದು.
-ರಾಜು, ಜೆಇ ಲೋಕೋಪಯೋಗಿ ಇಲಾಖೆ, ಕೊಳ್ಳೇಗಾಲ

* ಫೈರೋಜ್‌ ಖಾನ್‌

ಟಾಪ್ ನ್ಯೂಸ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

12

Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿ ಆನೆ ದಾಳಿ:ವಿಡಿಯೋ ವೈರಲ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kalaburagi: 6 acres of sugarcane crop caught fire after being struck by an electric wire

Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.