ಕೆಪಿಸಿಸಿ ಸಾರಥ್ಯ ವಿಚಾರ ಹೈಕಮಾಂಡ್ ಅಂಗಳದಲ್ಲಿ: ಎಂ.ಬಿ.ಪಾಟೀಲ್
Team Udayavani, Jan 26, 2020, 12:39 PM IST
ವಿಜಯಪುರ: ಕೆಪಿಸಿಸಿ ಅಧ್ಯಕ್ಷರ ನೇಮಕ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಬೇಕು ಎಂಬ ಆಗ್ರಹ ಮಾಡಲಿದ್ದೇನೆಯೇ ಹೊರತು ನನ್ನನ್ನೇ ಮಾಡಿ ಎಂದು ಲಾಬಿ ಮಾಡುವುದಿಲ್ಲ. ಸದ್ಯ ವಿಷಯ ಹೈಕಮಾಂಡ್ ಅಂಗಳದಲ್ಲಿದೆ ಮಾಜಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಅನುಸರಿಸ ಬೇಕಿರುವ ಕ್ರಮಗಳ ಕುರಿತು ಪಕ್ಷದ ವರಿಷ್ಠ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಕಾರ್ಯಾಧ್ಯಕ್ಷರ ಸಂಖ್ಯೆ ಹೆಚ್ಚಿಸಬೇಕು ಎಂಬುದು ಸಿದ್ದರಾಮಯ್ಯ ಅವರ ನಿಲುವಲ್ಲ. ಬದಲಾಗಿ ಇದು ಮಾಧ್ಯಮಗಳ ಸೃಷ್ಟಿ ಎಂದರು.
ಪ್ರತಿಪಕ್ಷದ ಸ್ಥಾನದಲ್ಲಿ ದಕ್ಷಿಣ ಕರ್ನಾಟಕದವರಿದ್ದಾರೆ ಈ ಹಿನ್ನೆಲೆ ಅಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕು ಎಂಬುದು ಎಲ್ಲರ ಬಯಕೆ. ಯಾವ ಜಾತಿ, ಸಮುದಾಯಕ್ಕೆ ಆದ್ಯತೆ ನೀಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ.
ಉತ್ತರ ಕರ್ನಾಟಕಕ್ಕೆ ಅಧ್ಯಕ್ಷ ಸ್ಥಾನ ನೀಡಬೇಕು ಸೇರಿದಂತೆ ನಾನಾ ಸಮೀಕರಣ ನಡೆಸಿ ಸಿದ್ಧರಾಮಯ್ಯ ನನ್ನ ಹೆಸರು ಶಿಫಾರಸು ಮಾಡಿದ್ದಾರೆ ಎಂದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುವ ಸಾಮರ್ಥ್ಯ ನನಗಿದೆ. ಪ್ರತಿಪಕ್ಷದ ನಾಯಕನ ಸ್ಥಾನದ ಆಕಾಂಕ್ಷಿ ನಾನಲ್ಲ. ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಸಿದ್ಧರಾಮಯ್ಯ ಅವರೇ ಸೂಕ್ತ ಎಂಬುದು ನಾನು ಸೇರಿದಂತೆ ಎಲ್ಲರ ಬಯಕೆಯಾಗಿದೆ ಎಂದರು.
ಸರ್ಕಾರ ಅಸ್ಥಿರಗೊಳಿಸಲು ಕಾಂಗ್ರೆಸ್ ಪ್ರಯತ್ನಿಸಲ್ಲ. ತಾನಾಗಿಯೇ ಉರುಳುದರೆ ಏನೂ ಮಾಡಲು ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.