ಕೃಷಿ ಮೇಳ ಯಶಸ್ಸಿಗೆ ಸಹಕರಿಸಿ

200 ಮಳಿಗೆ ತೆರೆಯಲು ಅವಕಾಶಕೃಷಿಗೋಷ್ಠಿ -ಪ್ರಾತ್ಯಕ್ಷಿಕೆ ಆಯೋಜನೆ

Team Udayavani, Jan 26, 2020, 6:20 PM IST

26-January-28

ಹೊನ್ನಾಳಿ: ಲಿಂ.ಒಡೆಯರ್‌ ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ ಮತ್ತು ಲಿಂ.ಒಡೆಯರ್‌ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳ ಪುಣ್ಯಾರಾಧನೆ ಕಾರ್ಯಕ್ರಮದ ನಿಮಿತ್ತ ಮಾ.5, 6 ಮತ್ತು 7ರಂದು ಮೂರು ದಿನಗಳ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಕೃಷಿ
ಮೇಳ ಯಶಸ್ವಿಯಾಗಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ಹಿರೇಕಲ್ಮಠದ ಸ್ಥಿರ ಪಟ್ಟಾಧ್ಯಕ್ಷರು ಚನ್ನಪ್ಪಸ್ವಾಮಿ ವಿದ್ಯಾಪೀಠದ ಅಧ್ಯಕ್ಷ ಡಾ.ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದರು.

ರಾಜ್ಯಮಟ್ಟದ ಕೃಷಿ ಮೇಳ ಹಮ್ಮಿಕೊಂಡಿರುವ ಪ್ರಯುಕ್ತ ಹಿರೇಕಲ್ಮಠದಲ್ಲಿ ಹಮ್ಮಿಕೊಂಡಿದ್ದ ತಾಲೂಕು, ವಿವಿಧ ಜಿಲ್ಲೆಗಳ ಅಧಿಕಾರಿಗಳ ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ರಾಜ್ಯಮಟ್ಟದ ಕೃಷಿ ಮೇಳ ಇದಾಗಿರುವುದರಿಂದ ರಾಜ್ಯ 30 ಜಿಲ್ಲೆಗಳ ಕೃಷಿ ಅಧಿ ಕಾರಿಗಳು ಸೇರಿದಂತೆ ಇತರ ಅಧಿಕಾರಿಗಳು ಸಲಹೆ ಸಹಕಾರ ನೀಡಿದರೆ ಕೃಷಿ ಮೇಳ ಯಶಸ್ವಿ ಕಾಣುತ್ತದೆ ಎಂದು ಹೇಳಿದರು.

ಕೃಷಿ ಮೇಳದಿಂದ ನಮ್ಮ ರೈತರ ಆದಾಯ ಹೆಚ್ಚಾಗಿ ರೈತರು ನೆಮ್ಮದಿ ಬದುಕು ಕಟ್ಟಿಕೊಂಡರೆ ಸಾರ್ಥಕವಾಗುತ್ತದೆ. ರೈತ ಸಂತಸದಿಂದಿದ್ದರೆ ಮಾತ್ರ ಸರ್ವರೂ ಸುಖದಿಂದ ಬಾಳಲು ಸಾಧ್ಯ ಎಂದು ನುಡಿದರು. ಕೃಷಿ ಮೇಳದಲ್ಲಿ 200 ಮಳಿಗೆಗೆ ಅವಕಾಶ ಮಾಡಿಕೊಡಲಾಗಿದೆ. ಇದರ
ಸದುಪಯೋಗವನ್ನು ರಾಜ್ಯ ವಿವಿಧ ಜಿಲ್ಲೆಗಳ ಪ್ರದರ್ಶನಕಾರರು ಆಗಮಿಸಿ ಸದುಪಯೋಗ ಮಾಡಿಕೊಳ್ಳಬೇಕು. ಒಂದು ಮಳಿಗೆಗೆ ಕೇವಲ ರೂ.3 ಸಾವಿರ ಮೂರು ದಿನಕ್ಕೂ ನಿಗದಿ ಮಾಡಲಾಗಿದೆ. ಕೃಷಿಗೆ ಸಂಬಂಧಪಟ್ಟ ಉಪಕರಣಗಳಿಗೆ ಮಳಿಗೆಗಳಲ್ಲಿ ಪ್ರದರ್ಶನಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಇಲಾಖಾಧಿಕಾರಿಗಳು ಸ್ಟಾಲ್‌ ಗಳ ಸ್ಥಾಪನೆಗೆ ತಮ್ಮ ಜಿಲ್ಲೆಗೆ ಆಸಕ್ತ ರೈತರಿಗೆ ಹಾಗೂ ಇತರರಿಗೆ ತಿಳಿಸಬೇಕು ಎಂದು ಹೇಳಿದರು.

ಕೃಷಿ ಮೇಳದ ಅಂಗವಾಗಿ ವಿವಿಧ ಸ ³ರ್ಧೆ, ಪ್ರಾತ್ಯಕ್ಷಿಕೆ, ಕೃಷಿ ಗೋಷ್ಠಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಎಲ್ಲಾ ಕಾರ್ಯಕ್ರಮಗಳ ಯಶಸ್ವಿಗೆ ಕಾರಣೀಕರ್ತರಗಾಬೇಕು ಎಂದು ಹೇಳಿದರು.

ತಹಶೀಲ್ದಾರ್‌ ತುಷಾರ್‌ ಬಿ.ಹೊಸೂರು, ದಾವಣಗೆರೆ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದುಗಲ್‌, ಹೊನ್ನಾಳಿ ಕೃಷಿ ಇಲಾಖೆ ಉಪ ನಿರ್ದೇಶಕಿ ಹಂಸವೇಣಿ, ರಾಣಿಬೆನ್ನೂರು ಕೃಷಿ ಇಲಾಖೆ ಉಪ ನಿರ್ದೇಶಕಿ ಜಿ.ಎಸ್‌. ಸ್ಫೂರ್ತಿ, ತಾಲೂಕು ವೈದ್ಯಾ ಧಿಕಾರಿ ಡಾ.ಕೆಂಚಪ್ಪಬಂತಿ, ಪಪಂ ಮುಖ್ಯಾ ಧಿಕಾರಿ ಎಸ್‌.ಆರ್‌. ವೀರಭದ್ರಯ್ಯ, ಹೊನ್ನಾಳಿ ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಿ.ಟಿ. ಸುರೇಶ್‌, ಬಿಇಒ ಜಿ.ಇ. ರಾಜೀವ್‌ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಕೃಷಿ ಮೇಳದ ಬಗ್ಗೆ ಸಲಹೆ ನೀಡಿದರು. ಪಪಂ ಸದಸ್ಯ ಸುರೇಶ್‌ ಹೊಸಕೇರಿ, ಪ್ರಾಂಶುಪಾಲ ಡಾ.ಕೊಟ್ರೇಶ್‌ ಉತ್ತಂಗಿ ಇದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.