ದೈವೀ ಸಂಪತ್ತು ನಮ್ಮದಾಗಲಿ: ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Team Udayavani, Jan 27, 2020, 5:46 AM IST

26KINNI1

ಕಟೀಲು: ಮಠ ಮಂದಿರಗಳಿಗೆ ಭೇಟಿ ನೀಡಿ ಪ್ರಾರ್ಥಿಸಿ ದೇವರ ಎದುರು ನಿರ್ದೋಷಿಗಳಾಗಬೇಕು. ಆ ಮೂಲಕ ದೈವೀ ಸಂಪತ್ತು ನಮ್ಮದಾಗಲಿ, ಅಸುರತ್ವ ದೂರವಾಗಲಿ ಎಂದು ಮೂಡುಬಿದಿರೆ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಹೇಳಿದರು.

ರವಿವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ಭ್ರಾಮರೀ ಸಭಾಂಗಣದಲ್ಲಿ ಸಂಪನ್ನಗೊಂಡ ಐದನೇ ದಿನದ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ನಮ್ಮ ಸನಾತನ ಪರಂಪರೆಯಲ್ಲಿ ಧರ್ಮವನ್ನು ರಕ್ಷಿಸಬೇಕಾದರೆ ದೇವತಾರಾಧನೆ ಅನೂಚಾನವಾಗಿ ನಡೆಯಬೇಕು. ದೇವಾಲಯಗಳು ಧರ್ಮಪ್ರಜ್ಞೆಯನ್ನು ಜಾಗೃತಗೊಳಿ
ಸುವ ಬಲು ದೊಡ್ಡ ಕೆಲಸ ಮಾಡುತ್ತಿವೆ ಎಂದು ಸ್ವಾಮೀಜಿ ನುಡಿದರು.

ಬೆಂಗಳೂರಿನ ಚಿಂತಕಿ ಅಮೃತಾ ಉಮೇಶ್‌ ಭಕ್ತಿ ಮತ್ತು ಆರಾಧನೆ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಮಂಗಳೂರು ಡೊಂಗರಕೇರಿ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ವರದರಾಯ ನಾಗ್ವೇಕರ್‌ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ವಿನಯಕುಮಾರ ಸೊರಕೆ, ಕಾಸರಗೋಡು ಬೇಳ ಕುಮಾರಮಂಗಲ ದೇವಸ್ಥಾನದ ತಂತ್ರಿ ವಿಷ್ಣು ಆಸ್ರ, ಮಂಗಳೂರು ಸಹಾಯಕ ಆಯುಕ್ತ ಮದನ್‌ ಮೋಹನ್‌, ವಿಶ್ವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ , ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕೆಮ್ಮಿಂಜೆ ನಾಗೇಶ ತಂತ್ರಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ವಸಂತ ಕೆದಿಲಾಯ, ಉಡುಪಿ ಸಾಯಿರಾಧ ಗ್ರೂಪ್‌ನಮುಖ್ಯಸ್ಥ ಮನೋಹರ ಶೆಟ್ಟಿ,ಮುಂಬಯಿ ಬಂಟರ ಅಸೋಸಿಯೇಶನ್‌ ಅಧ್ಯಕ್ಷ ಸುಭಾಸ್‌ ಶೆಟ್ಟಿ ಬಜಪೆ, ಬೆಂಗಳೂರಿನ ಉದ್ಯಮಿ ನೆಲಮಂಗಲ ಶ್ರೀನಿವಾಸ, ಮುಂಬಯಿಯ ಉದ್ಯಮಿ ಸಂಜೀವ ಶೆಟ್ಟಿ, ಕಸಾಪ‌ ಮಾಜಿ ರಾಜ್ಯ ಅಧ್ಯಕ್ಷ ಹರಿಕೃಷ್ಣ ಪುನರೂರು, ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಮೊಕ್ತೇಸರ ವಾಸುದೇವ ರಾವ್‌, ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ, ಮಂಗಳೂರು ಅತ್ತಾವರ ಚಕ್ರಪಾಣಿ ಗೋಪೀನಾಥ ದೇವಸ್ಥಾನದ ಗೌರವಾಧ್ಯಕ್ಷ ರತೀಂದ್ರನಾಥ್‌, ಉದ್ಯಮಿ ಶ್ರೀಪತಿ ಭಟ್‌, ಜೋತಿಷಿ ಮಧೂರು ರಂಗನಾರಾಯಣ ಭಟ್ಟ, ಸುಧೀರ್‌ ಶೆಟ್ಟಿ ಕೊಡೆತ್ತೂರುಗುತ್ತು, ಕಟೀಲುಗ್ರಾ.ಪಂ. ಅಧ್ಯಕ್ಷೆ ಗೀತಾ ಪೂಜಾರಿ¤ ಉಪಸ್ಥಿತರಿದ್ದರು. ಕಟೀಲು ದೇವಸ್ಥಾನದ ಅರ್ಚಕ ಶ್ರೀ ಹರಿನಾರಾಯಣದಾಸ ಆಸ್ರಣ್ಣ ಸ್ವಾಗತಿಸಿದರು. ವಿದ್ವಾನ್‌ ಪಂಜ ಭಾಸ್ಕರ ಭಟ್‌ ಮಾತನಾಡಿದರು. ಜಿ.ಪಂ. ಸದಸ್ಯ ಜರ್ನಾದನ ಗೌಡ ವಂದಿಸಿದರು. ರಾಜೇಂದ್ರ ಪ್ರಸಾದ್‌ ಎಕ್ಕಾರು ನಿರೂಪಿಸಿದರು.

ಧಾರ್ಮಿಕ ಕಾರ್ಯಕ್ರಮಗಳು
ಶ್ರೀ ದೇಗುಲದಲ್ಲಿ ರವಿವಾರ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಧಾರಾಶುದ್ಧಿ-ಸಾಮವೇದ ಮತ್ತು ಅಥರ್ವವೇದ ಪಾರಾಯಣ, ಅವಗಾಹ ಮತ್ತು ಸೇಕ ಶುದ್ಧಿ, ರುದ್ರಯಾಗ, ಶಾಸ್ತ್ರ ಬಿಂಬಶುದ್ಧಿ, ಮನ್ಯುಸೂಕ್ತಹೋಮ, ಪಂಚ ದುರ್ಗಾ ಹೋಮ, ರಾತ್ರಿಸೂಕ್ತ ಹೋಮ, ಒಳಗಿನ ನಾಗ ಸನ್ನಿಧಿಯಲ್ಲಿ ಆಶ್ಲೇಷಾ ಬಲಿ ಜರಗಿದವು. ಭ್ರಾಮರೀವನದಲ್ಲಿ ಅಂಗಾರಕಯಾಗ, ಸಹಸ್ರ ಚಂಡಿಕಾ ಸಪ್ತಶತೀ ಪಾರಾಯಣ, ಕೋಟಿ ಜಪ ಯಜ್ಞ, ನವಗ್ರಹವನ, ರಾಶಿವನದಲ್ಲಿ ಆಯಾ ವೃಕ್ಷ ಗಳ ಸ್ಥಾಪನೆ ಜರಗಿತು. ಸಂಜೆ 5ರಿಂದ ವನದುರ್ಗಾ ಪೂಜೆ, ದುರ್ಗಾ ಮಾರ್ಕಂಡೇಯ ಪ್ರೋಕ್ತಪ್ರಾಯ ಶ್ಚಿತ್ತ ಹೋಮಗಳು, ಉತ್ಸವ ಬಲಿ, ಭ್ರಾಮರೀವನದಲ್ಲಿ ಕೋಟಿ ಜಪಯಜ್ಞ, ಸಹಸ್ರಚಂಡಿಕಾ ಸಪ್ತಶತೀ ಪಾರಾಯಣ ಜರಗಿದವು.

90 ಸಹಸ್ರ ಭಕ್ತರ ಭೇಟಿ
ರವಿವಾರ ರಜಾದಿನವಾಗಿದ್ದು ಸುಮಾರು 90 ಸಾವಿರಕ್ಕೂ ಅಧಿಕ ಜನರು ದೇವಸ್ಥಾನಕ್ಕೆ ಭೇಟಿ, ದೇವಿಯ ದರ್ಶನ ಪಡೆದರು. ಸಾವಿರಾರು ಮಂದಿ ಅನ್ನಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.