ಮಂಗಳೂರಿನಲ್ಲಿ ಇಂದು ಜನಜಾಗೃತಿ ಸಮಾವೇಶ

ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ; ರಕ್ಷಣಾ ಸಚಿವ ರಾಜನಾಥ ಸಿಂಗ್‌ ಭಾಷಣ

Team Udayavani, Jan 27, 2020, 6:00 AM IST

2601MLR70

ಮಂಗಳೂರು: ಸಿಎಎ ಜಾರಿಗೆ ತಂದಿರುವ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರಿಗೆ ಅಭಿನಂದನೆ ಸಲ್ಲಿಸುವ ಹಾಗೂ ಕಾಯ್ದೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ದ.ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜನಜಾಗೃತಿ ಸಮಾವೇಶವನ್ನು ಜ.27ರಂದು ಕೂಳೂರು ಗೋಲ್ಡ್‌ಪಿಂಚ್‌ ಮೈದಾನದಲ್ಲಿ ಆಯೋಜಿಸಲಾಗಿದ್ದು, ಸರ್ವ ಸಿದ್ಧತೆ ನಡೆಸಲಾಗಿದೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಮುಖ್ಯ ಭಾಷಣ ಮಾಡಲಿದ್ದು, ದ.ಕ. ಮತ್ತು ಉಡುಪಿ ಜಿಲ್ಲೆಯ ಲಕ್ಷಕ್ಕೂ ಅಧಿಕ ಮಂದಿ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಶಾಸಕರಾದ ವೇದವ್ಯಾಸ ಕಾಮತ್‌ ಮತ್ತು ಸಂಜೀವ ಮಠಂದೂರು ರವಿವಾರ ಸಮಾವೇಶ ಸ್ಥಳಕ್ಕೆ ಭೇಟಿ ನೀಡಿ, ಸಿದ್ಧತೆಗಳ ಬಗ್ಗೆ ಪರಿಶೀಲಿಸಿದರು. ಪೊಲೀಸ್‌ ಅಧಿಕಾರಿಗಳಿಂದ ಭದ್ರತೆಯ ಮಾಹಿತಿ ಪಡೆದುಕೊಂಡರು. ಶಾಸಕ ಡಾ| ಭರತ್‌ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ, ಬಿಜೆಪಿ ಉಡುಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಪ್ರಮುಖರಾದ ಅರುಣ್‌ ಕುಮಾರ್‌, ಜಗದೀಶ ಶೇಣವ, ಸಂದೇಶ ಶೆಟ್ಟಿ ಉಪಸ್ಥಿತರಿದ್ದರು.

ದ.ಕ., ಉಡುಪಿಯ ಎಲ್ಲ ಬೂತ್‌ಗಳಿಂದ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಪ್ರತೀ ಬೂತ್‌ನಿಂದ ತಲಾ 100 ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಉದ್ಯಮಿ ಗಳು, ವ್ಯಾಪಾರಸ್ಥರು ಮಧ್ಯಾಹ್ನದ ಬಳಿಕ ವ್ಯಾಪಾರ ಸ್ಥಗಿತಗೊಳಿಸಿ ಭಾಗ ವಹಿಸುವಂತೆ ಮನವಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸುದ್ದಿಗಾರರ ಜತೆಗೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್‌, ಸಿಎಎ ಬಗ್ಗೆ ಜನರಿಗೆ ಅರಿವು ಮೂಡಿಸುವ ಮತ್ತು ಕೆಲವರ ಅಪನಂಬಿಕೆಯನ್ನು ದೂರಮಾಡುವ ನಿಟ್ಟಿನಲ್ಲಿ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶ ಅಭೂತಪೂರ್ವವಾಗಿ ಸಾಕಾರಗೊಳ್ಳಲಿದೆ ಎಂದರು.

ಪೊಲೀಸ್‌ ಆಯುಕ್ತ ಡಾ| ಹರ್ಷ ರವಿವಾರ ಸ್ಥಳಕ್ಕೆ ಭೇಟಿ ನೀಡಿ ಭದ್ರತೆಯ ಪರಿಶೀಲನೆ ನಡೆಸಿದರು.

ಬಿಗಿ ಬಂದೋಬಸ್ತ್; ಕಟ್ಟೆಚ್ಚರ
ಸಮಾವೇಶ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವ ಗೋಲ್ಡ್‌ ಫಿಂಚ್‌ ಮೈದಾನ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸ್‌ ಇಲಾಖೆ ವ್ಯಾಪಕ ಬಂದೋಬಸ್ತ್ ಕೈಗೊಂಡಿದೆ. ಪೊಲೀಸ್‌ ಆಯುಕ್ತ ಡಾ| ಹರ್ಷ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ, ನಗರ ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕೆಎಸ್‌ಆರ್‌ಪಿ ಸೇರಿದಂತೆ ವಿವಿಧ ಶ್ರೇಣಿಯ ಪೊಲೀಸರು ಭದ್ರತೆಯ ಉಸ್ತುವಾರಿಯಲ್ಲಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ನಗರದ ಆಯಕಟ್ಟಿನ ಪ್ರದೇಶಗಳಲ್ಲಿಯೂ ಭದ್ರತೆ ಏರ್ಪಡಿಸಲಾಗಿದೆ. ಸಮಾವೇಶ ನಡೆಯುವ ವ್ಯಾಪ್ತಿಯಲ್ಲಿ ಬಾಂಬ್‌ ನಿಷ್ಕ್ರಿಯ ದಳದ ತಂಡ ತಪಾಸಣೆ ನಡೆಸುತ್ತಿದೆ.

ಮಧ್ಯಾಹ್ನ 3ರಿಂದ ಆರಂಭ
ಮಧ್ಯಾಹ್ನ 3 ಗಂಟೆಗೆ ಸಮಾವೇಶ ಆರಂಭಗೊಳ್ಳಲಿದೆ. ರಾಜನಾಥ್‌ ಸಿಂಗ್‌ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲು, ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ, ಡಿ.ವಿ. ಸದಾನಂದ ಗೌಡ, ಸಂಸದರಾದ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿಯ ಎಲ್ಲ ಬಿಜೆಪಿ ಶಾಸಕರು, ವಿ.ಪರಿಷತ್‌ ಸದಸ್ಯರು ಭಾಗವಹಿಸಲಿದ್ದಾರೆ.

ಹೆದ್ದಾರಿ ಸಂಚಾರ ಮಾರ್ಪಾಡು
ಮಂಗಳೂರು: ಜ. 27ರ ಬೆಳಗ್ಗೆ 9ರಿಂದ ರಾತ್ರಿ 9ರ ವರೆಗೆ ಹೆದ್ದಾರಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.
 ಸಮಾವೇಶಕ್ಕೆ ಬರುವ ವಾಹನ ಸಮಾವೇಶ ಸ್ಥಳದಲ್ಲಿ ನಿಗದಿಪಡಿಸಿದ ಸ್ಥಳದಲ್ಲಿ ನಿಲುಗಡೆ ಮಾಡಬೇಕು.
 ಉಡುಪಿಯಿಂದ ಬೆಂಗಳೂರು ಕಡೆಗೆ ಪಡುಬಿದ್ರಿ-ಕಾರ್ಕಳ-ಧರ್ಮ ಸ್ಥಳ- ಶಿರಾಡಿಯಾಗಿ ಸಂಚರಿಸಬೇಕು.
 ಬೆಂಗಳೂರಿನಿಂದ ಮಂಗಳೂರು ಕಡೆಗೆ ಮೆಲ್ಕಾರ್‌-ಬಿ.ಸಿ. ರೋಡ್‌ ವಯಾ ಕೊಣಾಜೆ-ತೊಕ್ಕೊಟ್ಟು ಮಾರ್ಗವಾಗಿ ಸಂಚರಿಸಬೇಕು.
 ಬಿ.ಸಿ. ರೋಡ್‌ನಿಂದ ಮಂಗಳೂರು ಕಡೆಗೆ ಬರುವವರು ಪೊಳಲಿ ಕೈಕಂಬ ಮಾರ್ಗವಾಗಿ ಸಂಚರಿಸಬೇಕು.
 ಬಿ.ಸಿ. ರೋಡ್‌, ಪಂಪ್‌ವೆಲ್‌ ಕಡೆಯಿಂದ ಉಡುಪಿ ಕಡೆಗೆ ನಂತೂರು-ಕೈಕಂಬ-ಮೂಡುಬಿದಿರೆ ಮಾರ್ಗವಾಗಿ ಸಂಚರಿಸಬೇಕು.
 ಕೊಟ್ಟಾರಚೌಕಿ, ಮಂಗಳೂರು ನಗರದಿಂದ ಉಡುಪಿ ಕಡೆಗೆ ಕೆಪಿಟಿ-ನಂತೂರು-ಮೂಡುಬಿದಿರೆ ಮಾರ್ಗವಾಗಿ ಸಂಚರಿಸಬೇಕು.
ಗೋಲ್ಡ್‌ಫಿಂಚ್‌ ಸಿಟಿ ರಾ.ಹೆ. 66ರ ಪಕ್ಕದಲ್ಲೇ ಇದೆ. ಹಾಗಾಗಿ ಹೆದ್ದಾರಿ ಸಹಿತ ಜಿಲ್ಲೆಯ ಪ್ರಮುಖ ರಸ್ತೆಗಳು ಮತ್ತು ಮಂಗಳೂರು ನಗರಕ್ಕೆ ಹೊಂದಿಕೊಂಡ ಪ್ರಮುಖ ರಸ್ತೆಗಳಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ವಾಹನ ದಟ್ಟಣೆ, ಸಂಚಾರ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.