ನೈಋತ್ಯ ರೈಲ್ವೆ ಗಳಿಕೆ 4,341 ಕೋಟಿ

Team Udayavani, Jan 27, 2020, 11:48 AM IST

huballi-tdy-2

ಹುಬ್ಬಳ್ಳಿ: ಪ್ರಸ್ತುತ ವಿತ್ತೀಯ ವರ್ಷದ ಮೂರನೇ ತ್ತೈಮಾಸಿಕದ ಕೊನೆಯಲ್ಲಿ ನೈಋತ್ಯ ರೈಲ್ವೆಯ ಪ್ರದರ್ಶನ ಉತ್ತಮವಾಗಿದ್ದು, 4,341 ಕೋಟಿ ರೂ. ಗಳಿಕೆ ಮಾಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 22 ಕೋಟಿ ರೂ. ಹೆಚ್ಚು ಗಳಿಕೆಯಾಗಿದೆ ಎಂದು ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಅಜಯಕುಮಾರ ಸಿಂಗ್‌ ಹೇಳಿದರು.

ಗಣರಾಜ್ಯೋತ್ಸವ ನಿಮಿತ್ತ ರೈಲ್ವೆ ಕ್ರೀಡಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಈ ಅವಧಿಯಲ್ಲಿ 27 ಮಿಲಿಯನ್‌ ಟನ್‌ ಸರಕು ಸಾಗಣೆ ಮಾಡಲಾಗಿದೆ. ಕಳೆದ ವರ್ಷದ ಸರಕು ಸಾಗಣೆಗಿಂತ ಇದು ಶೇ.1 ಹೆಚ್ಚಾಗಿದೆ. ಈವರೆಗೆ ಪ್ರತಿದಿನ 5 ಲಕ್ಷ ಪ್ರಯಾಣಿಕರು ನೈಋತ್ಯ ರೈಲ್ವೆಯ ರೈಲುಗಳಲ್ಲಿ ಪ್ರಯಾಣಿಸಿದ್ದಾರೆ. ಪ್ರಸ್ತುತ ವರ್ಷದಲ್ಲಿ 5 ಜೋಡಿ ಹೊಸ ರೈಲುಗಳು ಹಾಗೂ 15 ಜೋಡಿ ತತ್ಕಾಲ್‌ ಸ್ಪೇಷಲ್‌ ರೈಲುಗಳನ್ನು ಪರಿಚಯಿಸಲಾಗಿದೆ. ಅಲ್ಲದೇ 3 ಜೋಡಿ ರೈಲುಗಳ ಸೇವೆ ವಿಸ್ತರಿಸಲಾಗಿದೆ. ಹಲವಾರು ಅಭಿವೃದ್ಧಿ ಕಾಮಗಾರಿ ಹಾಗೂ ಡಬ್ಲಿಂಗ್‌ ಕಾಮಗಾರಿಗಳ ಹೊರತಾಗಿಯೂ ಸಮಯ ಪರಿಪಾಲನೆಯಲ್ಲಿ ನೈಋತ್ಯ ರೈಲ್ವೆ ಉತ್ತಮ ಸಾಧನೆ ಮಾಡಿದೆ.

ಈ ವರ್ಷ ಶಾಶ್ವತ ವೇಗ ತಡೆಗಳನ್ನು ಮುಕ್ತಗೊಳಿಸಲಾಗಿದೆ. 408 ಕಿಮೀ ವ್ಯಾಪ್ತಿಯಲ್ಲಿ ವಿಭಾಗೀಯ ರೈಲು ವೇಗದ ಮಟ್ಟ ಹೆಚ್ಚಿಸಲಾಗಿದೆ ಎಂದರು.266 ಮುಖ್ಯ ಲೈನ್‌ ಡಬ್ಲಿಂಗ್‌ ಗುರಿ ಹೊಂದಿದ್ದು, ಈವರೆಗೆ 106 ಕಿಮೀ ಕಾಮಗಾರಿ ಪೂರ್ಣಗೊಂಡಿದೆ. ಅಲ್ಲದೇ 76 ಕಿಮೀ ಇಲೆಕ್ಟ್ರಿಫಿಕೇಶನ್‌ ಕಾರ್ಯ ಪೂರ್ಣಗೊಂಡಿದ್ದು, ವರ್ಷಾಂತ್ಯಕ್ಕೆ ಒಟ್ಟು 390 ಕಿಮೀ ಎಲೆಕ್ಟ್ರಿಫಿಕೇಶನ್‌ ಮಾಡುವ ಗುರಿ ಹೊಂದಲಾಗಿದೆ.

ಪ್ರಸಕ್ತ ವಿತ್ತೀಯ ವರ್ಷದಲ್ಲಿ 3 ರೋಡ್‌ ಓವರ್‌ಬ್ರಿಡ್ಜ್ಗಳು, 67 ರೋಡ್‌ ಅಂಡರ್‌ಬ್ರಿಡ್ಜ್ಗಳು/ ಸಬ್‌ವೇ ನಿರ್ಮಿಸಲಾಗಿದೆ. 60 ಮಾನವಸಹಿತ ಗೇಟ್‌ಗಳನ್ನು ಬಂದ್‌ ಮಾಡಲಾಗಿದೆ. 9 ನಿಲ್ದಾಣಗಳಲ್ಲಿ ವಿಡಿಯೋ ಸರ್ವೆಯಲೆನ್ಸ್‌ ಸಿಸ್ಟಮ್‌ ಅಳವಡಿಸಿದೆ. 308 ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೇವೆ ಒದಗಿಸಲಾಗಿದೆ. ಹುಬ್ಬಳ್ಳಿ ಡಿವಿಜನ್‌ನ ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಹಾಗೂ ವಾಸ್ಕೋಡಗಾಮ ನಿಲ್ದಾಣಗಳು ಇಂಟಿಗ್ರೇಟೆಡ್‌ ಮ್ಯಾನೇಜ್‌ಮೆಂಟ್‌ ಸಿಸ್ಟಮ್‌ ಪ್ರಮಾಣಪತ್ರ ಪಡೆದುಕೊಂಡಿವೆ.

ನವೆಂಬರ್‌ ಕೊನೆವರೆಗೆ 4663 ಗ್ರೂಪ್‌ “ಸಿ’ ಹಾಗೂ ಗ್ರೂಪ್‌ “ಡಿ’ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗಿದೆ ಎಂದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನೈಋತ್ಯ ರೈಲ್ವೆ ಮಹಿಳಾ ಕ್ಷೇಮಾಭಿವೃದ್ಧಿ ಸಂಸ್ಥೆಯ ವತಿಯಿಂದ ರೈಲ್ವೆ ಆಸ್ಪತ್ರೆಗೆ ವಾಟರ್‌ ಪ್ಯುರಿಫಾಯರ್‌ ನೀಡಲಾಯಿತು. ಸುಜಾತಾ ಸಿಂಗ್‌, ಪಿ.ಕೆ. ಮಿಶ್ರಾ ಇದ್ದರು.

ಟಾಪ್ ನ್ಯೂಸ್

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.