ಮಾರ್ಗದರ್ಶನ ಜತೆಗೆ ಆತ್ಮ ವಿಶ್ವಾಸ ಅಗತ್ಯ


Team Udayavani, Jan 27, 2020, 2:58 PM IST

hv-tdy-2

ಹಿರೇಕೆರೂರ: ಸಾಧನೆ ಮಾಡಲು ಜ್ಞಾನ ಮತ್ತು ಮಾರ್ಗದರ್ಶನದ ಜತೆಗೆ ಆತ್ಮವಿಶ್ವಾಸ ಅತೀ ಅವಶ್ಯ. ಮಕ್ಕಳಲ್ಲಿ ಆತ್ಮವಿಶ್ವಾಸ ಇಮ್ಮಡಿಗೊಳಿಸಿ ಅವರ ಸಾಧನೆಗೆ ಸ್ಫೂರ್ತಿ ತುಂಬಬೇಕು ಎಂದು ನಟ ವಿಜಯರಾಘವೇಂದ್ರ ಹೇಳಿದರು.

ತಾಲೂಕಿನ ಬಾಳಂಬೀಡ ಗ್ರಾಮದ ಕೌರವ ಶಿಕ್ಷಣ ಸಂಸ್ಥೆಯಲ್ಲಿ ನಡೆದ 11ನೇ ವರ್ಷದ ಅಕ್ಷರ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರಲ್ಲೂ ಗುರಿ ಸಾಧಿಸುವ ಛಲವಿರಬೇಕು. ಸಾಧನೆ ಮಾಡುವ ಆತ್ಮವಿಶ್ವಾಸವಿರಬೇಕು. ಶಿಕ್ಷಣದಿಂದ ಸಮಾಜದಲ್ಲಿ ಎಲ್ಲವನ್ನೂ ಪಡೆಯಲು ಸಾಧ್ಯ. ಸತತ ಪರಿಶ್ರಮ, ಏಕಾಗ್ರತೆಯಿಂದ ಶಿಕ್ಷಣ ಪಡೆದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಹುದ್ದೆ ಅಲಂಕರಿಸುವ ಜತೆಗೆ ಸಂಸ್ಕಾರದ ಗುಣಗಳನ್ನು ಬೆಳೆಸಿಕೊಳ್ಳಿ. ಗುರು ಹಿರಿಯರಿಗೆ ಗೌರವ ನೀಡುವ ಮೂಲಕ ಸಮಾಜದಲ್ಲಿ ಗೌರವಯುತವಾಗಿ ಜೀವನ ನಡೆಸುವಂತೆ ಕರೆ ನೀಡಿದರು.

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಮಾತನಾಡಿ, ಗುರು ಹಿರಿಯರ ಮಾರ್ಗದರ್ಶನದಲ್ಲಿ ಶಿಕ್ಷಣ ಪಡೆದು ಪ್ರತಿಭಾವಂತರಾಗಬೇಕು. ವಿದ್ಯಾರ್ಥಿ ದೆಸೆಯಿಂದಲೇ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಸಮಾಜ ಕಟ್ಟುವ ಕೆಲಸ ಮಾಡಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕೌರವ ಶಿಕ್ಷಣ ಸಂಸ್ಥೆ ಅಧ್ಯಕ್ಷ, ಶಾಸಕ ಬಿ.ಸಿ. ಪಾಟೀಲ, ಪಾಲಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಪಾಲಕರು ಮತ್ತು ಪೋಷಕರ ಪಾತ್ರವೂ ಅತ್ಯಮೂಲ್ಯವಾಗಿದ್ದು, ಅವರ ನಿತ್ಯದ ಶಾಲಾ ಚಟುವಟಿಕೆಗಳ ಮೇಲೆ ನಿಗಾ ಇರಿಸಿಕೊಂಡು ಶೈಕ್ಷಣಿಕ ಪ್ರಗತಿಗೆ ಶ್ರಮಿಸುವ ಜತಗೆ ಉತ್ತಮ ಸಂಸ್ಕಾರ ನೀಡುವ ಮೂಲಕ ಅವರ ಭವಿಷ್ಯ ಉಜ್ವಲಗೊಳಿಸಬೇಕು ಎಂದರು.

ಸಿಇಎಸ್‌ ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್‌.ಎಸ್‌.ಪಾಟೀಲ, ಕೌರವ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವನಜಾ ಪಾಟೀಲ, ಉಪಾಧ್ಯಕ್ಷೆ ಸೃಷ್ಟಿ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್‌.ಸಿದ್ಧಲಿಂಗಪ್ಪ, ಐ.ಆರ್‌. ಲಮಾಣಿ, ಸಂಸ್ಥೆಯ ಆಡಳಿತಾಧಿಕಾರಿ ಅಂಬರೀಶ ಹೂಗಾರ, ಮುಖ್ಯಶಿಕ್ಷಕರಾದ ಶಾಂತೇಶ ಪೂಜಾರ, ಮಂಜುನಾಥ ವಂಟಕರ ಸೇರಿದಂತೆ ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು, ಪಾಲಕರು ಹಾಜರಿದ್ದರು. ನಂತರ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಟಾಪ್ ನ್ಯೂಸ್

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.