ಸಾವಯವ ಸಿರಿಧಾನ್ಯ ಮೇಳಕ್ಕೆ ಚಾಲನೆ

ತುಂತುರು-ಸೂಕ್ಷ್ಮ ಹನಿ ನೀರಾವರಿ-ಜಲ ಕೃಷಿ ಅಳವಡಿಕೆ ಪದ್ಧತಿ ಮಾಹಿತಿ ಲಭ್ಯ

Team Udayavani, Jan 27, 2020, 4:25 PM IST

27-Janauary-26

ಯಾದಗಿರಿ: ತೋಟಗಾರಿಕೆ, ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಸ್ಟೇಷನ್‌ ರಸ್ತೆ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಎರಡು ದಿನಗಳವರೆಗೆ ಹಮ್ಮಿಕೊಂಡಿರುವ ಫಲ ಪುಷ್ಪ ಪ್ರದರ್ಶನ ಹಾಗೂ ಸಾವಯವ ಸಿರಿಧಾನ್ಯ ಮೇಳಕ್ಕೆ ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ ರವಿವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಫಲ ಪುಷ್ಪ ಪ್ರದರ್ಶನ ಹಾಗೂ ಸಾವಯವ ಸಿರಿಧಾನ್ಯ ಮೇಳ ಅಚ್ಚುಕಟ್ಟಾಗಿ ಆಯೋಜಿಸಲಾಗಿದೆ. ಹೆಚ್ಚಿನ ರೈತರು ಪ್ರದರ್ಶನ ವೀಕ್ಷಿಸಬೇಕು. ತುಂತುರು ಮತ್ತು ಸೂಕ್ಷ್ಮ ಹನಿ ನೀರಾವರಿ ಹಾಗೂ ಜಲ ಕೃಷಿ ಅಳವಡಿಕೆ ಪದ್ಧತಿ ಕುರಿತು ತಾಂತ್ರಿಕವಾಗಿ ರೈತರಿಗೆ ಮಾಹಿತಿ ನೀಡಲಾಗುತ್ತಿದೆ. ಮೇಳದಲ್ಲಿ ಪ್ರದರ್ಶನಕ್ಕಿಡಲಾದ ಫಲಪುಷ್ಪಗಳನ್ನು ಬೆಳೆದ ಕ್ರಮಗಳ ಬಗ್ಗೆ ಮಾಹಿತಿ ಪಡೆದು ತಮ್ಮ ಜಮೀನುಗಳಲ್ಲಿ ಪ್ರಯೋಗ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಮಾತನಾಡಿ, ಫಲಪುಷ್ಪ ಪ್ರದರ್ಶನ ಮತ್ತು ಸಿರಿಧಾನ್ಯಗಳ ಮೇಳಗಳ ಕಾರ್ಯಕ್ರಮದಡಿ ಇಲಾಖೆ ವತಿಯಿಂದ ರೈತರು ಬೆಳೆದಿರುವ ವಿವಿಧ ನಮೂನೆ ಹೂವು, ಹಣ್ಣು ಮತ್ತು ತರಕಾರಿ ಪ್ರದರ್ಶಿಸಲಾಗುತ್ತಿದೆ. ಫಲ ಪುಷ್ಪ ಪ್ರದರ್ಶನ ಹಾಗೂ ಸಾವಯವ ಸಿರಿಧಾನ್ಯ ಮೇಳದಲ್ಲಿ ಹೂವಿನಿಂದ ನಿರ್ಮಿಸಿದ ಮಿನಿ ವಿಧಾನಸೌಧ ಗಮನ ಸೆಳೆಯುತ್ತಿದೆ.

ಜೇನು ಕೃಷಿ ಸೇರಿದಂತೆ ಇತ್ಯಾದಿ ಮಾಹಿತಿಯನ್ನೊಳಗೊಂಡ ಪ್ರದರ್ಶನವನ್ನು ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ವೀಕ್ಷಿಸಬೇಕು ಎಂದು ಸಲಹೆ ನೀಡಿದರು. ನರ್ಸರಿಯಲ್ಲಿ ಬೆಳೆದಿರುವ ವಿವಿಧ ಜಾತಿ ಹಣ್ಣು ಮತ್ತು ಅಲಂಕಾರಿಕ ಸಸ್ಯಗಳನ್ನು ಪ್ರದರ್ಶನ ಮತ್ತು ಸರ್ಕಾರ ನಿಗದಿಪಡಿಸಿದ ಅತಿ ಕಡಿಮೆ ದರದಲ್ಲಿ ಮಾರಾಟಕ್ಕಿಡಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ಬಾಬು ಹೇಳಿದರು.

ಜಿಪಂ ಉಪಾಧ್ಯಕ್ಷೆ ಗಿರಿಜಮ್ಮ ಎಸ್‌. ರೊಟ್ನಡಗಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ್‌ ಭಗವಾನ್‌ ಸೋನವಣೆ, ಸಹಾಯಕ ಆಯುಕ್ತ ಶಂಕರಗೌಡ ಎಸ್‌. ಸೋಮನಾಳ, ಜಂಟಿ ಕೃಷಿ ನಿರ್ದೇಶಕಿ ಆರ್‌. ದೇವಿಕಾ, ಕೃಷಿ ಇಲಾಖೆ ಉಪನಿರ್ದೇಶಕ ಸಮದ್‌ ಪಟೇಲ್‌ ಸೇರಿದಂತೆ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.