ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನ
Team Udayavani, Jan 28, 2020, 3:05 AM IST
ಮೂಡುಬಿದಿರೆ: ಹಿರಿಯ ಸಹಕಾರಿ ಧುರಿಣ, ಜೆಡಿಎಸ್ ನಾಯಕ, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ (81)ಯವರು ಸೋಮವಾರ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅಮರನಾಥ ಶೆಟ್ಟಿಯವರ ಪಾರ್ಥಿವ ಶರೀರದ ಅಂತ್ಯಕ್ರಿಯೆಗಳು ಪಾಲಡ್ಕದ ಮುಂಡ್ರುದೆಗುತ್ತುವಿನಲ್ಲಿ ಮಂಗಳವಾರ ಬೆಳಗ್ಗೆ 10.30ಕ್ಕೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಲಿವೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸಹಿತ ಹಲವು ಗಣ್ಯರು ಮೂಡುಬಿದಿರೆಯ ಅಮರನಾಥರ ಮನೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. 1972ರಿಂದ 2014ರ ವರೆಗೆ ಅವರು ಸತತವಾಗಿ ಮೂಡುಬಿದಿರೆ ಕ್ಷೇತ್ರದಿಂದ 10 ಬಾರಿ ಸ್ಪರ್ಧಿಸಿದ್ದರು. ರಾಮಕೃಷ್ಣ ಹೆಗಡೆ ಹಾಗೂ ಜೆ.ಎಚ್.ಪಟೇಲ್ ಸಂಪುಟದಲ್ಲಿ ಸಚಿವರಾಗಿ ಕೆಲಸ ನಿರ್ವಹಿಸಿದ್ದರು.
2018ರ ಚುನಾವಣೆಯಲ್ಲಿ ಸ್ಪರ್ಧಿಸಲು ಜಾತ್ಯತೀತ ಜನತಾದಳದಿಂದ ಅವಕಾಶ ದೊರೆತಿದ್ದರೂ ಹೊಸಬರಿಗೆ ಅವಕಾಶ ದೊರೆಯಲಿ ಎಂಬ ಮೇಲ್ಪಂಕ್ತಿ ಹಾಕಿಕೊಟ್ಟರು. ಅವಿಭಜಿತ ದ.ಕನ್ನಡ ಜಿಲ್ಲೆಯಲ್ಲಿ ಅವರು ಜನತಾ ಪರಿವಾರದ (ಸಂಸ್ಥಾ ಕಾಂಗ್ರೆಸ್, ಜನತಾ ಪಕ್ಷ, ಜನತಾದಳ) ಮುಖವಾಣಿಯೂ ಆಗಿದ್ದರು; ಐಕಾನ್ ಕೂಡ ಆಗಿದ್ದರು. ಸ್ವತ: ಕಲಾವಿದರಾಗಿದ್ದ ಶೆಟ್ಟಿ ಅವರು, ರಂಗಭೂಮಿಯಲ್ಲಿ ಹಾಗೂ ಪಗೆತ ಪುಗೆ ಮುಂತಾದ ಚಲನಚಿತ್ರಗಳಲ್ಲಿ ಅಭಿನಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Kannada Movie: ನಿರಂಜನ್ ಶೆಟ್ಟಿಯ ʼ31 ಡೇಸ್ʼ ಚಿತ್ರ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Udupi; ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನಿಲ್ ಕುಮಾರ್ ಆಕ್ರೋಶ
Water Price Hike: ಬಸ್ ದರ ಏರಿಕೆ ಬೆನ್ನಲ್ಲೇ ನೀರಿನ ಬೆಲೆ ಹೆಚ್ಚಳ ಬಿಸಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.