ಪೌರತ್ವ ಕಾಯ್ದೆ ರದ್ದತಿಗೆ ಪ್ರತಿಭಟನೆ
Team Udayavani, Jan 28, 2020, 2:39 PM IST
ಹುಕ್ಕೇರಿ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ವಿರೋಧಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನಾ ಸಮಾವೇಶ ನಡೆಸಿ ಆಕ್ರೋಶ ವ್ಯಕ್ತಪಡಿಸಿವೆ.
ಇಲ್ಲಿನ ಹಳೇ ಪಪಂ ಎದುರು ನಡೆದ ಸಮಾವೇಶದಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, ಕೇಂದ್ರ ಸರ್ಕಾರ ಸಿಎಎ-ಎನ್‌ಆರ್‌ಸಿ ಜಾರಿಗೆ ತರುವ ಮೂಲಕ ಮುಸ್ಲಿಂ ಸಮುದಾಯವನ್ನು ಅಭದ್ರಗೊಳಿಸುವ ಹುನ್ನಾರ ನಡೆಸಿದೆ. ಧರ್ಮ-ಜಾತಿ ಆಧಾರದಲ್ಲಿ ದೇಶ ಒಡೆಯುವ ಸಂಚು ರೂಪಿಸಲಾಗುತ್ತಿದೆ. ಧರ್ಮಾಧಾರಿತ ಪೌರತ್ವದ ಈ ಹುನ್ನಾರ ತೀವ್ರವಾಗಿ ಖಂಡಿಸಲಾಗುವುದು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಭಾರತೀಯ ಸಂವಿಧಾನವು ಎಲ್ಲ ಧರ್ಮದವರನ್ನು ಸಮಾನವಾಗಿ ಕಾಣುವಂತೆ ಹೇಳಿದೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ಹಿಂದೂ ರಾಷ್ಟ್ರವನ್ನಾಗಿ ಮಾಡಿ ಇತರೆ ಧರ್ಮದವರನ್ನು ಹೊರಹಾಕುವ ಹುನ್ನಾರ ನಡೆಸಿದೆ. ಈ ಮೂಲಕ ಹಿಂದೂಗಳನ್ನು ಪ್ರಥಮ ನಾಗರಿಕರನ್ನಾಗಿ ಮಾಡಿ, ಇತರೆ ಸಮುದಾಯಗಳನ್ನು ದ್ವಿತೀಯ ದರ್ಜೆ ನಾಗರಿಕರನ್ನಾಗಿ ಮಾಡುವ ಸಂಚು ರೂಪಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ, ಜಮ್ಮು ಕಾಶ್ಮೀರಕ್ಕೆ ನೀಡಿದ್ದ 370 ವಿಶೇಷ ಸ್ಥಾನಮಾನ ಹಿಂತೆಗೆತ, ಪುಲ್ವಾಮಾ ದಾಳಿ, ನೋಟ್ ಬ್ಯಾನ್ ಸೇರಿದಂತೆ ಇತರ ಕಾಯ್ದೆಗಳನ್ನು ಜಾರಿಗೆ ತಂದು ಜನರ ಗಮನ ಬೇರೆಡೆ ಸೆಳೆದು ಅಭಿವೃದ್ಧಿ ಮರೆತಿದ್ದು, ಅನೇಕ ಜನ ವಿರೋಧಿ ನೀತಿ ಜಾರಿಗೊಳಿಸಲಾಗುತ್ತಿದೆ ಎಂದು ದೂರಿದರು.
ದೇಶದಲ್ಲಿ ಬಡತನ, ನಿರುದ್ಯೋಗ, ಆಹಾರ ಕೊರತೆ, ಆರ್ಥಿಕ ಮುಗ್ಗಟ್ಟು, ಜಿಡಿಪಿ ಕುಸಿದಿದೆ. ಇದರನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಕ್ರಮ ಕೈಗೊಳ್ಳುತ್ತಿಲ್ಲ. ದೇಶದಲ್ಲಿ ಅರಾಜಕತೆ, ಕೋಮುಗಲಭೆ ಹೆಚ್ಚುತ್ತಿವೆ. ಸಣ್ಣ-ಮಧ್ಯಮ ಕೈಗಾರಿಕೆಗಳು ಮುಚ್ಚಿ ಲಕ್ಷಾಂತರ ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಇದಕ್ಕೆ ಕೇಂದ್ರದ ಬಿಜೆಪಿ ಸರ್ಕಾರವೇ ನೇರ ಕಾರಣ ಎಂದು ಗಂಭೀರ ಆರೋಪ ಮಾಡಿದರು.
ನಂತರ ಪ್ರತಿಭಟನಾಕಾರರು ತಹಶೀಲ್ದಾರ್ ಅಶೋಕ ಗುರಾಣಿ ಅವರಿಗೆ ಮನವಿ ಸಲ್ಲಿಸಿದರು. ಅಹಿತಕರ ಘಟನೆ ನಡೆಯದಂತೆ ಸಿಪಿಐ ಗುರುರಾಜ ಕಲ್ಯಾಣಶೆಟ್ಟಿ, ಪಿಎಸ್‌ಐ ಶಿವಾನಂದ ಗುಡಗನಟ್ಟಿ ಭದ್ರತೆ ಒದಗಿಸಿದ್ದರು.
ಈ ಸಂದರ್ಭದಲ್ಲಿ ಎಸ್.ಕೆ. ಮಕಾನದಾರ, ಸಲೀಮ್ ಕಳಾವಂತ, ಇರ್ಷಾದ ಮೊಕಾಶಿ, ಕೆಂಪಣ್ಣ ಶಿರಹಟ್ಟಿ, ರಮೇಶ ಹುಂಜಿ, ನಜೀರ ಮೋಮಿನದಾದಾ, ಇಲಿಯಾಸ್ ಅತ್ತಾರ, ಮಹ್ಮದಅಲಿ ನದಾಫ್, ಯಾಸೀನ್ ಬಾಗವಾನ, ಡಿ.ಆರ್. ಖಾಜಿ, ಬಾಬಾಮಿಯಾ ಖಾಜಿ, ಮೆಹಬೂಬ ಅತ್ತಾರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.