ಪುಣೆ ಬಂಟರ ಸಂಘ: ವಾರ್ಷಿಕೋತ್ಸವಕ್ಕೆ ಚಾಲನೆ

Team Udayavani, Jan 28, 2020, 6:23 PM IST

mumbai-tdy-1

ಪುಣೆ, ಜ. 27: ಪುಣೆ ಬಂಟರ ಸಂಘದ ವಾರ್ಷಿಕೋತ್ಸವ ಸಮಾರಂಭವು ಜ. 26 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಕೇಂದ್ರದ ಲತಾ ಸುಧೀರ್‌ ಶೆಟ್ಟಿ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಸಂಘದ ಅಧ್ಯಕ್ಷ ಇನ್ನ ಕುರ್ಕಿಲ್‌ ಬೆಟ್ಟು ಸಂತೋಷ್‌ ವಿ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿಟ್ಟೆ ವಿಶ್ವವಿದ್ಯಾಲಯದ ಉಪಕುಲಪತಿಗಳು ಹಾಗೂ ವರ್ಲ್ಡ್ ಬಂಟ್ಸ್‌ ಫೌಂಡೇಶನ್‌ ಇದರಕಾರ್ಯಾಧ್ಯಕ್ಷರಾದ ಡಾ| ಎಂ. ಶಾಂತಾರಾಮ್‌ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ವಿಶ್ವಸ್ಥರು ಹಾಗೂ ಮಾಜಿ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ, ಮುಂಬಯಿಯ ಹೊಟೇಲ್‌ ಉದ್ಯಮಿ ಕೃಷ್ಣ ಶೆಟ್ಟಿ ಹಾಗೂ ಮುಂಬಯಿ ಬಂಟರ ಸಂಘದ ಮಹಿಳಾ ವಿಭಾಗದ ಉಪ ಕಾರ್ಯಧ್ಯಕ್ಷೆ ಉಮಾಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

ಪ್ರತೀ ವರ್ಷ ಸಮಾಜದ ಶ್ರೇಷ್ಠ ಸಾಧಕನನ್ನು ಗುರುತಿಸಿ ಕೊಡಮಾಡುವ ದಿ| ಗುಂಡೂರಾಜ್‌ಎಂ. ಶೆಟ್ಟಿ ಅತ್ಯುತ್ತಮ ಸಮಾಜ ಸೇವಕಪ್ರಶಸ್ತಿಯನ್ನು ಉಡುಪಿಯ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯವರಿಗೆ ಪ್ರದಾನಿಸಲಾಯಿತು. ಆರ್ಕಿಟೆಕ್ಚರ್‌ ಪ್ರಕಾಶ್‌ಕುಲಕರ್ಣಿ ದಂಪತಿಯನ್ನು ಸಮ್ಮಾನಿಸಲಾ ಯಿತು. ಅತಿಥಿಗಳು ದೀಪ ಪ್ರಜ್ವಲಿಸಿ ತೆಂಗಿನ ಹಿಂಗಾರವನ್ನು ಅರಳಿಸಿ ಸಮಾರಂಭಕ್ಕೆ ಚಾಲನೆಯಿತ್ತರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ಶ್ರೀಮತಿ ಶಾಂತಾರಾಮ್‌ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ಸತೀಶ್‌ ಆರ್‌. ಶೆಟ್ಟಿ ಮತ್ತು ಮೋಹನ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೆ. ಅಜಿತ್‌ ಹೆಗ್ಡೆ, ಗೌರವ ಕೋಶಾಧಿಕಾರಿ ಎರ್ಮಾಳ್‌ ಚಂದ್ರಹಾಸ ಶೆಟ್ಟಿ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್‌. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಯಶ್‌ರಾಜ್‌ ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಗಣೇಶ್‌ ಜೆ. ಪೂಂಜಾ, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ರವಿ ಕೆ. ಶೆಟ್ಟಿ ಉಪಸ್ಥಿತರಿದ್ದರು.

ಯಶೋದಾ ಶೆಟ್ಟಿ ಮತ್ತು ಬಳಗ ಪ್ರಾರ್ಥಿಸಿದರು. ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರುಸ್ವಾಗತಿಸಿದರು. ಅತಿಥಿಗಳನ್ನು ಎಲೆ-ಅಡಿಕೆ, ಹಿಂಗಾರ ನೀಡಿ ಸ್ವಾಗತಿಸಲಾಯಿತು. ನಿತೇಶ್‌ ಶೆಟ್ಟಿ ಎಕ್ಕಾರ್‌ ಹಾಗೂ ಕಾಂತಿ ಸೀತಾರಾಮ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.ಅತಿಥಿಗಳನ್ನು ಸಾರಿಕಾ ಚಂದ್ರಹಾಸ್‌ ಶೆಟ್ಟಿ, ಶೇಖರ್‌ ಸಿ. ಶೆಟ್ಟಿ ಹಾಗೂ ಹರ್ಷಿತಾ ಹರೀಶ್‌ ಶೆಟ್ಟಿ, ಸಂಧ್ಯಾ ಆರ್‌. ಶೆಟ್ಟಿ ಪರಿಚಯಿಸಿದರು. ಆದ್ಯಾ ಸುಧಾಕರ್‌ ಶೆಟ್ಟಿ ಸಮ್ಮಾನ ಪತ್ರ ವಾಚಿಸಿದರು. ಅತಿಥಿ-ಗಣ್ಯರನ್ನು ಪೇಟ ತೊಡಿಸಿ, ಶಾಲು, ಸ್ಮರಣಿಕೆ ಫಲಪುಷ್ಪವನ್ನಿತ್ತು ಸಮ್ಮಾನಿಸಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸದಸ್ಯರುಗಳ ಮಕ್ಕಳಿಂದ ನೃತ್ಯ ವೈವಿಧ್ಯಗಳು, ಭ್ರಾಮರಿ ಯಕ್ಷನೃತ್ಯ ಕಲಾ ನಿಲಯ ಚಾರಿಟೇಬಲ್‌ ಟ್ರಸ್ಟ್‌ ಮುಂಬಯಿ ಇದರ ಬಾಲ ಕಲಾವಿದರು ಅಭಿನಯಿಸುವ ಖ್ಯಾತ ಭಾಗವತರಾದ ಪಟ್ಲ ಸತೀಶ್‌ ಶೆಟ್ಟಿಯವರಭಾಗವತಿಕೆಯಲ್ಲಿ ಸುದರ್ಶನ ವಿಜಯ ಯಕ್ಷಗಾನ ಪ್ರದರ್ಶನಗೊಂಡಿತು. ಸಂಘದ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗ,ಉತ್ತರ ಹಾಗೂ ದಕ್ಷಿಣ ಪ್ರಾದೇಶಿಕ ಸಮಿತಿ ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸಂಘದ ಮಾಜಿ ಅಧ್ಯಕ್ಷರುಗಳಾದ ಕುಶಲ್‌ ಹೆಗ್ಡೆ, ಜಯಂತ್‌ ಶೆಟ್ಟಿ, ಮೊಳಹಳ್ಳಿ ಬಾಲಕೃಷ್ಣ ಹೆಗ್ಡೆ, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸಮಾಜ ಬಾಂಧವರು ಉಪಸ್ಥಿತರಿದ್ದರು.

-ಚಿತ್ರ – ವರದಿ : ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.