ಬಿಎಸ್‌ವೈ ನಾಯಕತ್ವಕ್ಕೆ ಯಾವುದೇ ಆಕ್ಷೇಪವಿಲ್ಲ : ಪ್ರಹ್ಲಾದ ಜೋಶಿ
Team Udayavani, Jan 28, 2020, 7:04 PM IST
ಹುಬ್ಬಳ್ಳಿ: ಸಿಎಂ ಯಡಿಯೂರಪ್ಪ ನಾಯಕತ್ವದ ಬಗ್ಗೆ ಕೇಂದ್ರದ ನಾಯಕರಿಗಾಗಲಿ, ರಾಜ್ಯದ ನಾಯಕರಿಗಾಗಲಿ ಯಾವುದೇ ಆಕ್ಷೇಪ ಇಲ್ಲ. ಅವರ ನಾಯಕತ್ವದ ಬಗ್ಗೆ ಅಪಾರ ಗೌರವ ಇದೆ. ಅವರ ನಾಯಕತ್ವಕ್ಕೆ ಆಕ್ಷೇಪ ಎನ್ನುವುದು ಕೇವಲ ಊಹಾಪೋಹ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಬಗ್ಗೆ ಪಕ್ಷದ ಹೈಕಮಾಂಡ್ ಅಪಾರ ಗೌರವ ಹೊಂದಿದೆ. ಅವರನ್ನು ಕಡೆಗಣಿಸುವ ಮಾತೇ ಇಲ್ಲ. ಸಚಿವ ಸಂಪುಟ ವಿಸ್ತರಣೆ, ಯಾರನ್ನು ಸೇರಿಸಿಕೊಳ್ಳಬೇಕು ಎಂಬುದು ಮುಖ್ಯಮಂತ್ರಿಯವರಿಗೆ ಬಿಟ್ಟ ವಿಚಾರ. ಪಕ್ಷ ಅಧಿಕಾರಕ್ಕೆ ಬರಲು ತ್ಯಾಗ ಮಾಡಿದವರಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನ ಎಂಬ ಬಗ್ಗೆ ಮುಖ್ಯಮಂತ್ರಿ ಹಾಗೂ ಪಕ್ಷ ತೀರ್ಮಾನಿಸುತ್ತದೆ ಎಂದರು.
ಸಿಎಎ, ಎನ್‌ಆರ್‌ಸಿ ವಿರುದ್ಧ ಹೋರಾಟಕ್ಕೆ ಹಾಗೂ ಹಿಂಸಾಚಾರಕ್ಕೆ ವಿದೇಶಗಳಿಂದ ಹಣ ಹರಿದು ಬಂದಿರುವುದು ಆತಂಕಕಾರಿ ವಿಚಾರ. ವಿದೇಶಿ ಹಣ ಬಳಸಿಕೊಂಡು ಕೆಲವರು ಹೋರಾಟಕ್ಕೆ ಮುಂದಾಗಿರುವುದು ಕಳವಳಕಾರಿ ಸಂಗತಿ. ಸಿಎಎ ಬಗ್ಗೆ ಸಂಸತ್‌ನಲ್ಲಿ ಸುದೀರ್ಘ ಚರ್ಚೆಯಾಗಿದೆ. ವಿಪಕ್ಷಗಳ ಎಲ್ಲ ಪ್ರಶ್ನೆಗಳಿಗೂ ಸಮರ್ಪಕ ಉತ್ತರ ನೀಡಿ, ಸಂಸತ್ತಿನಲ್ಲಿ ಒಪ್ಪಿಗೆ ಪಡೆದ ನಂತರವೇ ಕಾಯ್ದೆ ಜಾರಿಗೊಳಿಸಲಾಗಿದೆ. ಆದರೆ, ಇದೀಗ ಅದರ ವಿರುದ್ಧ ಕೆಲವರು ವಿನಾಕಾರಣ ಹೋರಾಟಕ್ಕಿಳಿಸಿದ್ದು, ಇದರ ಹಿಂದೆ ಕಾಂಗ್ರೆಸ್ ಸೇರಿ ವಿಪಕ್ಷಗಳ ಕುಮ್ಮಕ್ಕು ಇದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Arrested: ಬಿಹಾರದ ಬೆಡ್‌ಶೀಟ್ ಗ್ಯಾಂಗ್‌ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.