ಸಂಗೀತ ಕಲಿಯದೆ ಗಾಯನದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದ ಡಾ| ರಾಜ್‌

Team Udayavani, Jan 29, 2020, 3:00 AM IST

sangeeta

ಮೈಸೂರು: ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಸಮಯ ಕೊಡಬೇಕು ಎಂದು ಮಹಾರಾಜ ಕಾಲೇಜು ಪ್ರಾಂಶುಪಾಲ ಪ್ರೊ. ರಾಮಸ್ವಾಮಿ ಸಿ. ಸಲಹೆ ನೀಡಿದರು. ಮಹಾರಾಜ ಕಾಲೇಜಿನ ಪಠ್ಯೇತರ ಚಟುವಟಿಕೆ ಸಮಿತಿ ವತಿಯಿಂದ ಕಾಲೇಜು ಶತಮಾನೋತ್ಸವ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ, ಡಾ.ರಾಜ್‌ಕುಮಾರ್‌ ಸ್ಮರಣಾರ್ಥ ರಾಜ್‌ ಚಿತ್ರಗೀತೆಗಳ ಅಂತರ ಕಾಲೇಜು ಗಾಯನ ಸ್ಪರ್ಧೆಯಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಸಮಯ ಕೊಡಬೇಕು. ಅವರಲ್ಲಿನ ಕಲೆಯನ್ನು ಹೊರಹಾಕಲು ಇಂತಹ ವೇದಿಕೆ ಸೃಷ್ಟಿಯಾಗಬೇಕು. ವೇದಿಕೆಯಲ್ಲಿ ಪ್ರಶಸ್ತಿಗಾಗಿ ಹಾಡದೇ ತಮ್ಮ ಆತ್ಮತೃಪ್ತಿಗಾಗಿ ಸ್ಪರ್ಧಿಗಳು ಹಾಡಿದರೆ ಅವರಲ್ಲಿನ ಕಲೆ ವೃದ್ಧಿಗೊಳ್ಳುತ್ತದೆ ಎಂದು ತಿಳಿಸಿದರು.

ಕಾಲೇಜಿಗೆ ದತ್ತಿ: ವರನಟ ರಾಜ್‌ಕುಮಾರ್‌ ಯಾವುದೇ ಸಂಗೀತ ಕಲಿಯದೇ ಗಾಯನದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದರು. ಇಂದಿನ ಯುವ ಗಾಯಕರಿಗೆ ಡಾ.ರಾಜ್‌ ಗಾಯನ ಮಾದರಿಯಾಗಬೇಕು. ಪ್ರತಿವರ್ಷ ರಾಜ್‌ ಕುಟುಂಬದ ಸದಸ್ಯರು ಮಹಾರಾಜ ಕಾಲೇಜಿಗೆ ದತ್ತಿ ನೀಡುತ್ತಾ ಬಂದಿದ್ದಾರೆ. ಅವರ ದತ್ತಿ ನಿಧಿಯಿಂದ ಇಂತಹ ಸಾಂಸ್ಕೃತಿಕ ಚಟುವಟಿಕೆಗಳಿಗೆ ಬಳಸಿಕೊಂಡು, ವಿದ್ಯಾರ್ಥಿಗಳ ಕಲೆಯನ್ನು ಹೊರ ತರಲು ವೇದಿಕೆ ಕಲ್ಪಿಸುತ್ತೇವೆ. ಇಂದು ಹಲವಾರು ಕಾಲೇಜುಗಳಿಂದ ಈ ಸ್ಪರ್ಧೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು ಬಂದಿದ್ದು, ಅವರ ಪ್ರತಿಭೆಗೆ ರಾಜ್‌ ಕುಟುಂಬ ಸಹಕಾರವಿದೆ ಎಂದು ಸ್ಮರಿಸಿದರು.

ಅವಕಾಶ ಬಳಸಿಕೊಳ್ಳಿ: ಯವ ಗಾಯಕಿ ಪ್ರಿಯದರ್ಶಿನಿ ಮಾತನಾಡಿ, ರಾಜ್‌ಕುಮಾರ್‌ ಎಂದರೆ ಶಕ್ತಿ. ಅವರ ಹೆಸರಿನ ಈ ಕಾರ್ಯಕ್ರಮ ಹಲವಾರು ಯುವ ಗಾಯಕರನ್ನು ಸೃಷ್ಟಿಸಲು ಅವಕಾಶ ನೀಡುತ್ತಿದೆ. ಸ್ಪರ್ಧಿಗಳು ಯಾವುದೇ ಭಯವಿಲ್ಲದೇ ತಮ್ಮ ಮುಕ್ತ ಕಂಠದಿಂದ ಹಾಡುಗಳನ್ನು ಹಾಡಬೇಕು. ಸಂಗೀತ ನಮ್ಮೊಳಗೆ ಇರುತ್ತದೆ, ಆದರೆ ಅದನ್ನು ಹೊರ ತರಲು ವೇದಿಕೆ ಕಾಲೇಜಿನಲ್ಲಿ ಸಿಕ್ಕರೆ ಉತ್ತಮ ಗಾಯಕರು ಹೊರಬರಲಿದ್ದಾರೆ ಎಂದು ಹೇಳಿದರು.

ಸ್ಪರ್ಧೆಗೆ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳ ವಿವಿಧ ಕಾಲೇಜುಗಳಿಂದ 28 ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಸುಮಧುರ ಕಂಠದಿಂದ ರಾಜ್‌ ಹಾಡುಗಳನ್ನು ಹಾಡಿ ರಂಜಿಸಿದರು. ಕಾರ್ಯಕ್ರಮದಲ್ಲಿ ಯುವ ಉದಯೋನ್ಮುಖ ನಟ ವಿಕ್ರಂ, ಸಂಚಾಲಕಿ ವಿಜಯಲಕ್ಷ್ಮೀ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.