ಮನೆ ನಿರ್ಮಾಣಕ್ಕೆ 2ನೇ ಹಂತದಲ್ಲಿ ಲಕ್ಷ ರೂ.
Team Udayavani, Jan 29, 2020, 3:07 AM IST
ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶದಲ್ಲಿ ಮನೆ ಕಳೆದುಕೊಂಡವರಿಗೆ ಹೊಸದಾಗಿ ಮನೆ ಕಟ್ಟಲು ರಾಜ್ಯ ಸರ್ಕಾರದಿಂದ ಎರಡನೇ ಹಂತದಲ್ಲಿ ತಲಾ ಒಂದು ಲಕ್ಷ ರೂ. ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಂಗಳವಾರ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಜಿಲ್ಲಾಡಳಿತಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಅಕ್ರಮ-ಸಕ್ರಮ ಯೋಜನೆ ಯಡಿ 10 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಸಮಾರಂಭ’ವನ್ನು ಉದ್ಘಾಟಿಸಿ ಮಾತನಾಡಿ, ಈಗಾಗಲೇ ಮೊದಲ ಹಂತದಲ್ಲಿ ಒಂದು ಲಕ್ಷ ರೂ. ಬಿಡುಗಡೆಯಾಗಿದ್ದು, ಇದೀಗ ಎರಡನೇ ಹಂತದಲ್ಲಿ ಒಂದು ಲಕ್ಷ ರೂ. ನೀಡಲಾಗುವುದು ಎಂದರು.
ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಭೂಮಿ ಒತ್ತುವರಿಯಾಗಿದ್ದು, ಈ ಸಂಬಂಧ ಸಮೀಕ್ಷೆ ನಡೆಸುವ ಸಲುವಾಗಿ ಸರ್ಕಾರ ಶಾಸಕ ಕೆ.ಜಿ.ಬೋಪಯ್ಯ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿ ವರದಿ ನೀಡಿದ ನಂತರ ಭೂಮಿ ಒತ್ತುವರಿ ಮಾಡಿಕೊಂಡವರ ವಿರುದ್ಧ ತನಿಖೆ ನಡೆಸಿ, ಕ್ರಮ ಕೈಗೊಳ್ಳಲಾಗುತ್ತದೆ. ಒತ್ತುವರಿ ಜಮೀನುಗಳನ್ನು ಸ್ವಾಧೀನಪಡಿಸಿಕೊಂಡು, ಆ ಜಮೀನಿನಲ್ಲಿ ಬಡವರು, ನಿರ್ಗತಿಕರಿಗೆ ಆಶ್ರಯ ಮನೆಗಳನ್ನು ಕಟ್ಟಿಕೊಡಲಾಗುವುದು ಎಂದರು.
ಪ್ರಧಾನಿ ಮೋದಿ ಅವರ ಆಶಯದಂತೆ ಮನೆ ರಹಿತರನ್ನು ಗುರುತಿಸಿ, ಸೂರು ಕಲ್ಪಿಸಿಕೊಡಲು ಸರ್ಕಾರ ಬದ್ಧವಾಗಿದೆ. ರಾಜ್ಯಾದ್ಯಂತ 60 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗುತ್ತಿದ್ದು, ಇನ್ನುಳಿದ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲಾಗುವುದು. ಹಕ್ಕುಪತ್ರ ಪಡೆಯಲು ಸಾರ್ವಜನಿಕರು ಅಧಿಕಾರಿಗಳಿಗೆ ಹಣ ನೀಡಬಾರದು. ಯಾರಾದರೂ, ಹಣ ನೀಡುವಂತೆ ಕೇಳಿದರೆ ನಮಗೆ ಮಾಹಿತಿ ತಲುಪಿಸಿ. ಅಂತಹ ಅಧಿಕಾರಿಯನ್ನು ಅಮಾನತು ಗೊಳಿಸಿ, ಕ್ರಮ ಕೈಗೊಳ್ಳಲಾ ಗುವುದು ಎಂಬ ಭರವಸೆ ನೀಡಿದರು.
ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ, ಸರ್ಕಾರದ ಆಡಳಿತವನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಜಿಲ್ಲಾಧಿಕಾರಿಗಳೇ ಹಳ್ಳಿಗೆ ನಡೆಯಿರಿ’ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುವುದು. ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ತಿಂಗಳಲ್ಲಿ ಒಂದು ದಿನ ಬೆಳಗ್ಗೆ 11 ರಿಂದ 5 ರವರೆಗೆ ಹಳ್ಳಿಯಲ್ಲಿಯೇ ಇರಬೇಕು. ಮಧ್ಯಾಹ್ನ ರೈತರ ಮನೆಯಲ್ಲೇ ಊಟ ಮಾಡಬೇಕು. ಹಳ್ಳಿಯ ಆಸ್ಪತ್ರೆ, ಅಂಗನವಾಡಿ ಸ್ಥಿತಿ, ಕಂದಾಯ, ಇತರೆ ಸಮಸ್ಯೆಗಳನ್ನು ತಿಳಿದು ಸ್ಥಳದಲ್ಲೇ ಪರಿಹಾರ ನೀಡಬೇಕು. ಈ ಕಾರ್ಯಕ್ರಮವನ್ನು 15 ದಿನದೊಳಗೆ ಜಾರಿಗೆ ತರಲಾಗುವುದು ಎಂದರು.
ವೃದ್ಧಾಪ್ಯ ವೇತನ ಪಡೆಯಲು ಜನರು ವರ್ಷಗಟ್ಟಲೇ ತಾಲೂಕು ಕಚೇರಿಗೆ ಅಲೆ ಯುತ್ತಿದ್ದು, ಇನ್ನು ಮುಂದೆ ವಯಸ್ಸಾದವರು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಆಧಾರ್ ಕಾರ್ಡ್ ಮೂಲಕ ನಾಗರಿಕರ ಖಾತೆಗೆ ವೃದ್ಧಾಪ್ಯ ವೇತನ ಜಮಾ ಮಾಡುವ ಹೊಸ ಯೋಜನೆ ಜಾರಿ ಮಾಡಲಾಗುತ್ತಿದೆ. ಆಧಾರ್ ಲಿಂಕ್ ಮಾಡುವುದರಿಂದ ಬೋಗಸ್ ಫಲಾನುಭವಿಗಳು ಪತ್ತೆಯಾಗಲಿ ದ್ದಾರೆ. ಇದರಿಂದ ಸರ್ಕಾರಕ್ಕೆ ಸುಮಾರು 700 ಕೋಟಿ ರೂ. ಉಳಿತಾಯವಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಸಚಿವ ವಿ.ಸೋಮಣ್ಣ, ಸಂಸದ ಪಿ.ಸಿ.ಮೋಹನ್, ಮುನಿಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.