ರಾಜ್ಯದ ಹೊರೆ ತಗ್ಗಿಸಲು ಕೇಂದ್ರಕ್ಕೆ ಜೈ
Team Udayavani, Jan 29, 2020, 3:09 AM IST
ಬೆಂಗಳೂರು: ಆರ್ಥಿಕ ಸಂಕಷ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೇಂದ್ರದ ಅನುದಾನ ಹೆಚ್ಚು ಪಡೆಯುವ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದು, ಇದರಿಂದಾಗಿ ಸುಮಾರು 30 ಸಾವಿರ ಕೋಟಿ ರೂ. ಖಜಾನೆಗೆ ಹೊರೆ ತಗ್ಗಿಸಲು ಮುಂದಾಗಿದೆ.
ಶಿಕ್ಷಣ, ಆರೋಗ್ಯ, ಆಹಾರ, ವಸತಿ, ಕುಡಿಯುವ ನೀರು ಪೂರೈಕೆ ಸೇರಿ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಸಹಭಾಗಿತ್ವ ಪಡೆದು ಜಾರಿಗೊಳಿಸುವುದು ಇದರ ಉದ್ದೇಶವಾಗಿದ್ದು, ಈಗಾಗಲೇ ಐದು ಪ್ರಮುಖ ಇಲಾಖೆಗಳು ಕ್ರಿಯಾ ಯೋಜನೆ ಸಹ ಸಿದ್ಧಪಡಿಸಿಟ್ಟುಕೊಂಡಿವೆ.
ಕೇಂದ್ರ ಪುರಸ್ಕೃತ ಯೋಜನೆಗಳ ಜಾರಿಯಿಂದ ಕೇಂದ್ರದಿಂದ ಹೆಚ್ಚು ಅನುದಾನ ಲಭ್ಯವಾಗುವುದರ ಜತೆಗೆ ಯೋಜನೆಗಳ ಅನುಷ್ಠಾನಕ್ಕೆ ಆರ್ಥಿಕ ಕೊರತೆಯೂ ನಿವಾರಣೆಯಾಗಲಿದೆ. ಕೇಂದ್ರ ಬಜೆಟ್ ನೋಡಿಕೊಂಡು ರಾಜ್ಯ ಬಜೆಟ್‌ನಲ್ಲಿ ಈ ಕುರಿತು ಹಲವು ಘೋಷಣೆ ಸಾಧ್ಯತೆಯಿದೆ ಎಂದು ಹಣಕಾಸು ಇಲಾಖೆ ಅಧಿಕಾರಿಗಳು ತಿಳಿಸುತ್ತಾರೆ.
ಈ ಹಿಂದೆ ಕಾಂಗ್ರೆಸ್ ಸರ್ಕಾರ ಹಾಗೂ ಆ ನಂತರದ ಜೆಡಿಎಸ್-ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆಗಳ ಜಾರಿಗೆ ವಿರೋಧವಿತ್ತು. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ, ಉಜ್ವಲಾ ಯೋಜನೆ ವಿಚಾರದಲ್ಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಸಂಘರ್ಷವಿತ್ತು.
ಆದರೆ, ಇದೀಗ ಕೇಂದ್ರ ಹಾಗೂ ರಾಜ್ಯದಲ್ಲಿ ಎರಡೂ ಕಡೆ ಬಿಜೆಪಿ ಸರ್ಕಾರ ಇರುವುದರಿಂದ ಕೇಂದ್ರ ಸರ್ಕಾರದ ಸಹಭಾಗಿತ್ವದಡಿ ಯೋಜನೆಗಳ ಜಾರಿಗೆ ಯಾವುದೇ ಅಡ್ಡಿಯಿಲ್ಲ. ಇತ್ತೀಚೆಗೆ ಮುಖ್ಯ ಮಂತ್ರಿಯವರು ಅಧಿಕಾರಿಗಳ ನಿಯೋಗದೊಂದಿಗೆ ಈ ಕುರಿತು ಕೇಂದ್ರದ ಸಚಿವರ ಜತೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಗ್ರಾಮೀಣ ಕುಡಿಯುವ ನೀರು, ಅಂತರ್ಜಲ ವೃದ್ಧಿ, ಬಡ ಕುಟುಂಬಗಳಿಗೆ ಆರೋಗ್ಯ ಸೇವೆ, ಹಿಂದುಳಿದ ಹಾಗೂ ದಲಿತ ವರ್ಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣ, ವಸತಿ ಯೋಜನೆಗಳಿಗೆ ಕೇಂದ್ರದಲ್ಲಿ ಹಾಲಿ ಚಾಲ್ತಿಯಲ್ಲಿರುವ ಯೋಜನೆಗಳೊಂದಿಗೆ ರಾಜ್ಯ ಸರ್ಕಾರವು ಜತೆಗೂಡಿ ಕೇಂದ್ರ ಪುರಸ್ಕೃತ ಯೋಜನೆಯಡಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ.
ಹೆದ್ದಾರಿ ಹಾಗೂ ಸೇತುವೆಗಳ ಅಭಿವೃದ್ಧಿಗೆ 4 ರಿಂದ 5 ಸಾವಿರ ಕೋಟಿ ರೂ., ಗ್ರಾಮೀಣ ಕುಡಿಯುವ ನೀರು ಪೂರೈಕೆ ಯೋಜನೆಗೆ 7 ಸಾವಿರ ಕೋಟಿ ರೂ., ವಸತಿ ಯೋಜನೆಗಳಿಗೆ 10 ಸಾವಿರ ಕೋಟಿ ರೂ., ಅಂತರ್ಜಲ ವೃದ್ಧಿಗೆ 1200 ಕೋಟಿ ರೂ., ಆರೋಗ್ಯ ಯೋಜನೆಗೆ 2 ಸಾವಿರ ಕೋಟಿ ರೂ., ಶಿಕ್ಷಣ ವಲಯದಿಂದ 5 ಸಾವಿರ ಕೋಟಿ ರೂ. ಕೇಂದ್ರದ ಯೋಜನೆಗಳಿಂದ ಹೆಚ್ಚುವರಿಯಾಗಿ ಪಡೆಯುವ ಬಗ್ಗೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಬಜೆಟ್‌ನ ನಂತರ ಫೆ. 5 ರಿಂದ 8 ರವರೆಗೆ ರಾಜ್ಯದ ಪ್ರಮುಖ ಇಲಾಖೆಗಳ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ರಾಜ್ಯ ಬಜೆಟ್‌ಗೆ ಅಂತಿಮ ಸ್ವರೂಪ ನೀಡುವ ಕಾರ್ಯಕ್ಕೆ ಚಾಲನೆ ದೊರೆಯಲಿದೆ ಎಂದು ಹಣಕಾಸು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿ ಪ್ರತಿನಿಧಿ ನೇಮಕ: ರಾಜ್ಯ ಬಜೆಟ್ ನಂತರ ದೆಹಲಿಯಲ್ಲಿ ಕರ್ನಾಟಕ ರಾಜ್ಯದ ಪ್ರತಿನಿಧಿ ನೇಮಕ ಮಾಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆಗಳ ಅನುಷ್ಠಾನ ಸಂಬಂಧದ ಪತ್ರ ವ್ಯವಹಾರ, ಅಂಗೀಕಾರದ ಹೊಣೆ ನೀಡಲು ತೀರ್ಮಾನಿಸಲಾಗಿದೆ.
ರಾಜ್ಯ ಸರ್ಕಾರದಲ್ಲಿ ಉನ್ನತ ಹುದ್ದೆ ಅಲಂಕರಿಸಿದ್ದ ನಿವೃತ್ತ ಐಎಎಸ್ ಅಥವಾ ಐಪಿಎಸ್ ಅಧಿಕಾರಿಯೊಬ್ಬರನ್ನು ಆ ಸ್ಥಾನಕ್ಕೆ ನೇಮಿಸಲು ಚರ್ಚೆ ನಡೆದಿದೆ. ಆದರೆ, ಸಚಿವ ಸ್ಥಾನ ಕೊಡಲು ಸಾಧ್ಯವಾಗದ ಹಿರಿಯ ಶಾಸಕರಿಗೆ ಆ ಸ್ಥಾನ ಕೊಟ್ಟರೆ ಸೂಕ್ತ ಎಂಬ ಚಿಂತನೆಯೂ ಇದೆ ಎಂದು ಮೂಲಗಳು ತಿಳಿಸಿವೆ.
-30 ಸಾವಿರ ಕೋಟಿ ರೂ. ಖಜಾನೆಗೆ ಹೊರೆ ತಗ್ಗಿಸಲು ಕ್ರಮ
-ಈಗಾಗಲೇ ಐದು ಪ್ರಮುಖ ಇಲಾಖೆಗಳಿಂದ ಕ್ರಿಯಾ ಯೋಜನೆ ಸಿದ್ಧ
-ಕೇಂದ್ರ ಬಜೆಟ್ ನೋಡಿಕೊಂಡು ರಾಜ್ಯ ಬಜೆಟ್‌ನಲ್ಲಿ ಹಲವು ಘೋಷಣೆ ಸಾಧ್ಯತೆ
-ಫೆ. 5 ರಿಂದ 8 ರವರೆಗೆ ರಾಜ್ಯದ ಪ್ರಮುಖ ಇಲಾಖೆಗಳ ಅಧಿಕಾರಿಗಳ ಸಭೆ
-ರಾಜ್ಯ ಬಜೆಟ್‌ಗೆ ಅಂತಿಮ ಸ್ವರೂಪ ನೀಡುವ ಕಾರ್ಯಕ್ಕೆ ಚಾಲನೆ
* ಎಸ್. ಲಕ್ಷ್ಮಿನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.