ಗುಳೆ ಕಾರ್ಮಿಕರಿಗೆ ನರೇಗಾ ಜಾಗೃತಿ
249 ರೂ. ಸಮಾನ ಕೂಲಿ ನಿಗದಿಬಸ್ ನಿಲ್ದಾಣದಲ್ಲಿ ಉದ್ಯೋಗ ಚೀಟಿ ವಿತರಣೆ
Team Udayavani, Jan 29, 2020, 12:42 PM IST
ಸುರಪುರ: ಕೆಲಸ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವ ಕೂಲಿ ಕಾರ್ಮಿಕರಿಗೆ ಕರಪತ್ರ ಹಾಗೂ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸಿ ಸ್ಥಳದಲ್ಲೇ ಸಾಂಕೇತಿಕವಾಗಿ ಉದ್ಯೋಗ ಚೀಟಿ ವಿತರಿಸಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಹೇಳಿದರು.
ಬೆಂಗಳೂರಿಗೆ ವಲಸೆ ಹೋಗುತ್ತಿರುವ ಕುಟುಂಬಗಳಿಗೆ ಹಾಗೂ ಸಾರ್ವಜನಿಕರಿಗೆ ನರೇಗಾ ಯೋಜನೆ ಕುರಿತು ನಗರದ ಬಸ್ ನಿಲ್ದಾಣದಲ್ಲಿ ಮಂಗಳವಾರ ನಡೆದ ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನರೇಗಾ ಯೋಜನೆಯಡಿ ವರ್ಷದಲ್ಲಿ 100 ದಿನ ಕೂಲಿ ಕೆಲಸ ಒದಗಿಸಲಾಗುವುದು. ಬರಗಾಲ ಸಂದರ್ಭದಲ್ಲಿ ವಿಶೇಷವಾಗಿ 50 ಮಾನವ ದಿನ ಹೆಚ್ಚಿಗೆ ನೀಡಲಾಗುವುದು. ಪ್ರಸಕ್ತ ವರ್ಷ ಪ್ರವಾಹದಿಂದ ತಾಲೂಕಿನ ಜನರು ತತ್ತರಿಸಿ ಹೋಗಿದ್ದಾರೆ. ಆದ್ದರಿಂದ ವಿಶೇಷವಾಗಿ 50 ದಿನ ಹೆಚ್ಚುವರಿ ಕೆಲಸ ನೀಡಲಾಗುವುದು. ಪುರುಷ ಮತ್ತು ಮಹಿಳಾ ಕಾರ್ಮಿಕರಿಗೆ 249 ರೂ. ಸಮಾನ ಕೂಲಿ ನಿಗದಿಪಡಿಸಲಾಗಿದೆ. ಪ್ರತಿಯೊಬ್ಬರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಬಸ್ ನಿಲ್ದಾಣದಲ್ಲಿದ್ದ ಕೂಲಿಕಾರರಿಗೆ ಜಾಗೃತಿ ಮೂಡಿಸಿ ಸಾಂಕೇತಿಕವಾಗಿ ಉದ್ಯೋಗ ಚೀಟಿ ವಿತರಿಸಲಾಗಿದೆ. ಬಳಿಕ ಆಯಾ ಗ್ರಾಪಂ ಅಭಿವೃದ್ಧಿ ಅಧಿಕಾರಿ ಅವರನ್ನು ಸಂಪರ್ಕಿಸಿ ದಾಖಲಾತಿ ಸಲ್ಲಿಸಿ ಆನ್ ಲೈನ್‌ನಲ್ಲಿ ನೋಂದಣಿ ಮಾಡಿಸಿಕೊಳ್ಳುವಂತೆ ತಿಳಿಹೇಳಲಾಯಿತು. ಕೂಲಿ ಕೆಲಸ ನಿರ್ವಹಿಸಲು ಆಸಕ್ತಿ ತೋರಿಸಿದ ಜನರ ಹೆಸರು, ಗ್ರಾಪಂ ಹೆಸರು ಹಾಗೂ ದೂರವಾಣಿ ಸಂಖ್ಯೆ ನಮೂದಿಸಿಕೊಳ್ಳಲಾಯಿತು.
ಜನರು ಉತ್ತಮವಾಗಿ ಸ್ಪಂದಿಸಿದ್ದಾರೆ. ನಿಲ್ದಾಣದಲ್ಲಿ ಕುಳಿತಿದ್ದವರಿಗೆ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರಿಗೆ ನರೇಗಾ ಯೋಜನೆ ಮಹತ್ವ ತಿಳಿಸಿಕೊಡಲಾಯಿತು ಎಂದು ಹೇಳಿದರು.
ನರೇಗಾ ಯೋಜನೆಯಲ್ಲಿ ಪ್ರತಿ ದಿನಕ್ಕೆ 249 ರೂ. ನೀಡಲಾಗುತ್ತಿದೆ ಎಂಬ ವಿಷಯ ನಮಗೆ ತಿಳಿದಿರಲಿಲ್ಲ. ಇಷ್ಟೊಂದು ಕೂಲಿ ನೀಡಿದರೆ ನಾವೇಕೆ ಊರು ಬಿಟ್ಟು ಹೋಗೋಣ. ಮಕ್ಕಳಿಗೆ ಓದಿಸಲು, ಹಿರಿಯರನ್ನು ನೋಡಿಕೊಳ್ಳಲು ಅನುಕೂಲವಾಗುತ್ತಿದೆ ಎಂದು ಬಸ್‌ನಲ್ಲಿದ್ದ ಕೂಲಿಕಾರರು ಹೇಳಿರುವುದಾಗಿ ಇಒ ಹೇಳಿದರು.
ಸಹಾಯಕ ಕೃಷಿ ನಿರ್ದೇಶಕ ದಾನಪ್ಪ ಕತ್ನಳ್ಳಿ, ಸಹಾಯಕ ತೋಟಗಾರಿಕೆ ಅಧಿಕಾರಿ, ಎಡಿ ನರೇಗಾ ಹುಣಸಗಿ ಶರಣಗೌಡ, ಎಡಿ ನರೇಗಾ ಸುರಪುರ ವಿಶ್ವನಾಥ, ತಾಪಂ ಅಧಿಕಾರಿಗಳು, ಪಂಚಾಯತ್ ರಾಜ್ಯ ಇಲಾಖೆ ಅಭಿಯಂತರರು, ಎಲ್ಲ ತಾಂತ್ರಿಕ ಸಹಾಯಕರು, ಬಿಎಫ್‌ಟಿಗಳು, ಐಇಸಿ, ಟಿಎಂಐಎಸ್ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.