ಕಾಮಗಾರಿ ಗುಣಮಟ್ಟ ಕಾಪಾಡಿ
Team Udayavani, Jan 29, 2020, 3:47 PM IST
ಹಾವೇರಿ: ನೆರೆಹಾವಳಿಯಿಂದ ಹಾನಿಗೊಳಗಾದ ಶಾಲಾ ಕೊಠಡಿಗಳನ್ನು ತ್ವರಿತವಾಗಿ ದುರಸ್ತಿ ಕಾರ್ಯ ಮುಗಿಸಬೇಕು ಎಂದು ಎಂದು ಶಾಸಕ ನೆಹರು ಓಲೇಕಾರ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ತ್ತೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ರಸ್ತೆಗಳ ಡಾಂಬರೀಕರಣ ಹಾಕಿದ ಕೆಲ ಸಮಯದಲ್ಲಿ ಕಿತ್ತುಹೋಗುತ್ತಿರುವುದು ತಾಲೂಕಿನ ವಿವಿಧೆಡೆ ಕಂಡುಬಂದಿದೆ. ಲೋಕೋಪಯೋಗಿ ಹಾಗೂ ಜಿಲ್ಲಾ ಪಂಚಾಯತ್ ಇಂಜಿನಿಯರ್‌ಗಳು ಕಾಮಗಾರಿಗಳ ಸ್ಥಳದಲ್ಲಿ ಇದ್ದು ಮೇಲುಸ್ತುವಾರಿ ಮಾಡಬೇಕು ಹಾಗೂ ಮಂದಗತಿಯಲ್ಲಿ ನಡೆಯುವ ಕಾಮಗಾರಿಗಳನ್ನು ಚುರುಕುಗೊಳಿಸಬೇಕು. ಅಪೂರ್ಣ ಕಾಮಗಾರಿಗಳು ತ್ವರಿತವಾಗಿ ಪೂರ್ಣಗೊಳ್ಳಬೇಕು ಎಂದು ಇಂಜಿನಿಯರ್‌ಗಳಿಗೆ ಸೂಚಿಸಿದರು.
ಬೆಳೆವಿಮೆ ಸೇರಿದಂತೆ ರೈತರಿಗಾಗಿ ರೂಪಿಸಲಾದ ಸರ್ಕಾರದ ವಿವಿಧ ಯೋಜನೆಗಳನ್ನು ಸಕಾಲದಲ್ಲಿ ರೈತರಿಗೆ ತಲುಪಿಸಬೇಕು. ರೈತರಿಗೆ ಯೋಜನೆಗಳು ಸರಿಯಾಗಿ ತಲುಪಿಸದರೆ ರೈತರ ಪ್ರತಿಭಟನೆಗಳು ನಿಲ್ಲುತ್ತವೆ. ಕೃಷಿ ಅಧಿಕಾರಿಗಳ ಅಸಮರ್ಪಕ ಕಾರ್ಯನಿವಹಣೆಯಿಂದ ಯೋಜನೆಗಳು ಸರಿಯಾಗಿ ಜನರಿಗೆ ತಲುಪುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಬೆಳವಿಗಿ, ಯಲಗಚ್ಚ, ಕಡಕೋಳ ಗ್ರಾಮಗಳಲ್ಲಿ ನಿರ್ಮಾಣವಾಗುವ ಪಶು ಆರೋಗ್ಯ ಕೇಂದ್ರಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಹೊಸರಿತ್ತಿಯಲ್ಲಿರುವ ನೂತನ ಆಸ್ಪತ್ರೆ, ಆವರಣದ ಹಳೇ ಕಟ್ಟಡವನ್ನು ತೆರವುಗೊಳಿಸಿ, ಗೇಟ್ ನಿರ್ಮಿಸಿದರೆ ಆಸ್ಪತ್ರೆ ಸುವ್ಯವಸ್ಥಿತವಾಗಿ ಕಾಣಿಸುತ್ತದೆ ಎಂದು ಆರೋಗ್ಯ ಇಲಾಖಾಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ಧರಾಜು ಕಲಕೋಟಿ ಸೂಚಿಸಿದರು.
ಹಾವೇರಿ ಜಿಲ್ಲಾ ಕೆಎಸ್‌ಆರ್‌ಟಿಸಿ ಘಟಕದ ಕಾರ್ಯವೈಖರಿ ಬಗೆಗೆ ಸಾಕಷ್ಟು ದೂರುಗಳಿವೆ. ಹಲವಾರು ಗ್ರಾಮಗಳಿಗೆ ಬಸ್ಸಿನ ವ್ಯವಸ್ಥೆ ಸರಿಯಾಗಿಲ್ಲ. ಶಾಲಾ-ಕಾಲೇಜು ಮಕ್ಕಳು ಹಾಗೂ ಜನಸಾಮಾನ್ಯರಿಗೆ ತೊಂದರೆಯುಂಟಾಗುತ್ತದೆ. ಮೇಲ್ಮುರಿ, ಕಿತ್ತೂರು ಸೇರಿದಂತೆ ಮುಂಜಾನೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಕೆಲ ಗ್ರಾಮಗಳಲ್ಲಿ ಗ್ರಾಮೀಣ ಭಾಗದ ಬಸ್ಸುಗಳನ್ನು ನಿಲ್ಲಿಸದೇ ಇರುವುದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ತ್ವರಿತವಾಗಿ ಸಮರ್ಪಕ ಬಸ್ ಸೌಕರ್ಯ ಕಲ್ಪಿಸಿ ಎಂದು ಬ್ಯಾಡಗಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಸೂಚಿಸಿದರು.
ಸಭೆಯಲ್ಲಿ ಕೆಆರ್‌ಡಿಎಲ್, ಸಣ್ಣ ನೀರಾವರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಕ್ಷರ ದಾಸೋಹ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಮಾಹಿತಿ ಪಡೆದರು.ಸಭೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ಕಮಲವ್ವ ಪಾಟೀಲ, ತಾಪಂ ಇಒ ಬಸವರಾಜ, ಜಿಪಂ ಸದಸ್ಯರಾದ ವಿರುಪಾಕ್ಷಪ್ಪ ಕಡ್ಲಿ ಸೇರಿದಂತೆ ವಿವಿಧ ಇಲಾಖಾ ಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.