ಮತದಾರರ ಪಟ್ಟಿ ಪರಿಷ್ಕರಣೆ-ವೀಕ್ಷಕರಿಂದ ಸಭೆ
Team Udayavani, Jan 29, 2020, 6:05 PM IST
ಬೀದರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಮತ್ತು ಭಾರತ ಚುನಾವಣಾ ಆಯೋಗದ ಕಾರ್ಯನಿಮಿತ್ತ ಚುನಾವಣಾ ಪಟ್ಟಿ ವೀಕ್ಷಕರಾದ ಉಮಾ ಮಹಾದೇವನ್ ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಿದರು.
ಯುವ ಮತದಾರರನ್ನು ಹೆಚ್ಚು ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಸ್ವೀಪ್ ಸಮಿತಿಯಿಂದ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸಂಘಟಿಸಿದ ಬಗ್ಗೆ ಮಾಹಿತಿ ಪಡೆದರು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯುತ್ತಿದೆ. ಬಹುತೇಕ ಶಾಲಾ ಶಿಕ್ಷಕರು, ಒಂದಷ್ಟು ಜನ ಗ್ರಾಮ ಲೆಕ್ಕಿಗರು ಮತ್ತು ಆಶಾ ಕಾರ್ಯಕರ್ತೆಯರು ಬಿಎಲ್‌ಒಗಳಾಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತದಾರರ ಮನೆಮನೆಗೆ ತೆರಳಿ ಅರ್ಜಿಗಳನ್ನು ನೀಡಿ ಯುವ ಮತದಾರರನ್ನು ಮತದಾರರ ಪಟ್ಟಿ ವ್ಯಾಪ್ತಿಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಡಾ|ಎಚ್.ಆರ್. ಮಹಾದೇವ್ ಅವರು ಸಭೆಗೆ ಮಾಹಿತಿ ನೀಡಿದರು.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಹುಮುಖ್ಯ ಪಾತ್ರ ವಹಿಸುವ ಬಿಎಲ್‌ಒ ಅವರು ಕಾಳಜಿಯಿಂದ ಕೆಲಸ ಮಾಡುವಂತೆ ನೋಡಿಕೊಳ್ಳಬೇಕು ಎಂದು ಮಹಾದೇವನ್ ಅವರು ಸಲಹೆ ನೀಡಿದರು. ಅರ್ಜಿಗಳ ಸಂಖ್ಯೆ 6, 7, 8 ಮತ್ತು 8ಎ ಗಳ ವಿಲೇವಾರಿಗೆ ಸಂಬಂಧಿಸಿದಂತೆ ಚರ್ಚಿಸಿ ತಹಶೀಲ್ದಾರ್ ಅವರಿಂದ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ, ಅಪರ ಜಿಲ್ಲಾಧಿಕಾರಿ ರುದ್ರೇಶ
ಗಾಳಿ, ಬೀದರ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರಾದ ಅಕ್ಷಯ ಶ್ರೀಧರ್, ಭಂವರಸಿಂಗ್ ಮೀನಾ, ವಿವಿಧ ತಾಲೂಕುಗಳ ತಹಶೀಲ್ದಾರರಾದ ಚಂದ್ರಶೇಖರ, ಕೀರ್ತಿ ಚಾಲಕ, ಸಾವಿತ್ರ ಸಲಗರ, ಅಣ್ಣಾರಾವ್ ಪಾಟೀಲ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
MUST WATCH
ಹೊಸ ಸೇರ್ಪಡೆ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.