ಆರೋಗ್ಯಕ್ಕೆ ಕ್ರೀಡೆಗಳಲ್ಲಿ ಭಾಗವಹಿಸಿ
Team Udayavani, Jan 29, 2020, 5:20 PM IST
ಆನೇಕಲ್: ವಿದ್ಯಾರ್ಥಿಗಳು ನಿತ್ಯ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಗೋಪಾಲ್ ತಿಳಿಸಿದರು.
ತಾಲೂಕಿನ ಚಂದಾಪುರ ಪುರಸಭೆ ವ್ಯಾಪ್ತಿಯ ಇಗ್ಗಲೂರು-ಸೂರ್ಯಸಿಟಿಯ ಶಾಲೆಯಲ್ಲಿ ನಡೆದ ಕ್ರೀಡೋತ್ಸವಕ್ಕೆ ಚಾಲನೆ ನೀಡಿದ ಅವರು ಮಾತನಾಡಿ, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಆಟವನ್ನು ಶಿಕ್ಷಕರು ಹೇಳಿಕೊಡ ಬೇಕು. ಆಗ ಮಾತ್ರ ವಿದ್ಯಾರ್ಥಿಯ ಕಲಿಕೆಯಲ್ಲಿ ಪ್ರಗತಿ ಕಾಣಲು ಸಾಧ್ಯ. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವು ದರಿಂದ ಸರ್ಕಾರ ವಿದ್ಯಾರ್ಥಿಗಳಿಗೆವಿದ್ಯಾರ್ಥಿ ವೇತನ ಸೇರಿದಂತೆ ಸರ್ಕಾರಿ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.
ಶಿಕ್ಷಕರು ಸಮಾಜದ ಶಿಲ್ಪಿಗಳು: ಶಿಕ್ಷಕ ವೀರಭದ್ರಪ್ಪ ಮಾತನಾಡಿ, ಸಮಾಜದಲ್ಲಿ ನಿಜವಾದ ಶಿಲ್ಪಿಗಳು ಶಿಕ್ಷಕರು. ಮಕ್ಕಳ ಮನಸ್ಸು ಹಸಿ ಮುದ್ದೆಯಂತ್ತಿರುತ್ತದೆ. ಅಂತಹ ಮುದ್ದೆಯನ್ನು ತಿದ್ದಿ-ತೀಡಿ ಅವರಿಗೆ ಸಂಸ್ಕಾರಯುತ ಶಿಕ್ಷಣ ನೀಡಿ, ದೇಶಕ್ಕೆ ಉತ್ತಮ ಪ್ರಜೆಗಳನ್ನಾಗಿ ನಿರ್ಮಾಣ ಮಾಡುವುದು ಶಿಕ್ಷಕರಿಂದ ಮಾತ್ರ ಸಾಧ್ಯವಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಮತ್ತು ಟಿವಿಗೆ ಬಲಿಯಾಗಿ ತಮ್ಮಲ್ಲಿರುವ ಅಪಾರವಾದ ಶಕ್ತಿಯನ್ನು ಮರೆಯುತ್ತಿದ್ದಾರೆ. ಮೊಬೈಲ್ ಬಿಡಿ ಪುಸ್ತಕ ಇಡಿ ಎಂಬ ಅಭಿಯಾನನ್ನು ಪ್ರತಿ ಮನೆಯಿಂದ ಆರಂಭವಾಗಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಪ್ತಗಿರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ.ರಾಮರೆಡ್ಡಿ, ಕಾರ್ಯದರ್ಶಿ ಯಾದವ್, ಪ್ರಾಂಶುಪಾಲರಾದ ವೀಣಾ ಮಾಂಟಿ ಡಿಸೋಜ ಮತ್ತು ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ
Madanthyar: ಬಾಲಕಿಯರ ಹಾಸ್ಟೆಲ್ ಕಟ್ಟಡ ಅನಾಥ!
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.