ಸಾಹಿತ್ಯದಿಂದ ಸಾಮಾಜಿಕ ಬದಲಾವಣೆಗೆ ಪ್ರಯತ್ನ

Team Udayavani, Jan 30, 2020, 3:00 AM IST

sahitydinda

ಚಾಮರಾಜನಗರ: ಕುವೆಂಪು ಅವರು ಸಾಹಿತ್ಯದ ಮೂಲಕ ಸಾಮಾಜಿಕ ಬದಲಾವಣೆ ತರಲು ಮುಂದಾದರು. ಕುವೆಂಪು ಅವರ ಕಾವ್ಯ, ನಾಟಕಗಳನ್ನು ಸಾಹಿತ್ಯದ ದೃಷ್ಟಿಯಿಂದ ಅಷ್ಟೇ ನೋಡದೇ, ಅದರಲ್ಲಿರುವ ಗಾಢವಾದ ವಿಚಾರಗಳನ್ನು ಗ್ರಹಿಸಿ, ಪ್ರತಿಯೊಬ್ಬರೂ ಆ ದಾರಿಯಲ್ಲಿಯೇ ನಡೆಯಬೇಕಿದೆ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಶಿವಮ್ಮ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವಮಾನವ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಮಾತನಾಡಿದರು.

ಕುವೆಂಪು ಸಾಹಿತ್ಯ ಕನ್ನಡಕ್ಕೆ ಸೀಮಿತವಲ್ಲ: ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌ ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯದ ಮೂಲಕ ಕನ್ನಡಕ್ಕಷ್ಟೇ ಸೀಮಿತವಾಗದೇ, ಭಾಷೆಗಳ ಎಲ್ಲೆ ಮೀರಿ ಬೆಳೆದವರು. ಅವರ ಕಾವ್ಯ, ನಾಟಕ, ಕವನಗಳಲ್ಲಿ ನೈಜತೆಯ ಛಾಪು ಹಾಸುಹೊಕ್ಕಾಗಿತ್ತು. ಆ ಕಾಲದಲ್ಲಿ ಚಾಲ್ತಿಯಲ್ಲಿದ್ದ ಜಾತಿ ವ್ಯವಸ್ಥೆ, ಮಹಿಳೆಯರ ಸ್ಥಿತಿಗತಿಗಳನ್ನು ಕುವೆಂಪು ಅವರು ಮನೋಜ್ಞವಾಗಿ ಕಟ್ಟಿಕೊಟ್ಟಿದ್ದರು. ಈ ಮೂಲಕ ಬದಲಾವಣೆಯ ಕ್ರಾಂತಿಗೆ ನಾಂದಿ ಹಾಡಿದವರು. ಇಂಥಹ ವ್ಯಕ್ತಿತ್ವದ ಕುರಿತಾದ ಅರಿವು ಎಲ್ಲರಿಗೂ ಅಗತ್ಯ ಎಂದರು.

ಸಕಾರಾತ್ಮಕ ವಿಚಾರಗಳಿಗೆ ಆದ್ಯತೆ: ಕುವೆಂಪು ಅವರು ಸದಾ ಸಕಾರಾತ್ಮಕ ವಿಚಾರಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದರು. ಮನುಜ ಮತ, ವಿಶ್ವ ಪಥ, ಸರ್ವೋದಯ, ಸಮನ್ವಯ ಹಾಗೂ ಪೂರ್ಣದೃಷ್ಟಿ ಎಂಬ ಪಂಚ ಮಂತ್ರದ ಆಧಾರದಲ್ಲಿ ಮಾನವ ಸಂಕುಲ ಬೆಳೆಯಬೇಕು ಎಂಬುದು ಅವರ ಪ್ರತಿಪಾದನೆಯಾಗಿತ್ತು. ಹೀಗಾಗಿ ಕುವೆಂಪು ಅವರು ಬಿಟ್ಟು ಹೋಗಿರುವ ಇಂತಹ ಉದಾತ್ತ ಚಿಂತನೆ ಹಾಗೂ ಅನುಭವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ರೂಢಿಸಿಕೊಳ್ಳುವಂತಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಚ್‌.ಕೆ. ಗಿರೀಶ್‌, ವಿವಿಧ ಸಂಘ-ಸಂಸ್ಥೆಗಳ ಮುಖಂಡರಾದ ಶ್ರೀನಿವಾಸಗೌಡ, ಸಿ.ಎನ್‌.ಗೋವಿಂದರಾಜು, ಸಿ.ಎಂ.ನರಸಿಂಹಮೂರ್ತಿ, ಜಯಕುಮಾರ್‌, ಅರಕಲವಾಡಿ ನಾಗೇಂದ್ರ, ಸೋಮಶೇಖರ್‌ ಬಿಸಲವಾಡಿ, ಅಂಬರೀಶ್‌, ಚಾ.ಗು. ನಾಗರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

12

Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿ ಆನೆ ದಾಳಿ:ವಿಡಿಯೋ ವೈರಲ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.