ಗರ್ಭಪಾತದ ಮಿತಿ 24 ವಾರಗಳಿಗೆ ಹೆಚ್ಚಳ: ಕೇಂದ್ರ ಸಂಪುಟ ನಿರ್ಧಾರ

ಬುದ್ಧಿಮಾಂದ್ಯರು, ಅತ್ಯಾಚಾರ ಸಂತ್ರಸ್ತರಿಗೆ ಅನುಕೂಲ

Team Udayavani, Jan 30, 2020, 6:45 AM IST

jan-25

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ವೈದ್ಯಕೀಯ ಕಾರಣಗಳಿಂದ ಅಥವಾ ಬೇಡದಿರುವ ಗರ್ಭಪಾತಕ್ಕೆ ಮಿತಿಯನ್ನು 24 ವಾರಗಳಿಗೆ ಹೆಚ್ಚಿಸುವ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಫೆ.1ರಿಂದ ಶುರುವಾಗುವ ಬಜೆಟ್‌ ಅಧಿವೇಶನದಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಗರ್ಭಪಾತ (ತಿದ್ದುಪಡಿ) ಮಸೂದೆ 2020 ಅನ್ನು ಮಂಡಿಸಿ ಅನುಮೋದನೆ ಪಡೆದು ಕೊಳ್ಳಲು ಸರಕಾರ ಯೋಚಿಸುತ್ತಿದೆ. ಸದ್ಯ 20 ವಾರಗಳವರೆಗೆ ಮಾತ್ರ ಗರ್ಭಪಾತಕ್ಕೆ ಅನುಮತಿ ನೀಡಲಾಗುತ್ತಿದೆ.

ಮಹತ್ವಪೂರ್ಣವಾಗಿರುವ ತೀರ್ಮಾನದ ಬಗ್ಗೆ ವಿವರಣೆ ನೀಡಿದ ಕೇಂದ್ರ ಸಚಿವ ಪ್ರಕಾಶ್‌ ಜಾಬ್ಡೇಕರ್‌, ಗರ್ಭಪಾತ ಮಾಡಿಸಿಕೊಳ್ಳಲು ಪ್ರಸ್ತುತ ಇರುವ 20 ವಾರಗಳ ಮಿತಿಯನ್ನು 24 ವಾರಗಳಿಗೆ ಹೆಚ್ಚಳ ಮಾಡಲಾಗಿದೆ. ಇದರಿಂದ ಮಹಿಳೆಯರು ಮಗುವಿಗೆ ಜನ್ಮ ನೀಡುವ ಅಧಿಕಾರವನ್ನು ಮತ್ತಷ್ಟು ರಕ್ಷಿಸಿ ದಂತಾಗಿದೆ ಎಂದು ತಿಳಿಸಿದ್ದಾರೆ.

ಗರ್ಭಪಾತ ಮಿತಿಯನ್ನು ನಾಲ್ಕು ವಾರ ಏರಿಕೆ ಮಾಡಿರುವುದರಿಂದ ಅತ್ಯಾಚಾರ ಕ್ಕೊಳಗಾದ ಸಂತ್ರಸ್ತೆ, ಬಾಲಕಿಯರು, ಬುದ್ಧಿ ಮಾಂದ್ಯ ಯುವತಿಯರಿಗೆ ಉಪಯೋಗ ಆಗಲಿದೆ. ಕೆಲವು ಸಂದರ್ಭದಲ್ಲಿ ಅಪ್ರಾಪ್ತ ವಯಸ್ಕರು, ಬುದ್ಧಿಮಾಂದ್ಯರಿಗೆ ಮೊದಲ ಐದು ತಿಂಗಳ ಅವಧಿಯಲ್ಲಿ ಗರ್ಭಿಣಿಯಾಗಿರುವುದು ಗೊತ್ತಾಗುವುದಿಲ್ಲ. ಹೀಗಾಗಿ ಅವರು ನ್ಯಾಯಾಲಯದ ಮೊರೆ ಹೋಗುತ್ತಾರೆ. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತದೆ. ಈಗ ಗರ್ಭಪಾತ ಕಾಲಮಿತಿಯನ್ನು ಏರಿಸಿರುವುದರಿಂದ ಗರ್ಭ ಧರಿಸಿರುವುದನ್ನು ಖಚಿತಪಡಿಸಿಕೊಳ್ಳಲು ಸಮಯಾವಕಾಶ ಸಿಗಲಿದೆ ಎಂದು ಹೇಳಿದ್ದಾರೆ.

ಪ್ರಧಾನ ಅಂಶಗಳು
– ಗರ್ಭಪಾತ ಮಾಡಿಸುವುದರ ಬಗ್ಗೆ ಇನ್ನು ಮುಂದೆ ಇಬ್ಬರು ತಜ್ಞರ ಅಭಿಪ್ರಾಯ ಸಲ್ಲಿಕೆಯಾಗಬೇಕು. ಅವರು 24 ವಾರಗಳ ಅವಧಿ ಪೂರ್ತಿಯಾಗಿದೆಯೇ ಎನ್ನುವುದನ್ನು ದೃಢಪಡಿಸಬೇಕು.

– ನಿಗದಿಯಾಗಿರುವ ವೈದ್ಯರ ಸಮಿತಿ ಈಗಾಗಲೇ ಭ್ರೂಣದಲ್ಲಿ ಉಂಟಾಗಿರುವ ಅಸಹಜಗಳ ಬಗ್ಗೆ ವರದಿ ನೀಡಿದಲ್ಲಿ ಹೊಸ ತಿದ್ದುಪಡಿ ಅನ್ವಯವಾಗುವುದಿಲ್ಲ.

– ಗರ್ಭಪಾತ ಮಾಡಲು ಬಯಸುವ ಮಹಿಳೆಯ ಯಾವುದೇ ವಿವರವನ್ನು ಕಾನೂನಿನ ಅನ್ವಯ ಸೂಚಿತ ಅಧಿಕಾರಿಗೆ ಮಾತ್ರ ನೀಡಬೇಕು.

ಟಾಪ್ ನ್ಯೂಸ್

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.