ಬೇಡಿಕೆ ಈಡೇರಿಕೆಗೆ ಅಗ್ರಹ

ಅಕ್ಷರ ದಾಸೋಹ ನೌಕರರಿಂದ ಪ್ರತಿಭಟನಾ ರ‍್ಯಾಲಿ

Team Udayavani, Jan 30, 2020, 12:04 PM IST

30-January-6

ವಿಜಯಪುರ: ರಾಜ್ಯದ ಅಕ್ಷರ ದಾಸೋಹ ನೌಕರರ ಗೌರವ ಧನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ನಡೆಯಿತು.

ಜಿಪಂ ಮಹಾದ್ವಾರದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಸಿಇಒ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಮಾಸಿಕ ವೇತನ 12 ಸಾವಿರ ರೂ. ನಿಗದಿ ಮಾಡಿ, ಕಾರ್ಮಿಕ ವಿರೋಧಿ ಸರಕಾರಕ್ಕೆ ಧಿಕ್ಕಾರ, ಕಾರ್ಮಿಕರೇ ಒಂದಾಗಿ ಹೋರಾಟಕ್ಕೆ ಮುಂದಾಗಿ, ಪುಡಿಗಾಸಿನಲ್ಲಿ ದುಡಿಸುಕೊಳ್ಳುತ್ತಿರುವ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಪ್ರತಿಭಟನಾಕಾರರು ಮೊಳಗಿಸಿದರು.

ಪ್ರತಿಭಟನೆಯನ್ನು ಬೆಂಬಬಲಿಸಿ ಎಐಟಿಯುಸಿ ಜಿಲ್ಲಾಧ್ಯಕ್ಷ ಎಚ್‌.ಟಿ. ಮಲ್ಲಿಕಾರ್ಜುನ ಮಾತನಾಡಿ, ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆ ಮತ್ತು ರಾಜ್ಯ ಸರ್ಕಾರದ
ಶಿಕ್ಷಣ ಇಲಾಖೆ ಜಂಟಿ ಸಹಭಾಗಿತ್ವದಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮ ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿರುವುದು ಎಲ್ಲರಿಗೂ ತಿಳಿದ ವಿಷಯ. ಬಿಸಿಯೂಟದ ಜೊತೆಗೆ ಕ್ಷೀರ ಭಾಗ್ಯದ ಯೋಜನೆಯಿಂದಾಗಿ ಮಕ್ಕಳ ಅಪೌಷ್ಟಿಕತೆ ಕಡಿಮೆಯಾಗಿದೆ ಹಾಗೂ ಶಾಲೆ ಬಿಡುವ ಮಕ್ಕಳ ಸಂಖ್ಯೆ ಕೂಡ ಕಡಿಮೆಯಾಗಿರುವುದಾಗಿ ಸರಕಾರದ ಅಂಕಿ ಅಂಶಗಳು ತಿಳಿಸುತ್ತವೆ ಎಂದರು.

ಪ್ರತಿಭಟನೆ ಬೆಂಬಲಿಸಿದ ಎಸ್‌ ಯುಸಿಐ ಜಿಲ್ಲಾ ಕಾರ್ಯದರ್ಶಿ ಬಿ.ಭಗವಾನರೆಡ್ಡಿ ಮಾತನಾಡಿ, ಕಾರ್ಮಿಕರ ಶೊಷಣೆಗೆ ಇಲ್ಲಿವರೆಗೆ ಆಡಳಿತ ನಡೆಸಿರುವ ಎಲ್ಲ
ಸರಕಾರಗಳು ಮತ್ತು ಈ ದೇಶದ ಬಂಡವಾಳಶಾಹಿ ಪರವಾದ ನೀತಿ ಜಾರಿಗೋಳಿಸಿರುವುದರಿಂದ ಎಲ್ಲ ಕ್ಷೇತ್ರದ ಕಾರ್ಮಿಕರ ಸ್ಥಿತಿ ದುಸ್ತರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಸುನೀಲ ಸಿದ್ರಾಮಶೆಟ್ಟಿ ಮಾತನಾಡಿ, ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ಹಾಸ್ಟೆಲ್‌ಗ‌ಳಲ್ಲಿ ಅಡುಗೆ ಮಾಡುವವರಿಗೆ 12 ಸಾವಿರ ರೂ. ನಿಗ ದಿಗೊಳಿಸಿದೆ. ಆದರೆ, ಬಿಸಿಯೂಟ ಕಾರ್ಮಿಕರಿಗೆ ಇದು ಅನ್ವಯವಾಗುತ್ತಿಲ್ಲ. ಪರ್ಯಾಯ ಕೆಲಸಕ್ಕೂ ಹೋಗಲು ಸಾಧ್ಯವಾಗುತ್ತಿಲ್ಲ. ಆರೋಗ್ಯ ಸೌಲಭ್ಯವಾಗಲಿ, ವಿಮಾ ಸೌಲಭ್ಯಗಳು ಇವರಿಗೆ ದೊರಕುತ್ತಿಲ್ಲ ಎಂದರು.

ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಕಾಯ್ದೆಯಡಿ ಬಿಸಿಯೂಟ ಸಿಬ್ಬಂದಿಗೆ 12 ಸಾವಿರ ರೂ. ವೇತನ ನೀಡುವುದು, ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌-ಧನ್‌
ಪಿಂಚಣಿ ಯೋಜನೆಯ ಕಂತುಗಳನ್ನು ಸರ್ಕಾರವೇ ಭರಿಸಿ ಬಿಸಿಯೂಟ ಕಾರ್ಯಕರ್ತರಿಗೆ ನೀಡುವುದು ವಾಜಪೇಯಿ ಆರೋಗ್ಯಶ್ರೀ ವೈದ್ಯಕೀಯ ಸೌಲಭ್ಯದ ಕಾರ್ಡ್‌ ಒದಗಿಸುವುದು ಹಾಗೂ ವಯೋನಿವೃತ್ತಿ ಹೊಂದಿದ ನೌಕರರಿಗೆ ಇಡಿಗಂಟಿನ ಗೌರವ ಧನ ನೀಡುವುದು ಸೇರಿದಂತೆ ಬಿಸಿಯೂಟ ನೌಕರರ ಪರವಾದ ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು.
ದಲಿತ ವಿದ್ಯಾರ್ಥಿ ಪರಿಷತ್‌ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ, ಅಕ್ಷಯ, ಶಶಿಕಲಾ ಮ್ಯಾಗೆರಿ, ಬಸಮ್ಮ ಆಲಮಟ್ಟಿ, ಪಾರ್ವತಿ ಪಠಪತಿ, ಗಂಗು ಉಳಾಗಡ್ಡಿ, ಜಾಮಕ್ಕಾ ಹಟ್ಟಿ, ಸಂಗಿತಾ ಹೊನವಾಡ, ಭಾಗೀರಥಿ ಬಡಿಗೇರ, ಸುಲೋಚನಾ ಬೆಲ್ಲದ, ಚನ್ನಮ್ಮ ಪೆಂಟದ, ಪ್ರೇಮಾ ಇಂಗಳೇಶ್ವರ, ಅಮೀನಾ ಬಾಗೇವಾಡಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.