ಬೆಸ್ಕಾಂ ಜಾಗೃತ ದಳದ ವಿರುದ್ಧ ರೈತರ ಕಿಡಿ

ಚಿಕ್ಕಗಬ್ಬಿಗೆರೆ ಗ್ರಾಮದ 50 ರೈತರ ಮೇಲೆ ಅಧಿಕಾರಿಗಳಿಂದ ದೌರ್ಜನ್ಯ: ಸಿದ್ಧವೀರಪ್ಪ ಆರೋಪ

Team Udayavani, Jan 30, 2020, 1:41 PM IST

30-January-13

ಚಿತ್ರದುರ್ಗ: ವಿದ್ಯುತ್‌ ಮೀಟರ್‌ ವಾಪಸ್‌ ನೀಡಿದ್ದ ತಾಲೂಕಿನ ಚಿಕ್ಕಕಬ್ಬಿಗೆರೆ ಗ್ರಾಮದ ರೈತರಿಂದ ಬೆಸ್ಕಾಂ ಜಾಗೃತ ದಳದ ಪೊಲೀಸರು ಖಾಲಿ ಕಾಗದ ಪತ್ರದಲ್ಲಿ ಸಹಿ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬುಧವಾರ ಬೆಸ್ಕಾಂ ಜಾಗೃತ ದಳದ ಪೊಲೀಸ್‌ ಕಚೇರಿ ಮುಂಭಾಗದಲ್ಲಿ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಈಚಘಟ್ಟ ಸಿದ್ಧವೀರಪ್ಪ ಮಾತನಾಡಿ, ಚಿಕ್ಕಗಬ್ಬಿಗೆರೆಯಲ್ಲಿ ಜ. 28 ರಂದು ಬೆಸ್ಕಾಂ ಜಾಗೃತ ದಳದ ಪೊಲೀಸರು ಸುಮಾರು 50 ಮನೆಗಳ ಮೇಲೆ ದಾಳಿ ನಡೆಸಿ ದೌರ್ಜನ್ಯವೆಸಗಿ ಅವರಿಂದ ಬಿಳಿ ಹಾಳೆಯ ಮೇಲೆ ಸಹಿ ಮಾಡಿಸಿಕೊಂಡಿದ್ದಾರೆ. ಈಗಾಗಲೇ ಬೆಸ್ಕಾಂನ ಅಸಾಂವಿಧಾನಿಕ ನಿಯಮಗಳಿಂದ ವಿದ್ಯುತ್‌ ಮೀಟರ್‌ ವಾಪಸ್‌ ಮಾಡುವ ಚಳವಳಿಯನ್ನು ಕಳೆದ 2003ರಲ್ಲಿಯೇ ಹಮ್ಮಿಕೊಂಡು ಜಿಲ್ಲಾಧಿಕಾರಿಗಳ ಮೂಲಕ ಹಿಂದಿರುಗಿಸಲಾಗಿತ್ತು. ಇದೀಗ ಬೆಸ್ಕಾಂ ಜಾಗೃತ ದಳದ ಪೊಲೀಸರು ವೈಯಕ್ತಿಕ ಲೆಕ್ಕಾಚಾರದಲ್ಲಿ ದಾಳಿ ನಡೆಸಿ ರೈತರ ಮೇಲೆ ದೌರ್ಜನ್ಯ ನಡೆಸಿ ಖಾಲಿ ಪೇಪರ್‌ ಮೇಲೆ ಸಹಿ ಹಾಕಿಸಿಕೊಂಡಿದ್ದಾರೆ.

ಕೂಡಲೇ ಸಹಿ ಹಾಕಿಸಿಕೊಂಡಿರುವ ಖಾಲಿ ಪತ್ರವನ್ನು ಹಿಂದಿರುಗಿಸಬೇಕು ಎಂದು ಒತ್ತಾಯಿಸಿದರು. ಪೊಲೀಸರು ರೈತರ ಮನೆಗಳಿಗೆ ನುಗ್ಗಿದ ವೇಳೆ ಬೂಟು ಹಾಕಿಕೊಂಡು ಹೋಗಿದ್ದಾರೆ. ಧಾರ್ಮಿಕ ಆಚರಣೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಮಳೆ, ಬೆಳೆ ಇಲ್ಲದೆ, ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗದೆ ರೈತರು ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯುತ್‌ ಮೀಟರ್‌ ಅಳವಡಿಸಿಲ್ಲ, ಮೀಟರ್‌ ಅಳವಡಿಸಿಕೊಡಲಾಗುವು ಎಂದು ದೌರ್ಜನ್ಯವೆಸಗಿ ಸಹಿ ಹಾಕಿಸಿಕೊಂಡು ಪ್ರಕರಣ ದಾಖಲಿಸಲು ಸಂಚು ರೂಪಿಸಿದ್ದಾರೆ. ಇಂತಹ ಕ್ರಮ ಕೈಗೊಂಡಿರುವ ಅಧಿಕಾರಿಗಳು ತಮ್ಮ  ಪ್ಪನ್ನು ತಿದ್ದಿಕೊಳ್ಳಬೇಕು. ಇಲ್ಲವಾದರೆ ಅಮಾನತ್ತು ಆಗುವವರೆಗೂ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಬೆಸ್ಕಾಂ ಜಾಗೃತ ದಳದ ಪೊಲೀಸ್‌ ನಿರೀಕ್ಷಕಿ ಲತಾ ಮಾತನಾಡಿ, ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದುಕೊಂಡಿರುವವರ ಮೇಲೆ ದಾಳಿ ನಡೆಸುವುದು ನಮ್ಮ ಕರ್ತವ್ಯ. ಚಿಕ್ಕಕಬ್ಬಿಗೆರೆ ಗ್ರಾಮದಲ್ಲಿ ಮಹಜರ್‌ ಪತ್ರಕ್ಕೆ ಇಬ್ಬರಿಂದ ಸಹಿ ಮಾಡಿಸಿಕೊಳ್ಳಲಾಗಿದೆ ಅಷ್ಟೇ. ಯಾವುದೇ ರೈತರ ಮೇಲೆ ಪ್ರಕರಣ ದಾಖಲಿಸುವುದಿಲ್ಲ ಎಂದು ತಿಳಿಸಿದರು.

ಈ ವೇಳೆ ಸಿಟ್ಟಿಗೆದ್ದ ಕೆಲವು ರೈತರು, ಇಬ್ಬರು ರೈತರ ಬಳಿ ಮಹಜರ್‌ ಮಾಡಿಸಲಿಕ್ಕೆ ಸಹಿ ಮಾಡಿಸಿಕೊಂಡಿಲ್ಲ ಸುಮಾರು 50 ರೈತರ ಬಳಿ ಉದ್ದೇಶಪೂರ್ವಕವಾಗಿ ಸಹಿ ಮಾಡಿಸಿಕೊಳ್ಳಲಾಗಿದೆ. ಮಹಜರ್‌ ಮಾಡುವುದಕ್ಕಾಗಿ ಸಹಿ ಹಾಕಿಸಿದ್ದರೆ ಪತ್ರದಲ್ಲಿ ವಿವರ ಇರಬೇಕಿತ್ತು. ಆದರೆ ಖಾಲಿ ಪತ್ರದಲ್ಲಿ ಸಹಿ ಹಾಕಿಸಿಕೊಳ್ಳಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಸ್ಕಾಂ ಜಾಗೃತ ದಳದ ಎಇಇ ರಶೀದಾಬಾನು ಮಧ್ಯ ಪ್ರವೇಶಿಸಿ, ಜ. 28ರಂದು ನಡೆದ ದಾಳಿಯಲ್ಲಿ ಯಾವುದೇ ರೈತರ ಮೇಲೆ ಪ್ರಕರಣ ದಾಖಲಿಸುವುದಿಲ್ಲ. ಕಾನೂನು ರೀತ್ಯ ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದುಕೊಂಡಿದ್ದರೆ ಅಂಥವರ ಮೇಲೆ ದಾಳಿ ನಡೆಸಲಾಗುವುದು. ಎಲ್ಲರೂ ತ್ವರಿತಗತಿಯಲ್ಲಿ ವಿದ್ಯುತ್‌ ಮೀಟರ್‌ ಅಳವಡಿಸಿಕೊಳ್ಳಿ ಎಂದು ಮನವಿ ಮಾಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಟಾಪ್ ನ್ಯೂಸ್

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.