ಬಿಬಿಎಂಪಿ ಬಿಎಂಟಿಸಿ; ಸುಂಕ ಸಂಕಟ!


Team Udayavani, Jan 31, 2020, 10:34 AM IST

bng-tdy-2

ಬೆಂಗಳೂರು: ಆಸ್ತಿ ತೆರಿಗೆ ವಿಚಾರದಲ್ಲಿ ಬಿಬಿಎಂಪಿ ಮತ್ತು ಬಿಎಂಟಿಸಿ ನಡುವೆ “ನಾ ಕೊಡೆ, ನೀ ಬಿಡೆ’ ಎಂಬ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಎರಡು ವರ್ಷಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತನ್ನ ಎಲ್ಲ 42 ಸ್ವತ್ತುಗಳಿಗೆ ಆಸ್ತಿ ತೆರಿಗೆಯಿಂದ ವಿನಾಯ್ತಿ ನೀಡುವಂತೆ ನಾಲ್ಕು ಬಾರಿ ಪತ್ರ ಬರೆದಿದೆ. ಆದರೆ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ “ಆಗಲ್ಲ’ ಎಂಬ ಅದೇ ಸಿದ್ಧ ಉತ್ತರ ದೊರೆಯುತ್ತಿದೆ.

ಇದೊಂದು ರೀತಿ, “ಸುಂಕ’ ಕಟ್ಟಿಸಿಕೊಳ್ಳುವವರ ಮುಂದೆ “ಸಂಕಟ’ ಹೇಳಿಕೊಂಡರೆ ಏನು ಪ್ರಯೋಜನ ಎಂಬಂತಾಗಿದೆ. ಈ ಮಧ್ಯೆ ಆಸ್ತಿ ತೆರಿಗೆ ಮೊತ್ತದ ಬಾಕಿ ಮಾತ್ರ ಬೆಟ್ಟದಂತೆ ಬೆಳೆಯುತ್ತಿದೆ. ಬಿಎಂಟಿಸಿಯು 42 ಸ್ವತ್ತುಗಳಿಂದ ಪಾಲಿಕೆಗೆ 2.71 ಕೋಟಿ ರೂ.ಆಸ್ತಿ ತೆರಿಗೆ ಪಾವತಿಸಬೇಕಾಗಿದ್ದು, ಕೇವಲ ಸೇವಾ ತೆರಿಗೆ ತೆಗೆದುಕೊಂಡು, ಆಸ್ತಿ ತೆರಿಗೆಯಿಂದ ವಿನಾಯಿತಿ ನೀಡುವಂತೆ ಸರ್ಕಾರ ಮತ್ತು ಪಾಲಿಕೆಗೆ ಮನವಿ ಮಾಡಿದೆ. ಬಿಎಂಟಿಸಿಯು ಆರ್ಥಿಕ ಸಂಕಷ್ಟದಲ್ಲಿದ್ದು, ಈ ಹಿನ್ನೆಲೆಯಲ್ಲಿ ಮನವಿ ಮಾನ್ಯ ಮಾಡಬೇಕು ಎಂದು ಸಂಸ್ಥೆ ಕೋರಿದೆ. ಆದರೆ, ಇದು ಪದೇ ಪದೇ ತಿರಸ್ಕೃತವಾಗುತ್ತಿದೆ. “ಪಾಲಿಕೆಯ ಆರ್ಥಿಕ ದೃಷ್ಟಿಯಿಂದ ಸೇವಾ ತೆರಿಗೆಗೆ ಸೀಮಿತ ಮಾಡಲು ಸಾಧ್ಯವಿಲ್ಲ’ ಎಂದು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಬಿಎಂಟಿಸಿಯ ಮನವಿ ತಳ್ಳಿಹಾಕಿದ್ದಾರೆ.

ಬಿಎಂಟಿಸಿಯ ಕೆಂಗೇರಿ ಉಪನಗರ, ಮೈಸೂರು ರಸ್ತೆ, ವಿಜಯನಗರ, ಕೆ.ಆರ್‌.ಪುರ, ಶಾಂತಿನಗರ, ಬನಶಂಕರಿ ಸೇರಿದಂತೆ ಹಲವು ಪ್ರಮುಖ ಘಟಕಗಳು ಹಾಗೂ ಇತರೆ ಪ್ರಕಾರದ ಸ್ವತ್ತುಗಳಿಂದ ತೆರಿಗೆ ಬಾಕಿ ಇದೆ. ಬಿಎಂಟಿಸಿ ಸಂಸ್ಥೆಯ ಆಸ್ತಿ ತೆರಿಗೆಯಿಂದ ವಿನಾಯಿತಿ ನೀಡಿ ಸೇವಾ ಶುಲ್ಕ ನಿಗದಿಪಡಿಸುವಂತೆ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಬೇಡಿಕೆ ಮಂಡಿಸುತ್ತಿದೆ. ಈ ಬಾರಿ ಸರ್ಕಾರ ಸೇವಾ ತೆರಿಗೆ ವ್ಯಾಪ್ತಿಗೆ ಬಿಎಂಟಿಸಿಯನ್ನು ತರುವ ಸಾಧ್ಯತೆ ಇದೆ ಎಂಬ ಭರವಸೆ ಇದೆ. ಹಾಗಾದಲ್ಲಿ, ಸಹಜವಾಗಿ ಆಸ್ತಿ ತೆರಿಗೆಯಿಂದ ವಿನಾಯ್ತಿ ಸಿಕ್ಕಂತಾಗುತ್ತದೆ ಎಂದು ಹೆಸರು ಹೇಳಲಿಚ್ಛಿಸದ ಬಿಎಂಟಿಸಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು ಎಂದರು.

ವಿನಾಯಿತಿ ಸಾಧ್ಯವಿಲ್ಲ: ಬಿಬಿಎಂಪಿಯ ಆದಾಯದ ದೃಷ್ಟಿಯಿಂದ ಕಾಯ್ದೆಗೆ ತಿದ್ದುಪಡಿ ತಂದು ವಿನಾಯಿತಿ ಸಾಧ್ಯವಿರುವುದಿಲ್ಲ. ಹೀಗಾಗಿ, ಬಿಎಂಟಿಸಿಯು ಎಲ್ಲ ಸ್ವತ್ತುಗಳಿಗೂ ಆಸ್ತಿತೆರಿಗೆ ಪಾವತಿ ಮಾಡಬೇಕು. ಈ ಸಂಬಂಧ ಈ ಹಿಂದೆ ಪತ್ರ ಬರೆದಿದ್ದರೂ, ಬಿಎಂಟಿಸಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಈ ಬಗ್ಗೆ ಪಾಲಿಕೆಯ ಅಧಿಕಾರಿಗಳು ಬಿಎಂಟಿಸಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖೀಸಿದ್ದಾರೆ. ಅಲ್ಲದೆ, ಬಿಎಂಟಿಸಿಯೂ ಪಾಲಿಕೆಗೆ “ನ್ಯಾಯಯುತ’ವಾಗಿ ಪಾವತಿಸಬೇಕಾಗಿ ರುವ ಆಸ್ತಿ ತೆರಿಗೆಯನ್ನು ಕೂಡಲೇ ಪಾವತಿಸುವಂತೆ ಸೂಚಿಸಿದ್ದಾರೆ.

ಬಿಎಂಟಿಸಿ ಸ್ವತ್ತುಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಸೇವಾ ಶುಲ್ಕವನ್ನು ಮಾತ್ರ ನಿಗದಿ ಪಡಿಸುವಂತೆ ಬಿಎಂಟಿಸಿಯು ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದು ಮನವಿ ಮಾಡಿತ್ತು. ಬಿಎಂಟಿಸಿ ಈಗ ಸಂಪೂರ್ಣ ಆಸ್ತಿ ತೆರಿಗೆ ಪಾವತಿ ಮಾಡುತ್ತಿದ್ದು, ಸಾರ್ವಜನಿಕ ಸೇವಾ ಸಂಸ್ಥೆಯಾಗಿರುವುದರಿಂದ ಸೇವಾ ತೆರಿಗೆಯನ್ನು ಮಾತ್ರ ಪಾವತಿ ಮಾಡಲು 1976 ಕೆ.ಎಂ.ಸಿ ಕಾಯ್ದೆಗೆ ತಿದ್ದುಪಡಿ ಮಾಡುವಂತೆ ಬಿಎಂಟಿಸಿ ಕೋರಿತ್ತು. ಆದರೆ, ಬಿಎಂಟಿಸಿಯ ಮನವಿಯನ್ನು ನಗರಾಭಿವೃದ್ಧಿ ಇಲಾಖೆಯು ನಿರಾಕರಿಸಿದೆ.

ಈ ನಡುವೆ ಬಿಬಿಎಂಪಿಯು ಆಸ್ತಿ ತೆರಿಗೆ ಹಾಗೂ ಸೇವಾ ತೆರಿಗೆ ಉಳಿಸಿಕೊಂಡಿರುವವರ ಮೇಲೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳುತ್ತಿದ್ದು, ಸರ್ಕಾರಿ ಇಲಾಖೆ ಗಳಿಗೂ ಚುರುಕು ಮುಟ್ಟಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಬಿಎಂಟಿಸಿ, ಬಿಎಂಆರ್‌ಸಿಎಲ್‌ ಸೇರಿದಂತೆ ವಿವಿಧ ಸರ್ಕಾರಿ ಸಂಸ್ಥೆಗಳಿಗೆ ನೋಟಿಸ್‌ ಜಾರಿ ಮಾಡಿದ್ದು, ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿಗಳು ಇದುವರೆಗೆ ಎರಡು ಬಾರಿ ಪತ್ರ ಬರೆದಿದ್ದಾರೆ.

ಸರ್ಕಾರಿ ಆಸ್ತಿ ಜಪ್ತಿಗೂ ಚಿಂತನೆ! :  ಬಿಬಿಎಂಪಿ ವ್ಯಾಪ್ತಿಯಲ್ಲಿ ಸರ್ಕಾರಿ ಸಂಸ್ಥೆಗಳಿಂದ 407 ಆಸ್ತಿಗಳಿಂದ ಪಾಲಿಕೆಗೆ ಅಂದಾಜು 120 ಕೋಟಿ ರೂ. ಮೊತ್ತದ ಆದಾಯ ಪಾಲಿಕೆಗೆ ಬಾಕಿ ಇದೆ. ಈ ಮೊತ್ತವನ್ನು ಪಾವತಿ ಮಾಡುವ ಸಂಬಂಧ ಪಾಲಿಕೆಯೂ ಹಲವು ಬಾರಿ ನೋಟಿಸ್‌ ಜಾರಿ ಮಾಡಿದೆ. ನೋಟಿಸ್‌ ಜಾರಿ ಮಾಡಿದ ಮೇಲೂ ಬಾಕಿ ಮೊತ್ತ ಪಾವತಿ ಮಾಡದೆ ಇರುವವರ ಆಸ್ತಿ ಜಪ್ತಿ ಮಾಡುವ ನಿಟ್ಟಿನಲ್ಲೂ ಚಿಂತನೆ ನಡೆದಿದೆ ಎಂದು ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಉಳಿದ ಸಂಸ್ಥೆಗಳಿಂದ ಹಾಗೂ ಸಾರ್ವಜನಿಕರಿಂದ ಆಸ್ತಿ ತೆರಿಗೆ ಸಂಗ್ರಹಿಸುವ ರೀತಿಯಲ್ಲೇ ಸರ್ಕಾರಿ ಇಲಾಖೆಗಳಿಂದಲೂ ಆಸ್ತಿ ತೆರಿಗೆ ಹಾಗೂ ಸೇವಾ ತೆರಿಗೆ ವಸೂಲಿ ಮಾಡಲಾಗುವುದು.  –ಬಿ.ಎಚ್‌. ಅನಿಲ್‌ಕುಮಾರ್‌, ಬಿಬಿಎಂಪಿ ಆಯುಕ್ತ

 

-ಹಿತೇಶ್‌ ವೈ

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.