ಮಂಗಳೂರು: ಪಂಪ್ವೆಲ್ ಮೇಲ್ಸೇತುವೆ ಲೋಕಾರ್ಪಣೆ
Team Udayavani, Jan 31, 2020, 11:45 AM IST
ಮಂಗಳೂರು: ಮಂಗಳೂರಿನ ಪಂಪ್ವೆಲ್ ಮೇಲ್ಸೇತುವೆಯು ಶುಕ್ರವಾರವಾರದಂದು ಲೋಕಾರ್ಪಣೆಗೊಂಡಿತು. ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಮೇಲ್ಸೇತುವೆಯನ್ನು ಉದ್ಘಾಟಿಸಿದರು.
600 ಮೀಟರ್ ಉದ್ದ ಹಾಗೂ, 20 ಮೀಟರ್ ಅಗಲ ಹೊಂದಿರುವ ಪಂಪ್ವೆಲ್ ಮೇಲ್ಸೇತುವೆ ನಿರ್ಮಾಣಕ್ಕೆ 2010ರಲ್ಲಿ ಚಾಲನೆ ನೀಡಲಾಗಿತ್ತು. ಈ ಮೇಲ್ಸೇತುವೆ ಲೋಕಾರ್ಪಣೆಗೆ ಕಳೆದೆರಡು ವರ್ಷಗಳಿಂದ ಹಲವು ಗಡುವುಗಳನ್ನು ಸಂಸದ ನಳಿನ್ಕುಮಾರ್ ಕಟೀಲು ನೀಡಿದ್ದರು.
ಆದರೆ ಅಂತಿಮವಾಗಿ ಕಳೆದ ಡಿಸೆಂಬರ್ನಲ್ಲಿ ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಮಗಾರಿಯ ಮೇಲುಸ್ತುವಾರಿಯನ್ನು ಜಿಲ್ಲಾಡಳಿತಕ್ಕೆ ವಹಿಸಲಾಗಿತ್ತು. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸಮಕ್ಷಮದಲ್ಲಿ ಗುತ್ತಿಗೆ ವಹಿಸಿಕೊಂಡಿರುವ ನವಯುಗ್ ಕಂಪೆನಿ ಜನವರಿ ಅಂತ್ಯಕ್ಕೆ ಕಾಮಗಾರಿ ಪೂರ್ಣ ಗೊಳಿಸುವ ವಾಗ್ದಾನ ಮಾಡಿತ್ತು. ಅದರಂತೆ ಇದೀಗ ಮೇಲ್ಸೇತುವೆಯು ಲೋಕಾರ್ಪಣೆಗೊಂಡಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.