ಶಿಕ್ಷಕ್ಷರು-ಸ್ವಯಂ ಸೇವಕರಿಗೆ ನಾಡಿದ್ದು ತರಬೇತಿ: ತಿಣ್ಣಪ್ಪ
Team Udayavani, Jan 31, 2020, 3:20 PM IST
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆ.5ರಿಂದ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ನೋಂದಣಿ ಪ್ರತಿನಿಧಿಗಳಿಗೆ ವ್ಯವಸ್ಥಿತ ಸೌಲಭ್ಯ ವಿತರಣೆಗಾಗಿ ಫೆ.2ರಂದು 250 ಎನ್‌ಎಸ್‌ಎಸ್ ಸ್ವಯಂ ಸೇವಕರು ಮತ್ತು ಶಿಕ್ಷಕರಿಗೆ ನೋಂದಣಿ ಕುರಿತು ವಿಶೇಷ ತರಬೇತಿ ನೀಡಲಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯರಾದ ನೋಂದಣಿ ಸಮಿತಿ ಅಧ್ಯಕ್ಷ ತಿಪ್ಪಣ್ಣಪ್ಪ ಕಮಕನೂರ ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ನೋಂದಣಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಫೆ.5ರಂದು ಬೆಳಗ್ಗೆ 6 ಗಂಟೆಗೆ 25 ನೋಂದಣಿ ಕೌಂಟರ್ ಗಳನ್ನು ತೆರೆಯಲಾಗುವುದು. ಸಾಹಿತ್ಯ ಸಮ್ಮೇಳನಕ್ಕೆ ನೋಂದಣಿಯಾದ 22252 ಮಂದಿಗೆ ಗುಣಮಟ್ಟದ ಕಿಟ್‌ಗಳನ್ನು ವಿತರಿಸಲಾಗುವುದು, ವಿಶೇಷ ಪ್ರತಿನಿಧಿ ಗಳಿಗೆ 72 ಬ್ರಿಫ್‌ಕೇಸ್ ನೀಡಲಾಗುವುದು. ಕಿಟ್ ವಿತರಿಸಲು ಮುಂಚಿತವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಫೆ.4ರೊಳಗಾಗಿ ಕಿಟ್ ನೀಡಲಾಗುವುದು ಎಂದರು.
ಕೌಂಟರ್‌ಗಳ ಸ್ಥಳ ಪರಿಶೀಲಿಸಿ ನಂತರ ಪ್ರತಿಯೊಂದು ಜಿಲ್ಲೆಯ ಪ್ರತಿನಿಧಿಗಳಿಗೆ ಕಿಟ್ ವಿತರಿಸಲು ಕಾರ್ಯದರ್ಶಿ ಮತ್ತು ಸದಸ್ಯರನ್ನು ನೇಮಿಸಲಾಗುತ್ತದೆ. ಪ್ರತಿ ನೋಂದಣಿ ಕೌಂಟರ್‌ಗೆ ಪೊಲೀಸ್ ಭದ್ರತೆ ಒದಗಿಸಲಾಗುತ್ತದೆ. ಕಿಟ್ ವಿತರಿಸುವ ಸಂದರ್ಭದಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡಬಾರದು. ವ್ಯವಸ್ಥಿತವಾಗಿ ವಿತರಣೆಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೀರಭದ್ರ ಸಿಂಪಿ, ನೋಂದಣಿ ಸಮಿತಿ ಕಾರ್ಯಾಧ್ಯಕ್ಷರಾದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ್ ಸಂಗಾ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಯುಸೂಫ್ ಅಲಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಬನ್ಸಿ ಪವಾರ್, ಸರ್ವ ಶಿಕ್ಷಣ ಅಭಿಯಾನ ಇಲಾಖೆ ಯೋಜನಾ ಸಮನ್ವಯಾಧಿಕಾರಿ ವೆಂಕಯ್ಯ ಇನಾಂದಾರ್, ಜಿಪಂ ಸದಸ್ಯರಾದ , ಶಿವರಾಜ ಪಾಟೀಲ ರದ್ದೇವಾಡಗಿ, ಶಿವರಾಜ ಅಪ್ಪಾ ಸಾಹೇಬ ಪಾಟೀಲ, ಶಿವರುದ್ರ, ಕಸಾಪ ಪದಾಧಿಕಾರಿಗಳಾದ ದೌಲತರಾಯ ಮಾಲಿಪಾಟೀಲ, ಅಂಬಾಜಿ ಕೌವಲಗಾ, ಡಿ.ಎಂ.ನದಾಫ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.