ಮದ್ಯ ನಿಷೇಧಕ್ಕೆ ನದಿ ಸ್ವಚ್ಛತೆ ಹೋರಾಟ
Team Udayavani, Jan 31, 2020, 4:37 PM IST
ಬಾಗಲಕೋಟೆ: ರಾಜ್ಯಾದ್ಯಂತ ಮದ್ಯ ನಿಷೇಧಿಸುವಂತೆ ಒತ್ತಾಯಿಸಿ ನೂರಾರು ಮಹಿಳೆಯರು ಜಿಲ್ಲೆಯ ಕೂಡಲಸಂಗಮದಲ್ಲಿ ವಿನೂತನ ಪ್ರತಿಭಟನೆ ನಡೆಸುತ್ತಿದ್ದು, ಗುರುವಾರ ನದಿ ಸ್ವಚ್ಛತೆಯ ಶ್ರಮದಾನ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ರಾಜ್ಯದ 16 ಜಿಲ್ಲೆಗಳ ಸುಮಾರು 800ಕ್ಕೂ ಹೆಚ್ಚು ಮಹಿಳೆಯರು, ಕಳೆದ ನಾಲ್ಕು ದಿನಗಳಿಂದ ಕೂಡಲಸಂಗಮದಲ್ಲಿ ವಿವಿಧ ರೀತಿಯ ಹೋರಾಟ ನಡೆಸಿದ್ದು, ಜಲ ಸತ್ಯಾಗ್ರಹ ನಡೆಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದರು. ಗುರುವಾರ ಬೆಳಗ್ಗೆ ನೂರಾರು ಮಹಿಳೆಯರು, ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ತ್ರಿವೇಣಿ ಸಂಗಮವಾದ ಕೃಷ್ಣಾ ನದಿ ಸ್ವಚ್ಛಗೊಳಿಸಿದರು. ತ್ರಿವೇಣಿ ಸಂಗಮವಾದ ಕೂಡಲಸಂಗಮಕ್ಕೆ ನಿತ್ಯ ಸಾವಿರಾರು ಭಕ್ತರು ಬರುತ್ತಿದ್ದು, ಭಕ್ತರು ಸ್ನಾನ ಮಾಡಿ, ನದಿಗೆ ಎಸೆದ ಬಟ್ಟೆ, ಪ್ಲಾಸ್ಟಿಕ್ ಸಹಿತ ವಿವಿಧ ತ್ಯಾಜ್ಯ ಸ್ವಚ್ಛಗೊಳಿಸಿದರು.
ಅಲ್ಲದೇ ಬಸವಣ್ಣನವರ ಐಕ್ಯ ಸ್ಥಳ, ಸಂಗಮೇಶ್ವರ ದೇವಾಲಯ ಮೂಲಕ ಗಮನ ಸೆಳೆಯುವ ಕೂಡಲಸಂಗಮ ಕ್ಷೇತ್ರದ ಬಸ್ ನಿಲ್ದಾಣ, ಪ್ರಮುಖ ರಸ್ತೆಗಳನ್ನೂ ಸ್ವಚ್ಛಗೊಳಿಸಿದರು. ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಚಾಲಕಿ ಸ್ವರ್ಣಾ ಭಟ್, ಎಂ. ಅಭಯ, ಶಂಕರ, ಮಹಾಂತೇಶ ಸೇರಿದಂತೆ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ
ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ
MUST WATCH
ಹೊಸ ಸೇರ್ಪಡೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.