ಜನರಿಗೆ ಕುಷ್ಠರೋಗ ಅರಿವು ಮೂಡಿಸಿ


Team Udayavani, Jan 31, 2020, 4:48 PM IST

bg-tdy-1

ಬೆಳಗಾವಿ: ಜಿಲ್ಲೆಯಾದ್ಯಂತ ಕುಷ್ಠರೋಗ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರಿಗೆ ಹಾಗೂ ವಿಶೇಷವಾಗಿ ಯುವ ಜನಾಂಗಕ್ಕೆ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಿ ಪ್ರಾರಂಭಿಕ ಹಂತದಲ್ಲಿಯೇ ಪರೀಕ್ಷಿಸಿಕೊಂಡು ಉಚಿತವಾಗಿ ಚಿಕಿತ್ಸೆ ಪಡೆದುಕೊಳ್ಳುವಂತೆ ಅರಿವು ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಶಶಿಕಾಂತ ವಿ.ಮುನ್ಯಾಳ ಹೇಳಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್‌, ವಾರ್ತಾ ಇಲಾಖೆ, ಸ್ವಯಂ ಸೇವಾ ಸಂಸ್ಥೆಗಳು , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಜಿಲ್ಲಾ ಕುಷ್ಠರೋಗ ವಿಭಾಗ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಸಹಯೋಗದಲ್ಲಿ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮ ಅಂಗವಾಗಿ ಗುರುವಾರ ನಡೆದ ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನವರಿ 30ರಿಂದ ಫೆಬ್ರುವರಿ 13ರವರೆಗೆ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನವನ್ನು ಜಿಲ್ಲೆಯಾದ್ಯಂತ ಆಚರಿಸಲಾಗುತ್ತಿದೆ. ಇದರ ಬಗ್ಗೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಸಾರ್ವಜನಿಕರಿಗೆ ತಿಳಿಸಬೇಕು. ಬೆಳಗಾವಿನಗರದ ಕೊಳಚೆ ಪ್ರದೇಶಗಳಲ್ಲಿ ವಿಶೇಷವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಜಾಗೃತಿ ಮೂಡಿಸಿ ಕುಷ್ಠ ರೋಗದಿಂದಬಳಲುತ್ತಿರುವವರನ್ನು ಗುರುತಿಸಿ ಅವರನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ಆರೋಗ್ಯಾಧಿಕಾರಿ ಡಾ|ಸಂಜಯ ಡುಮ್ಮಗೊಳ ಮಾತನಾಡಿ ಸ್ಪರ್ಶಕುಷ್ಠರೋಗ ಜಾಗೃತಿ ಅಭಿಯಾನದಲ್ಲಿ ಜಿಲ್ಲೆಯ ಎಲ್ಲ ಆರೋಗ್ಯ ಕಾರ್ಯಕರ್ತೆಯರು, ಆಶಾ ಹಾಗೂ ಆರ್‌ಬಿಎಸ್‌ಕೆ ತಂಡದವರು ಸಕ್ರಿಯವಾಗಿ ಭಾಗವಹಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸುವಂತೆ ಕರೆ ನೀಡಿದರು.

ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ| ಚಾಂದಿನಿ ಜಿ. ದೇವಡಿ ಮಾತನಾಡಿದರು. ಶಾರದಾ ಬನಗಾರ ಪ್ರಾರ್ಥಿಸಿದರು. ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಪಿ.ಯಲಿಗಾರ ಸ್ವಾಗತಿಸಿದರು. ಸಿ.ಜಿ. ಅಗ್ನಿಹೋತ್ರಿ ವಂದಿಸಿದರು. ಡಾ| ಅನಿಲ ಕೊರಬು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.