ಮಂಗಳೂರಲ್ಲಿ “ಸಲಗ’
ಕರಾವಳಿ ಭೂಗತ ಲೋಕದ ನಂಟು?
Team Udayavani, Feb 1, 2020, 7:02 AM IST
ದುನಿಯಾ ವಿಜಯ್ ನಿರ್ದೇಶನದ “ಸಲಗ’ ಚಿತ್ರದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಿ ಮುಗಿಸಿರುವ ಚಿತ್ರತಂಡ ಈಗ ಮಂಗಳೂರಿನಲ್ಲೂ ಚಿತ್ರೀಕರಿಸಿದೆ. ಚಿತ್ರದ ಕೆಲವು ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿದೆ. ಹಾಗಾದರೆ, “ಸಲಗ’ ಚಿತ್ರಕ್ಕೆ ಮಂಗಳೂರು ಅಂಡರ್ವರ್ಲ್ಡ್ನ ನಂಟಿದೆಯಾ ಎಂಬ ಪ್ರಶ್ನೆ ಬರೋದು ಸಹಜ. ಆದರೆ, ಈ ಪ್ರಶ್ನೆಗೆ ಈಗಲೇ ಉತ್ತರಿಸಲು ಚಿತ್ರತಂಡ ತಯಾರಿಲ್ಲ.
ಆದರೆ, ಮಂಗಳೂರಿನ ಕೆಲವು ರಗಡ್ ಲೊಕೇಶನ್ಗಳಲ್ಲಿ ಚಿತ್ರೀಕರಿಸಲಾಗಿದೆ. ಈಗಾಗಲೇ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಔಟ್ ಅಂಡ್ ಔಟ್ ಆ್ಯಕ್ಷನ್ ಸಿನಿಮಾ ಎಂಬುದು ಸಾಬೀತಾಗಿದೆ. ಈಗ ಮಂಗಳೂರಿನಲ್ಲಿ ಚಿತ್ರೀಕರಣವಾಗುವ ಮೂಲಕ ಚಿತ್ರ ಮತ್ತಷ್ಟು ಕುತೂಹಲ ಮೂಡಿಸಿರುವುದು ಸುಳ್ಳಲ್ಲ. “ಸಲಗ’ ಚಿತ್ರ ಹಲವು ವಿಶೇಷಗಳಿಂದ ಕೂಡಿದ್ದು, ಅದರಲ್ಲಿ ಕಡಲೆ ಕಾಯಿ ಪರಿಷೆಯಲ್ಲಿ ಚಿತ್ರೀಕರಿಸಿರೋದು ಕೂಡಾ ಒಂದು.
ಆರಂಭದಲ್ಲಿ ಕಡಲೆಕಾಯಿ ಪರಿಷೆಯಲ್ಲಿ ಚಿತ್ರೀಕರಿಸಿದ ಚಿತ್ರತಂಡ ಆ ನಂತರ ಮತ್ತೂಮ್ಮೆ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದ ಆವರಣದಲ್ಲಿ ಮತ್ತೂಮ್ಮೆ ಕಡಲೆ ಕಾಯಿ ಪರಿಷೆ ಸೆಟ್ ನಿರ್ಮಿಸಿರುವ ಚಿತ್ರತಂಡ, ಬಿಟ್ಟು ಹೋಗಿರುವ ಕ್ಲೈಮ್ಯಾಕ್ಸ್ ದೃಶ್ಯಗಳನ್ನು ಚಿತ್ರೀಕರಿಸಿದೆ. ಕೆ.ಪಿ.ಶ್ರೀಕಾಂತ್ ನಿರ್ಮಾಣದ ಈ ಚಿತ್ರದಲ್ಲಿ ವಿಜಯ್ಗೆ ನಾಯಕಿಯಾಗಿ ಸಂಜನಾ ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.