‘ನರೇಂದ್ರ ಮೋದಿಯವರು ಭಾರತದ ಪ್ರಧಾನಿ’ : ಪಾಕ್ ವಿರುದ್ಧ ಕೇಜ್ರಿವಾಲ್ ಕಿಡಿ
Team Udayavani, Jan 31, 2020, 9:55 PM IST
ನವದೆಹಲಿ: ದೆಹಲಿ ಚುನಾವಣೆ ಕುರಿತು ಮೂಗು ತೂರಿಸಲು ಬಂದ ಪಾಕ್ ಸಚಿವರನ್ನು ದೆಹಲಿ ಸಿಎಂ ಕೇಜ್ರಿವಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಶುಕ್ರವಾರ ಟ್ವೀಟ್ ಮಾಡಿದ್ದ ಪಾಕ್ ಸಚಿವ ಫವಾದ್ ಹುಸೇನ್, “ದೆಹಲಿ ಚುನಾವಣೆಯಲ್ಲಿ ಭಾರತೀಯರು ಮೋದಿಯವರ ಹುಚ್ಚುತನವನ್ನು ಸೋಲಿಸಬೇಕು. ಮತ್ತೂಂದು ರಾಜ್ಯವನ್ನು ಕಳೆದುಕೊಳ್ಳುವ ಭೀತಿಯಿಂದ ಮೋದಿಯವರು ಅಸಂಬದ್ಧ ಆರೋಪ ಮಾಡುವ, ಭಯದ ವಾತಾವರಣ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದರು.
ಇದಕ್ಕೆ ಖಡಕ್ಕಾಗಿ ತಿರುಗೇಟು ನೀಡಿರುವ ಸಿಎಂ ಕೇಜ್ರಿವಾಲ್, “ದೆಹಲಿ ಚುನಾವಣೆಯು ಭಾರತದ ಆಂತರಿಕ ವಿಚಾರ. ನರೇಂದ್ರ ಮೋದಿಯವರು ಭಾರತದ ಪ್ರಧಾನಿ. ಅವರು ನನ್ನ ಪ್ರಧಾನಿಯೂ ಹೌದು. ನಮ್ಮ ದೇಶದ ಆಂತರಿಕ ವಿಚಾರದಲ್ಲಿ ಭಯೋತ್ಪಾದನೆಯ ಪ್ರಾಯೋಜಕರಾದ ನೀವು ಮಧ್ಯಪ್ರವೇಶಿಸುವ ಅಗತ್ಯವಿಲ್ಲ’ ಎಂದಿದ್ದಾರೆ. ಪಾಕಿಸ್ತಾನ ಎಷ್ಟೇ ಪ್ರಯತ್ನಿಸಿದರೂ, ಭಾರತದ ಏಕತೆಗೆ ಧಕ್ಕೆ ತರಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ
1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!
BJP; ಒಂದಾಗಿದ್ದರಷ್ಟೇ ಸುರಕ್ಷೆ: ಯೋಗಿ ಬಳಿಕ ಮೋದಿ ಹೊಸ ಸ್ಲೋಗನ್!
Vladimir Putin; ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಗಳಿಸಲು ಭಾರತ ಅರ್ಹ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
MUST WATCH
ಹೊಸ ಸೇರ್ಪಡೆ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ
Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.