ಕೊರೊನಾ: ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ
Team Udayavani, Feb 1, 2020, 3:05 AM IST
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಆತಂಕ ಮೂಡಿಸಿರುವ ಕೊರೊನಾ ವೈರಸ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಅಧಿಕಾರಿಗಳು ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್‌ನಲ್ಲಿ ಕೊರೊನಾ ವೈರಸ್ ಬಗ್ಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿ ಕೆಲವು ನಿರ್ಣಯ ಕೈಗೊಳ್ಳಲಾಯಿತು.
ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಯಲ್ಲಿ ಈಗಾಗಲೇ 15 ಹಾಸಿಗೆಗಳು ಹಾಗೂ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ 10 ಹಾಸಿಗೆಗಳ ಸುಸಜ್ಜಿತ ವಾರ್ಡ್ ತೆರೆಯಲಾಗಿದೆ. ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲೂ 5 ಹಾಸಿಗೆಯುಳ್ಳ ವಿಶೇಷ ವಾರ್ಡ್ ತೆರೆಯಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಏನೇನು ನಿರ್ಣಯ?
-ವಿಮಾನ ನಿಲ್ದಾಣಗಳಲ್ಲಿ ಚೀನಾದಿಂದ ಬರುವ ಪ್ರಯಾಣಿಕರ ತಪಾಸಣೆಯನ್ನು ಇನ್ನೂ ಉತ್ತಮಗೊಳಿ ಸುವುದು ಹಾಗೂ ಮಂಗಳೂರು, ಕಾರವಾರ ಬಂದರುಗಳಲ್ಲೂ ಪ್ರಯಾಣಿಕರ ತಪಾಸಣೆ ಕೈಗೊಳ್ಳುವುದು.
-ಚೀನಾದ ವುಹಾನ್ ನಗರದಿಂದ ಜ.15ರಿಂದ ಬಂದಂಥ ಎಲ್ಲ ಪ್ರಯಾಣಿಕರ ಮೇಲೆ ನಿಗಾ ವಹಿಸಲು ಕ್ರಮ ಕೈಗೊಳ್ಳುವುದು. ಸಂಶಯಾಸ್ಪದ ಪ್ರಕರಣಗಳಲ್ಲಿ ಪರೀಕ್ಷೆಗೆ ಒಳಪಡಿಸಿ ನಿಯಮಾನುಸಾರ 28 ದಿನಗಳವರೆಗೂ ನಿಗಾ ವಹಿಸುವುದು.
-ಮನೆ ಹಾಗೂ ಸಮುದಾಯದಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಸಾರ್ವಜನಿಕರಿಗೆ ತಿಳಿಸುವುದು.
ತೀವ್ರ ನಿಗಾದಲ್ಲಿ 21 ಮಂದಿ: ಜ.30ರ ವರದಿಯಂತೆ ರಾಜ್ಯದಲ್ಲಿ 21 ಪ್ರಯಾಣಿಕರು ತೀವ್ರ ನಿಗಾದಲ್ಲಿದ್ದು ಸಂಶಯಾಸ್ಪದ 10 ಮಂದಿಗೆ ರಾಜೀವ್‌ಗಾಂಧಿ ಎದೆ ರೋಗಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 11 ಮಂದಿಗೆ ಮನೆಯಲ್ಲೇ ಪ್ರತ್ಯೇಕಿಸಿ ನಿಗಾ ವಹಿಸಲಾಗಿದೆ.
13 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಅದರಲ್ಲಿ 4 ಮಾದರಿಗಳು ನೋವಲ್ ಕರೋನಾ ವೈರಸ್ ನೆಗೆಟಿವ್ ವರದಿ ಬಂದಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜ.31 ರಂದು ಹುವಾನ್‌ನಿಂದ ಬಂದಿರುವ 20 ಮಂದಿ ಪ್ರಯಾಣಿಕರ ಸ್ಯಾಂಪಲ್ಸ್ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.