ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್‌ ಸಿಬಂದಿ ಮುಷ್ಕರ


Team Udayavani, Feb 1, 2020, 1:50 AM IST

kat-21

ಮಂಗಳೂರು/ಉಡುಪಿ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಆಯೋಜಿಸಿದ್ದ ಬ್ಯಾಂಕ್‌ ಮುಷ್ಕರಕ್ಕೆ ಕರಾವಳಿಯಲ್ಲಿ ಸ್ಪಂದನೆ ವ್ಯಕ್ತವಾಗಿದ್ದು, ಬ್ಯಾಂಕ್‌ ವ್ಯವಹಾರ ಸ್ಥಗಿತಗೊಳಿಸಲಾಗಿತ್ತು. ಮಂಗಳೂರು ಬಲ್ಮಠ ಮತ್ತು ಉಡುಪಿ ಕೋರ್ಟ್‌ ರಸ್ತೆಯ ಕೆನರಾ ಬ್ಯಾಂಕ್‌ ಕಚೇರಿ ಎದುರು ಶುಕ್ರವಾರ ಬ್ಯಾಂಕ್‌ ನೌಕರರು ಪ್ರತಿಭಟನೆ ನಡೆಸಿದ್ದರು. ನೂರಾರು ಮಂದಿ ಬ್ಯಾಂಕ್‌ ನೌಕರರು ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಯುನೈಟೆಡ್‌ ಫೋರಂ ಆಫ್‌ ಬ್ಯಾಂಕ್‌ ಯೂನಿಯನ್ಸ್‌ ಕೂಡ ಬೆಂಬಲ ಸೂಚಿಸಿದೆ. ಶನಿವಾರ ಕೂಡ ಬ್ಯಾಂಕ್‌ಗಳು ಬಂದ್‌ ಆಗಲಿದೆ. ಕೆಲವು ಎಟಿಎಂಗಳಲ್ಲಿ ಶುಕ್ರವಾರ ದಂದು ಹಣ ಇತ್ತು. ಬ್ಯಾಂಕ್‌ಗೆ ರಜಾ ಇದ್ದ ಕೆಲವೊಂದು ಎಟಿಎಂಗಳಲ್ಲಿ ಹೆಚ್ಚಿದ ಜನಸಂದಣಿ ಇತ್ತು. ಈ ಬಾರಿಯ ಪ್ರತಿಭಟನೆಗೂ ಸರಕಾರ ಮಣಿಯದಿದ್ದರೆ ಮಾ.11, 12 ಮತ್ತು 13ರಂದು ಒಟ್ಟು 3 ದಿನ ಮುಷ್ಕರ ನಡೆಸಲಿದ್ದೇವೆ. ಇವೆರಡೂ ಪ್ರತಿಭಟನೆಗಳಿಗೂ ವೇತನ ಒಪ್ಪಂದ ಸರಿಪಡಿಸದಿದ್ದರೆ, ಎ.1ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಿದ್ದೇವೆ ಎಂದಿದ್ದಾರೆ.

ಮುಷ್ಕರ: ಅಂಚೆ ಇಲಾಖೆ ಆಶ್ರಯಿಸಿದ ಜನ!
ಕುಂದಾಪುರ: ಬ್ಯಾಂಕ್‌ ಮುಷ್ಕರ ನಡೆಯುತ್ತಿರುವಂತೆಯೇ ಜನ ಹಣಕಾಸಿನ ವಹಿವಾಟಿಗೆ ಅಂಚೆ ಇಲಾಖೆಯನ್ನು ಆಶ್ರಯಿಸಿದ್ದಾರೆ.

ಶುಕ್ರವಾರ ತಾಲೂಕಿನ ವಿವಿಧೆಡೆ ಅಂಚೆ ಇಲಾಖೆ ಮೂಲಕ ಹಣಕಾಸಿನ ವ್ಯವಹಾರ ನಡೆದಿದೆ. ಬ್ಯಾಂಕ್‌ ಅಥವಾ ಎಟಿಎಂ ಇಲ್ಲದಿದ್ದರೆ ನಿಮ್ಮ ಸಮೀಪದ ಅಂಚೆ ಕಚೇರಿಗೆ ಭೇಟಿ ನೀಡಿ ಆಧಾರ್‌ ಕಾರ್ಡ್‌ ನೀಡಿದರೆ ಅಲ್ಲಿ ಬೆರಳಚ್ಚು ಪಡೆಯುವ ಮೂಲಕ ವ್ಯವಹಾರ ನಡೆಸಲಾಗುತ್ತದೆ. ಯಾವುದೇ ಬ್ಯಾಂಕಿನಲ್ಲಿರುವ ಆಧಾರ್‌ ಸಂಖ್ಯೆಗೆ ಲಿಂಕ್‌ ಆದ ಖಾತೆಯ ಹಣ ಪಡೆಯಬಹುದು, ಖಾತೆಯ ಬ್ಯಾಲೆನ್ಸ್‌ ಮಾಹಿತಿ ಪಡೆಯಬಹುದು. ಅಂಚೆ ಇಲಾಖೆ ಕೂಡ ಈ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದು, ಬ್ಯಾಂಕ್‌ ಮುಷ್ಕರದ ಮಧ್ಯೆಯೇ ಇಂತಹ ಕೆಲವು ಆಶಾದಾಯಕ ಬೆಳವಣಿಗೆಗಳು ಜನ ಹೆಚ್ಚು ಹೆಚ್ಚು ಬಾರಿ ಅಂಚೆ ಕಚೇರಿಯೆಡೆಗೆ ಹೋಗುವಂತೆ ಮಾಡಿದೆ.

ಅಂಚೆ ಇಲಾಖೆ ಕಚೇರಿಯಲ್ಲಷ್ಟೇ ಅಲ್ಲದೆ ಗ್ರಾಮೀಣ ಅಂಚೆ ಸೇವಕರಲ್ಲೂ ಆಧಾರ್‌ ಎಟಿಎಂ ಮೂಲಕ ಈ ಸೌಲಭ್ಯ ದೊರೆಯುವಂತೆ ಮಾಡಿದೆ. ಈ ಯಾವುದೇ ಸೇವೆಗಳಿಗೆ ಅಂಚೆ ಇಲಾಖೆಗೆ ಶುಲ್ಕ ನೀಡಬೇಕಿಲ್ಲ.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ

Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.