ಬ್ಯಾಂಕ್ ನೌಕರರ ಮುಷ್ಕರ; ಗ್ರಾಹಕರ ಪರದಾಟ
Team Udayavani, Feb 1, 2020, 12:29 PM IST
ಬಾಗಲಕೋಟೆ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಸಿ ಯುನೈಟೆಡ್ ಫಾರ್ಮ ಆಫ್ ಬ್ಯಾಂಕ್ ಯೂನಿಯನ್ ಒಕ್ಕೂಟ ಕರೆ ನೀಡಿದ್ದ ಮುಷ್ಕರಕ್ಕೆ ಬೆಂಬಲ ಸೂಚಿಸಿ ಬ್ಯಾಂಕ್ ನೌಕರರು ಪ್ರತಿಭಟಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎದುರು ಪ್ರತಿಭಟಿಸಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತಿದೆ. ಸಿಬ್ಬಂದಿಗೆ ಸುಗಮವಾಗಿ ಕಾರ್ಯನಿರ್ವಹಿಸಲು ಹೆಚ್ಚಿನ ಸಮಯ ಕೆಲಸ ಮಾಡುವ ಸ್ಥಿತಿ ಬಂದಿದೆ. ನೌಕರರ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕೆಟ್ಟ ಪರಿಣಾಮ ಬೀರುತ್ತಿದೆ. ಕೇಂದ್ರ ಸರ್ಕಾರ ಬ್ಯಾಂಕ್ ನೌಕರರ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.
ವೇತನದ ಮೇಲೆ ಶೇ. 20 ಏರಿಕೆ, ವಾರದಲ್ಲಿ ಐದು ದಿನ ಕಾರ್ಯನಿರ್ವಹಣೆ, ಹೊಸ ಪಿಂಚಣಿ ವ್ಯವಸ್ಥೆ ಕೈ ಬಿಟ್ಟು, ಹಳೇ ಪಿಂಚಣಿ ವ್ಯವಸ್ಥೆ ಜಾರಿ ಮಾಡಬೇಕು. ಕುಟುಂಬ ಪಿಂಚಣಿ ಪರಿಷ್ಕರಣೆ, ಬ್ಯಾಂಕಿನ ವ್ಯವಹಾರ ಹಾಗೂ ವಿಶ್ರಾಂತಿಯ ಸಮಯ ಕ್ರಮಬದ್ಧವಾಗಿ ರೂಪಿಸಬೇಕು. ನಿವೃತ್ತಿ ಸೌಲಭ್ಯಗಳ ಮೇಲೆ ಆದಾಯ ತೆರಿಗೆ ವಿನಾಯಿತಿ ನೀಡಬೇಕು. ಅ ಧಿಕಾರಿಗಳಿಗೆ ಕಾರ್ಯನಿರ್ವಹಣೆ ಸಮಯ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸರ್ಕಾರ ಬ್ಯಾಂಕ್ ನೌಕರರ ಸಮಸ್ಯೆ ಆಲಿಸಿ ಪರಿಹರಿಸುವಲ್ಲಿ ವಿಫಲವಾಗಿದೆ. ನೌಕರರ ಬೇಡಿಕೆ ಈಡೇರಿಸಲು ನಿರ್ಲಕ್ಷ್ಯ ತೋರುತ್ತಿದೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೇ ಹೋರಾಟ ತೀವ್ರಗೊಳ್ಳಲಿದೆ ಎಂದು ಎಚ್ಚರಿಸಿದರು.
ಇಂದೂ ಮುಷ್ಕರ: ರಾಷ್ಟ್ರೀಯ ಬ್ಯಾಂಕ್‌ಗಳ ನೌಕರರು ಮುಷ್ಕರ ಶನಿವಾರವೂ ಕೂಡಾ ಮುಂದುವರಿಸಲಿದ್ದಾರೆ. ನಗರ ಮತ್ತು ಗ್ರಾಮೀಣ ಭಾಗದಲ್ಲಿ ಗ್ರಾಹಕರಿಗೆ ಯಾವುದೇ ಬ್ಯಾಂಕಿಂಗ್ ಸೇವೆ ಸಿಗುವುದಿಲ್ಲ. ಸೋಮವಾರ ಎಲ್ಲ ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಪ್ರಮುಖರಾದ ವಿ.ಎ. ದೇಶಪಾಂಡೆ, ಆರ್.ಎಸ್. ಪಾಪನಾಳ ಸೇರಿದಂತೆ ವಿವಿಧ ರಾಷ್ಟ್ರೀಕೃತ ಬ್ಯಾಂಕ್ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.