ವೇತನ ಒಪ್ಪಂದ ಶೀಘ್ರ ಜಾರಿಗೆ ಒತ್ತಾಯ
11ನೇದ್ವಿಪಕ್ಷ ವೇತನ ಒಪ್ಪದಿಂದ ಕೂಡಲೇ ಜಾರಿ ಮಾಡಿ ಮೂಲಭತ್ಯೆಯೊಂದಿಗೆ ವಿಶೇಷ ಭತ್ಯೆ ವಿಲೀನಗೊಳಿಸಿ
Team Udayavani, Feb 1, 2020, 12:51 PM IST
ರಾಯಚೂರು: 11ನೇ ದ್ವಿಪಕ್ಷ ವೇತನ ಒಪ್ಪಂದವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಖೀಲ ಭಾರತ ಬ್ಯಾಂಕ್ ಮುಷ್ಕರದ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಶುಕ್ರವಾರ ನಗರದ ಸ್ಟೇಷನ್ ರಸ್ತೆಯಲ್ಲಿರುವ ಎಸ್‌ಬಿಐ ಎದುರು ಪ್ರತಿಭಟನೆ ನಡೆಸಿದರು.
ಈಗಾಗಲೇ ಕೇಂದ್ರ ಸರ್ಕಾರವು ವೇತನ ಒಪ್ಪಂದ ಮಾಡಿದೆ. ಆದರೆ, ಇದುವರೆಗೂ ಜಾರಿಗೊಳಿಸದೇ ಇರುವ ಕ್ರಮ ಖಂಡನೀಯ. ಕೇಂದ್ರ ಸರ್ಕಾರ ಬ್ಯಾಂಕ್ ಉದ್ಯೋಗಿಗಳ ವಿರೋಧಿ ನೀತಿ ಜಾರಿಗೆ ತರಬಾರದು ಹಾಗೂ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಯನ್ನು
ಜಾರಿಗೊಳಿಸಬೇಕು. ವಿಶೇಷ ಭತ್ಯೆಯನ್ನು ಮೂಲಭತ್ಯೆಯೊಂದಿಗೆ ವಿಲೀನಗೊಳಿಸಬೇಕು ಎಂದು ಆಗ್ರಹಿಸಿದರು.
ಎನ್‌ಪಿಎಸ್ ಪಿಂಚಣಿ ಯೋಜನೆ ರದ್ದುಪಡಿಸಬೇಕು ಮತ್ತು ಪಿಂಚಣಿ ಪರಿಷ್ಕರಣೆ ಮಾಡಬೇಕು. ಕುಟುಂಬ ಪಿಂಚಣಿ ಪರಿಷ್ಕರಣೆ ಕೂಡಲೇ ಮಾಡಬೇಕು. ಬ್ಯಾಂಕ್ ಗಳ ನಿರ್ವಹಣೆ ಲಾಭದ ಮೇಲೆ ಸಿಬ್ಬಂದಿ ಕಲ್ಯಾಣ ನಿಧಿ ಮೀಸಲಿಡಬೇಕು ಎಂದು
ಒತ್ತಾಯಿಸಿದರು.
ನಿವೃತ್ತ ನಂತರ ದೊರೆಯುವ ಹಣದ ಮೇಲೆ ಸಂಪೂರ್ಣ ತೆರಿಗೆ ವಿನಾಯ್ತಿ
ನೀಡಬೇಕು. ಶಾಖೆಗಳ್ಲಲಿ ಒಂದೇ ತರವಾದ ವ್ಯವಹಾರ ಸಮಯ ಜಾರಿಗೆ ತರಬೇಕು.
ಬ್ಯಾಂಕ್ ಮಿತ್ರರಿಗೆ ಹಾಗೂ ಗುತ್ತಿಗೆ ನೌಕರರಿಗೆ ಸಮಾನ ಕೆಲಸ ಸಮಾನ ವೇತನ ಪದ್ಧತಿ ಜಾರಿಗೊಳಿಸಬೇಕು. ಬ್ಯಾಂಕ್‌ಗಳ ನಿವೃತ್ತ ನೌಕರರ ಬೇಡಿಕೆ ಈಡೇರಿಸಬೇಕು ಮತ್ತು ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆ ನಿಲ್ಲಿಸಬೇಕು. ರಾಷ್ಟ್ರೀಕೃತ ಬ್ಯಾಂಕ್ ಗಳನ್ನು ದುರ್ಬಲಗೊಳಿಸಬಾರದು. ವಿಸ್ತಾರಗೊಳಿಸಬೇಕು. ವಸೂಲಾಗದ ಸಾಲ ವಸೂಲಾತಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಸಾಲ ಮರುಪಾವತಿ ಮಾಡದ ಉದ್ದೇಶ ಪೂರ್ವಕ ಸಾಲ ಸುಸ್ತಿದಾರರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಒತ್ತಾಯಿಸಿದರು.
ಬ್ಯಾಂಕ್ ನೌಕರರ ಸಂಘದ ಪದಾಧಿಕಾರಿಗಳಾದ ಸೋಮಶೇಖರ,
ಕುಮಾರ, ಸಲಾವುದ್ದೀನ್, ಗೋವಿಂದರಾವ್, ಜೆ. ಸಿದ್ದಯ್ಯ, ಕೆ. ಪದ್ಮಾವತಿ, ವಾಣಿಶ್ರೀ
ಕುಲಕರ್ಣಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.