ಕೇಂದ್ರ ಬಜೆಟ್ 2020: ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಹತ್ತರದ ನಿರ್ಧಾರ
ದೇಶದಲ್ಲಿ ತಲೆ ಎತ್ತಲಿದೆ ರಾಷ್ಟ್ರೀಯ ಪೊಲೀಸ್ ವಿಶ್ವ ವಿದ್ಯಾಲಯ
Team Udayavani, Feb 1, 2020, 1:43 PM IST
ಹೊಸದಿಲ್ಲಿ: ದೇಶದಲ್ಲಿ ಹೊಸ ಶಿಕ್ಷಣ ನೀತಿಯನ್ನು ಜಾರಿ ಮಾಡುವ ಹಿನ್ನೆಲೆ ಶೀಘ್ರದಲ್ಲಿ ಈ ಕುರಿತಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ 2020 ಯಲ್ಲಿ ಘೋಷಣೆ ಮಾಡಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದ ಅವರು ಶಿಕ್ಷಣ ಕ್ಷೇತ್ರಕ್ಕೆ 99,300 ಕೋಟಿ ಅನುದಾನವನ್ನು ಘೋಷಣೆ ಮಾಡಿದ್ದಾರೆ.
ಈ ವೇಳೆ ಕೇಂದ್ರ ಸರಕಾರ ಶೀಘ್ರದಲ್ಲಿ ಹೊಸ ಶಿಕ್ಷಣ ನೀತಿಯನ್ನು ಪ್ರಕಟಿಸಲಿದ್ದು, ಈ ಹಿನ್ನೆಲೆ ಸರಕಾರಕ್ಕೆ 2 ಲಕ್ಷಕ್ಕೂ ಅಧಿಕ ಸಲಹೆಗಳು ಬಂದಿವೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ ಸಾಲಿನ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 99,300 ಕೋಟಿ ಹಾಗೂ ಮುಂದಿನ ಹಣಕಾಸು ವರ್ಷದಲ್ಲಿ ಕೌಶಲ್ಯ ಅಭಿವೃದ್ಧಿಗಾಗಿ 3,000 ಕೋಟಿ ರೂ.ನೀಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಇಂಟರ್ನ್ ಶಿಪ್ ಅವಕಾಶಕ್ಕೆ ಆದ್ಯತೆ
ಶಿಕ್ಷಣ ಕ್ಷೇತ್ರದಲ್ಲಿ ಬಾಹ್ಯ ವಾಣಿಜ್ಯ ಸಾಲ ಮತ್ತು ವಿದೇಶಿ ನೇರ ಬಂಡವಾಳವನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗುವುದು. ಯುವ ಎಂಜಿನಿಯರ್‌ಗಳಿಗೆ ಇಂಟರ್ನ್ ಶಿಪ್ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕ್ರಮಳನ್ನು ಆಯೋಜಿಸಲು ಸರಕಾರ ಯೋಜನೆ ರೂಪಿಸಿದೆ ಎಂದು ಎಂದು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು.
ಪೊಲೀಸ್ ವಿಶ್ವ ವಿದ್ಯಾಲಯ
ರಾಷ್ಟ್ರೀಯ ಪೊಲೀಸ್ ವಿಶ್ವ ವಿದ್ಯಾಲಯ ಮತ್ತು ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ ಸ್ಥಾಪನೆ ಮಾಡಲಾಗುವುದು. ಹಾಗೂ ಟಾಪ್ 100 ಸ್ಥಾನದಲ್ಲಿರುವ ಸಂಸ್ಥೆಗಳಿಂದ ಪದವಿ ಮಟ್ಟದ ಪೂರ್ಣ ಪ್ರಮಾಣದ ಆನ್ ಲೈನ್ ಶಿಕ್ಷಣ ಕಾರ್ಯಕ್ರಮವನ್ನು ಅವಕಾಶ ನೀಡಲು ನಿರ್ಧರಿಸಲಾಗಿದೆ.
ವಿಶೇಷ ಬ್ರಿಡ್ಜ್ ಕೋರ್ಸ್‌ಗಳ ಆರಂಭ
ವೈದ್ಯರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ‘ಪಿಪಿಪಿ’ (ಸಾರ್ವಜನಿಕ, ಖಾಸಗಿ ಸಹಭಾಗಿತ್ವ) ಮಾದರಿಯಲ್ಲಿ ಜಿಲ್ಲಾ ಆಸ್ಪತ್ರೆಗಳೊಂದಿಗೆ ವೈದ್ಯಕೀಯ ಕಾಲೇಜುಗಳನ್ನು ಜೋಡಿಸಲಾಗುತ್ತದೆ. ಶಿಕ್ಷಕರು, ದಾದಿಯರು, ಪ್ಯಾರಾ ವೈದ್ಯಕೀಯ ಸಿಬ್ಬಂದಿ, ಆರೈಕೆದಾರರಿಗಾಗಿ ವಿಶೇಷ ಬ್ರಿಡ್ಜ್ ಕೋರ್ಸ್‌ಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Budget 2024-25; ಕೇಂದ್ರಕ್ಕೆ ಏಟು, ರಾಜ್ಯಕ್ಕೆ ಸ್ವೀಟು!
Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ
Budget 2024-25; ಬೆಂಗಳೂರು, ಮೈಸೂರಿಗೆ ಸಿಂಹಪಾಲು; ಉತ್ತರಕ್ಕೆ ಸಮಪಾಲು
Expert’s Opinion: ಗ್ಯಾರಂಟಿ ಭಾರ ಇಲ್ಲದಿದ್ದರೆ ಇನ್ನೂ ಉತ್ತಮ ಆಗಿರುತ್ತಿತ್ತು
Start-up Sector; ನವ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್ ಅಪ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.