ಜಾಗ ಒತ್ತುವರಿ ವಿರೋಧಿಸಿ ಪ್ರತಿಭಟನೆ
ಅಧಿಕಾರಿಗಳು-ಜನಪ್ರತಿನಿಧಿಗಳು ಕಾನೂನು ಕ್ರಮ ಕೈಗೊಳ್ಳಲು ಮುಂದಾಗಲಿ
Team Udayavani, Feb 1, 2020, 1:55 PM IST
ಸಿಂಧನೂರು: ವ್ಯಕ್ತಿಯೊಬ್ಬರು ಜಾಗ ಒತ್ತುವರಿ ಮಾಡಿಕೊಂಡಿರುವುದನ್ನು ವಿರೋಧಿಸಿ ಅಮರಾಪುರ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.
4.01 ಗುಂಟೆ ಜಾಗೆ ಶಾಲೆಗೆ ಸೇರಿದೆ. ಅಲ್ಲದೇ ಶಾಲೆ ಹೆಸರಿನಲ್ಲಿಯೇ ಎಲ್ಲ ದಾಖಲಾತಿ ಇವೆ. ಖಾಸಗಿ ವ್ಯಕ್ತಿ 100 ಅಡಿ ಜಾಗೆಯಲ್ಲಿ ಸುಮಾರು ವರ್ಷಗಳಿಂದ ಗುಡಿಸಲು ಹಾಕಿಕೊಂಡಿದ್ದಾನೆ. ಈ ಜಾಗೆ ಆ ವ್ಯಕ್ತಿಗೆ ಸೇರಿದ್ದಲ್ಲ. ಇದು ಸರಕಾರಿ ಜಾಗೆಯಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾನೂನು ಕ್ರಮಕ್ಕೆ ಮುಂದಾಗಬೇಕು
ಹಾಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಸಹಕರಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕ್ಷೇತ್ರ ಶಿಕ್ಷಣ ಕಚೇರಿ ಎದುರು ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.
ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ ಅಮರಾಪುರ ಮಾತನಾಡಿ, ಜಾಗೆ ತೆರವುಗೊಳಿಸುವಂತೆ 5 ತಿಂಗಳ ಹಿಂದೆ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಈ ದೂರು ನೀಡಿ
ಸುಮಾರು 5 ತಿಂಗಳಾದರು ಯಾವುದೇ ಪ್ರಯೋಜನವಾಗಿಲ್ಲ. ಅದಕ್ಕಾಗಿ ಶಾಲೆ ವಿದ್ಯಾರ್ಥಿಗಳು ಧರಣಿ ಕೂಡುವಂತಾಗಿದೆ. ಕೂಡಲೆ ಸಂಬಂಧಿಸಿದ ಅಧಿಕಾರಿಗಳು ಜಾಗೆ
ತೆರವು ಗೊಳಿಸಲು ಕ್ರಮ ತೆಗೆದುಕೊಳ್ಳಬೇಕು. ಇದರಲ್ಲಿ ಯಾವುದೇ ರಾಜಕೀಯ ಬಣ್ಣ
ತೋರಿಸುವ ಕೆಲಸವಾಗಬಾರದು. ಈ ಹಿಂದೆ ಹಲವಾರು ಜನರು ಶಾಲೆ ಅಕ್ಕಪಕ್ಕದಲ್ಲಿ ಗುಡಿಸಲುಗಳನ್ನು ಹಾಕಿದ್ದರು. ಅವರೀಗ ಸ್ವ ಇಚ್ಛೆಯಿಂದ ಸರಕಾರಿ ಜಾಗೆ ಬಿಟ್ಟು ಹೋಗಿದ್ದಾರೆ. ಆದರೆ ಈ ವ್ಯಕ್ತಿ ಮಾತ್ರ ಜಾಗೆ ತೆರವುಗೊಳುತ್ತಿಲ್ಲ. ಅನೇಕ ಬಾರಿ ಎಚ್ಚರಿಸಿದರು.
ಯಾವುದೇ ಪ್ರಯೋಜನವಾಗಿಲ್ಲ. ಶಾಲೆ ವಿದ್ಯಾರ್ಥಿಗಳೊಂದಿಗೆ ಗ್ರಾಮದ
ಹಲವು ಮುಖಂಡರು ಸೇರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಎಸ್‌ಡಿಎಂಸಿ ಉಪಾಧ್ಯಕ್ಷ ದ್ಯಾವಣ್ಣ, ಸದಸ್ಯರಾದ ಪಿ. ನಾಗರಾಜ ಕನಕಪ್ಪ, ಸಂಗಪ್ಪ, ಗ್ರಾಮದ ಮುಖಂಡರಾದ ಬಸವರಾಜ ಮಾಲಿಪಾಟೀಲ, ಬಸವರಾಜ ಬಡಿಗೇರ, ಶರಣಪ್ಪ, ನಂದಿಹಳ್ಳಿ ಮಲ್ಲಯ್ಯ, ಲಕ್ಷ್ಮಣ ಯತ್ಮಾರಿ, ಅಂಬಣ್ಣ, ಕನಕಪ್ಪ, ಶಿಕ್ಷಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.