ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಿ
ಅನುದಾನ ಮಂಜೂರಿಗೆ ಹೆಸರು ನೋಂದಾಯಿಸಿಕೊಳ್ಳಿ : ಬಸವರಾಜ
Team Udayavani, Feb 1, 2020, 3:12 PM IST
ಗುರುಮಠಕಲ್: ಪ್ರತಿಯೊಬ್ಬರು ತಮ್ಮ ಮನೆ ಹತ್ತಿರ ವೈಯಕ್ತಿಕ ಶೌಚಾಲಯ ಕಡ್ಡಾಯವಾಗಿ ನಿರ್ಮಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯತ್ ಇಒ ಬಸವರಾಜ ಶರಭಯ್ಯ ತಾಕೀತು ಮಾಡಿದರು.
ತಾಲೂಕಿನ ಚಂಡರಕಿ ಗ್ರಾಮದಲ್ಲಿ ಶುಕ್ರವಾರ ಮನೆ ಮನೆಗೆ ಭೇಟಿ ನೀಡಿದ ಅವರು ಶೌಚಾಲಯ ನಿರ್ಮಾಣ ಕುರಿತು ಜನ ಜಾಗೃತಿ ಮೂಡಿಸಿದರು. ಬಯಲು ಬಹಿರ್ದೆಸೆಯಿಂದ ಪರಿಸರ ಹಾಗೂ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಹೀಗಾಗಿ ಪ್ರತಿಯೊಬ್ಬರು ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡರೆ ಸುಸ್ಥಿರ ಗ್ರಾಮೀಣ ನೈರ್ಮಲ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಎಲ್ಲರೂ ಶೌಚಾಲಯ ಕಟ್ಟಿಕೊಳ್ಳಲು ಅನುದಾನ ಮಂಜೂರುಗಾಗಿ ಪಂಚಾಯತಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ವೈಯಕ್ತಿಕ ಶೌಚಾಲಯ ಅನುದಾನಕ್ಕೆ
ನೀವು ಫಲನುಭವಿಗಳು ಆಗುವುದಿಲ್ಲ. ನಂತರ ನಿಮ್ಮ ಸ್ವಂತ ಹಣದಲ್ಲಿ ನಿರ್ಮಿಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.
ನಮ್ಮ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಂಬೈ, ಹೈದ್ರಾಬಾದ್, ಬೆಂಗಳೂರು ಮತ್ತು ಪುಣೆ ನಗರಗಳಿಗೆ ಜನರು ಗುಳೆ ಹೊಗುತ್ತಿದ್ದಾರೆ. ಅದನ್ನು ತಪ್ಪಿಸಲು ಪಂಚಾಯಿತಿ ವತಿಯಿಂದ ನಿಮ್ಮ ಗ್ರಾಮದಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಕಾರ್ಡ್
ಪಡೆದುಕೊಂಡು ಇಲ್ಲಿಯೇ ಕೆಲಸ ಮಾಡಿ. ಇರಲು ಅನುಕೂಲ ಕಲ್ಪಿಸಲಾಗುವುದು ಎಂದು ಹೇಳಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೀಮರಾಯ, ಗ್ರಾಮ ಪಂಚಾಯತ್ ಸದಸ್ಯ ರಾಮರೆಡ್ಡಿ ಮತ್ತು ಲಕ್ಷ್ಮಣಪ್ಪ ಸೇರಿದಂತೆ ಪಂಚಾಯತಿ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.