ಕೆಲಸದಲ್ಲಿ ದೇವರ ಕಾಣುವುದೇ ಕಾಯಕ: ಜಿಲ್ಲಾಧಿಕಾರಿ ಬೀಳಗಿ


Team Udayavani, Feb 2, 2020, 4:25 PM IST

2-Febraury-26

ದಾವಣಗೆರೆ: ನೌಕರಿ ಮತ್ತು ಕಾಯಕಗಳೆರೆಡು ಪರಸ್ಪರ ಭಿನ್ನವಾಗಿದ್ದು, ನಾವು ಮಾಡುವ ಕೆಲಸದಲ್ಲೇ ದೇವರನ್ನು ಕಂಡಾಗ ಆ ಕೆಲಸ ಕಾಯಕವಾಗುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದ್ದಾರೆ.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಮಡಿವಾಳ ಮಾಚಿದೇವ ಸಮಾಜ ಮತ್ತು ಜಿಲ್ಲಾ ಸವಿತಾ ಸಮಾಜದ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ಮಡಿವಾಳ ಮಾಚಿದೇವ ಸಮುದಾಯ ಭವನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಶ್ರೀ ಮಡಿವಾಳ ಮಾಚಿದೇವ ಮತ್ತು ಶ್ರೀ ಸವಿತಾ ಮಹರ್ಷಿ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಅವರು, ಮಹಾತ್ಮರ ಕಾಯಕ ಮತ್ತು ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆದಾಗ ನಾವು ಆಚರಿಸುವ ಜಯಂತಿ ಅರ್ಥಪೂರ್ಣವಾಗುತ್ತವೆ ಎಂದರು.

ಲಿಂಗ ಹಿಡಿದು ಧ್ಯಾನ ಮಾಡಿದರೆ ಮಾತ್ರ ದೇವರನ್ನು ಕಾಣಲು ಸಾಧ್ಯ ಎಂದುಕೊಳ್ಳದೇ ನಾವು ಮಾಡುವ ಕೆಲಸದಲ್ಲೇ ದೇವರನ್ನು ಕಾಣುವ ಪ್ರಯತ್ನ ಮಾಡಬೇಕು. ದೇವರು ದಯಪಾಲಿಸಿರುವ ಕೆಲಸವನ್ನು ನಿಷ್ಟೆಯಿಂದ ಮಾಡಿ, ಆ ಕೆಲಸದ ಫಲವನ್ನು ಕೇವಲ ನಾವು ಮತ್ತು ನಮ್ಮವರಿಗಷ್ಟೇ ಎಂದುಕೊಳ್ಳದೇ ಸಮಾಜಕ್ಕೆ ದಾಸೋಹ ನೀಡಿದರೆ ಅದು ಕಾಯಕ ಆಗುತ್ತದೆ ಎಂದು ಹೇಳಿದರು.

ನಮ್ಮ ರಾಜ್ಯದಲ್ಲಿ ಸಂಭವಿಸಿದ ಅತಿವೃಷ್ಟಿ ಹಿನ್ನಲೆಯಲ್ಲಿ ಶ್ರೀ ಮಡಿವಾಳ ಮಾಚಿದೇವ ಮತ್ತು ಶ್ರೀ ಸವಿತಾ ಮಹರ್ಷಿ ಜಯಂತಿ ಸರಳವಾಗಿ ಆಚರಿಸುವ ಮೂಲಕ ಕಾರ್ಯಕ್ರಮದ ಅನುದಾನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುವುದು. ಪ್ರಕೃತಿ ವಿಕೋಪದಿಂದ ನಲುಗಿರುವ ಜನರಿಗೆ ನಮ್ಮ ಜಿಲ್ಲೆಯಿಂದ ಸಹಾಯ ನೀಡುವ ಉದ್ದೇಶದಿಂದ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಪಂಚಾಯತ್‌ ಸಿಇಓ ಪದ್ಮ ಬಸವಂತಪ್ಪ ಮಾತನಾಡಿ, ಮಹನೀಯರು ಸಮಾನತೆ, ಸೌಹಾರ್ದತೆಯ ತತ್ವಗಳನ್ನು ಸಾಮಾನ್ಯ ಜನರಿಗೆ ಅರ್ಥವಾಗುವಂತೆ ಸಾಮಾನ್ಯ ಭಾಷೆಯಲ್ಲಿ ವಚನಗಳನ್ನು ರಚಿಸುವುದರ ಮೂಲಕ ಶರಣರೆನಿಸಿಕೊಂಡಿದ್ದಾರೆ. ಅಂತಹ ಶರಣರ ತತ್ವ ಪದಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಆಚರಣೆಗಳನ್ನು ಸಾರ್ಥಕಗೊಳಿಸಬೇಕು ಎಂದು ತಿಳಿಸಿದರು.

ಬೀದರ್‌ನ ಬಸವ ಅನುಭವ ಮಂಟಪದಲ್ಲಿ ಎಲ್ಲಾ ಶರಣರ ತತ್ವ ಆದರ್ಶಗಳನ್ನು ಹಾಗೂ ಶರಣರ ಜೀವನವನ್ನು ಸಾರುವ ಕುಟೀರಗಳಿವೆ. ಪ್ರಸ್ತುತ ರಾಜ್ಯದಲ್ಲಿ 31 ಶರಣರ ಜಯಂತಿ ಆಚರಿಸಲಾಗುತ್ತಿದ್ದು, ನಮ್ಮ ಜಿಲ್ಲೆಯಲ್ಲಿ ಎಲ್ಲಾ ಶರಣರ ಜಯಂತಿಗಳನ್ನು ಒಂದೇ ಕಡೆ ಆಚರಿಸಿ, ಅವರ ತತ್ವ ಆದರ್ಶಗಳನ್ನು ಇಂದಿನ ಯುವಜನಾಂಗಕ್ಕೆ ಪರಿಚಯಿಸುವ ಪ್ರಯತ್ನವಾಗಬೇಕೆಂದು ಸಲಹೆ ನೀಡಿದರು.

ಉಪನ್ಯಾಸ ನೀಡಿದ ಅನಿತ ದೊಡ್ಡಗೌಡರ್‌, ಅರಸುತನ ಮೇಲಲ್ಲ, ಮಡಿವಾಳ ವೃತ್ತಿ ಕೀಳಲ್ಲ ಎನ್ನುವ ಮಾತಿನಂತೆ ಮಡಿವಾಳ ಮಾಚಿದೇವರು ತಮ್ಮ ಛಲ ಕಾಯಕವನ್ನು ಜಗತ್ತಿಗೆ ತೋರಿಸಿದ್ದಾರೆ. ಅವರು ಶಿವ ಶರಣರ ಬಟ್ಟೆ ಸ್ವಚ್ಚಗೊಸುವ ಕಾಯಕದ ಜೊತೆ ಕ್ಷತ್ರಿಯರೂ ಆಗಿದ್ದರು ಎಂದರು.

12ನೇ ಶತಮಾನದಲ್ಲಿ ಮಹಿಳೆಯರ, ಮಕ್ಕಳ ಸ್ಥಿತಿ ಶೋಚನೀಯವಾಗಿತ್ತು. ಮಹಿಳೆಯರು ಅಸಹಾಯಕರು ಮತ್ತು ಅಶಕ್ತರಾಗಿದ್ದರು. ಇತಹ ಕಾಲದಲ್ಲಿ ವಚನಗಳು ತುಂಬಾ ಪ್ರಭಾವ ಬೀರಿದ್ದವು ಎಂದ ಅವರು, ಮಡಿವಾಳ ಮಾಚಿದೇವರ ಹುಟ್ಟು ಮತ್ತು ಅವರ ಜೀವನದ ಬಗ್ಗೆ ಅವರ ವಚನಗಳ ಮೂಲಕ ತಿಳಿಸಿಕೊಟ್ಟರು.

ವಕೀಲ ಎನ್‌. ರಂಗಸ್ವಾಮಿ, ಸವಿತ ಸಮಾಜದ ಮೂಲ ಪುರುಷ ಶ್ರಿ ವಿಷ್ಣು ನಾಮದಿಂದ ಸೃಷ್ಟಿಯಾದವರು ಸವಿತಾ ಮಹರ್ಷಿ. ಮನುಷ್ಯನಿಗೆ ಹುಟ್ಟಿನಿಂದ ಸಾಯುವವರೆಗೆ ಕ್ಷೌರಿಕರ ಅಗತ್ಯವಿದೆ. ಮನುಷ್ಯನ ಪಾಪ ತೊಳೆಯುವ ಕೆಲಸವನ್ನು ಕ್ಷೌ ರಿಕರು ಮಾಡುತ್ತಾರೆ. ಅಷ್ಟೇ ಅಲ್ಲದೆ ಸಂಗೀತ ವಾದ್ಯ ನುಡಿಸುವ ಕಾರ್ಯದಲ್ಲಿ ಹೆಚ್ಚು ಪ್ರಸಿದ್ದಿ ಹೊಂದಿದ ಸಮುದಾಯವಾಗಿದೆ. ಹಡಪದ ಅಣ್ಣಪ್ಪನವರು ತಮ್ಮ ನಿಷ್ಠೆಯ ಕಾಯಕ ಮಾಡುತ್ತಾ ಬಂದವರು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಸ್ವಾಗತಿಸಿದರು. ಉಮೇಶ್‌. ಎಚ್‌.ಜಿ ನಿರೂಪಿಸಿದರು. ಮಡಿವಾಳ ಮಾಚಿದೇವ ಸಮುದಾಯದ ಜಿಲ್ಲಾಧ್ಯಕ್ಷ ಬಾಲರಾಜ್‌, ಮಡಿವಾಳ ಸಂಘದ ಕಾರ್ಯದರ್ಶಿ ಧನಂಜಯ, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ನಾಗೇಂದ್ರ, ಹಾಗೂ ವಿವಿಧ ಸಮಾಜದ ಮುಖಂಡರು ಮತ್ತು ಸಮಾಜದ ಜನರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.