![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 2, 2020, 7:41 PM IST
ಬಾಗಲಕೋಟೆ: 17 ಶಾಸಕರಿಂದಲೇ ಅಧಿಕಾರಕ್ಕೆ ಬಂದಿದ್ದೇವೆ. ಯಾರಿಗೂ ಅನ್ಯಾಯವಾಗದ ರೀತಿ ಸಿಎಂ ಯಡಿಯೂರಪ್ಪ ಹಾಗೂ ಪಕ್ಷದ ನಾಯಕರು ಯೋಗ್ಯ ನಿರ್ಧಾರ ಕೈಗೊಳ್ಳುತ್ತಾರೆ. ಸಂಪುಟ ವಿಸ್ತರಣೆ ವೇಳೆ ನನ್ನನ್ನು ಸಂಪುಟದಿಂದ ಕೈಬಿಡುತ್ತಾರೆ ಎಂಬುದು ನನಗೆ ಗೊತ್ತಿಲ್ಲ. ನನಗೆ ಅನ್ಯಾಯವಾಗಲ್ಲ ಎಂದು ಭಾವಿಸಿದ್ದೇನೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ನಗರದಲ್ಲಿ ಭಾನುವಾರ ವಿಜಯಪುರ ಜ್ಞಾನ ಯೋಗಾಶ್ರಮದ ಶ್ರೀಸಿದ್ದೇಶ್ವರ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಪಕ್ಷ ಸಂಘಟನೆಯಿಂದ ಗುರುತಿಸಿಕೊಂಡವಳು. ನನಗೆ ಅನ್ಯಾಯ ಮಾಡುತ್ತಾರೆ ಅನ್ನೋದು ನನ್ನ ಗಮನಕ್ಕೂ ಇಲ್ಲ. ನನಗೆ ಅನ್ಯಾಯ ಮಾಡಲ್ಲ ಎಂಬ ವಿಶ್ವಾಸವಿದೆ ಎಂದರು.
ಹೈಕಮಾಂಡ್‌ನಿಂದ ಆದೇಶ ಬಂದರೆ ಅದಕ್ಕೆ ನಾನು ಬದ್ಧ. ಪಕ್ಷ ಸಂಘಟನೆ ಮಾಡುತ್ತೇನೆ. ಇರುವ ತನಕ ಶಾಸಕ ಸ್ಥಾನವನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡುತ್ತೇನೆ ಎಂದರು.
ಪಕ್ಷದ ಹಿರಿಯ ಸಚಿವರು ತ್ಯಾಗ ಮಾಡಬೇಕು ಎಂಬ ಶಾಸಕ ಯತ್ನಾಳ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು, ಸಿಎಂ ಯಡಿಯೂರಪ್ಪ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಿದ್ದೇವೆ. ಎಲ್ಲ ಸಚಿವರು ಇದನ್ನೇ ಹೇಳಿದ್ದಾರೆ. ಹೈಕಮಾಂಡ್‌ನಿಂದ ಏನು ಆದೇಶ ಬರುತ್ತದೆ ಅದಕ್ಕೆ ಎಲ್ಲ ಸಚಿವರು ಬದ್ಧರು ಎಂದು ತಿಳಿಸಿದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.