ಮಾಜಿ ಸಚಿವ ಡಿ. ಮಂಜುನಾಥ್ ಇನ್ನಿಲ್ಲ
Team Udayavani, Feb 3, 2020, 5:07 PM IST
ಚಿತ್ರದುರ್ಗ: ಮಾಜಿ ಸಚಿವ ಡಿ.ಮಂಜುನಾಥ್(92) ಅನಾರೋಗ್ಯದಿಂದ ನಿಧನರಾಗಿದ್ದಾರೆ.
2006ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಡಿ.ಮಂಜುನಾಥ್, ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರದಲ್ಲಿ ಅರಣ್ಯ, ಉನ್ನತ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಒಂದು ಬಾರಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಡಿ.ಮಂಜುನಾಥ್, ಧೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು.
ಹಿರಿಯೂರಿನ ತೋಟದ ಮನೆಯಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.
ಆರೋಗ್ಯದ ಕಾರಣಕ್ಕೆ ರಾಜಕೀಯದಿಂದ ದೂರ ಉಳಿದಿದ್ದರು.
ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆ, ಬೆಂಗಳೂರು ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದ ಮಂಜುನಾಥ್ ಸೋಮವಾರ ಮಧ್ಯಾಹ್ನ
3:30 ರ ವೇಳೆಗೆ ನಿಧನರಾಗಿದ್ದಾರೆ.
ಮೃತರು, ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.
ಮುಖ್ಯಮಂತ್ರಿ ಸಂತಾಪ :
ವಿಧಾನ ಪರಿಷತ್ ಮಾಜಿ ಸಭಾಪತಿ ಡಿ. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸರಳತೆ, ಸಜ್ಜನಿಕೆಯ ರಾಜಕಾರಣಿಯಾಗಿದ್ದ ಡಿ. ಮಂಜುನಾಥ್ ಅವರು ಅರಣ್ಯ, ಕಾರ್ಮಿಕ, ಯೋಜನೆ, ಪ್ರಾಥಮಿಕ ಶಿಕ್ಷಣ, ಉನ್ನತ ಶಿಕ್ಷಣ ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ವಿಧಾನ ಪರಿಷತ್ತಿನ ಸಭಾಪತಿಯಾಗಿ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದರು.
ಇವರ ನಿಧನದಿಂದ ಮೌಲ್ಯಾಧಾರಿತ ರಾಜಕಾರಣದ ಪೀಳಿಗೆಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಅವರು ವಿಷಾದಿಸಿದ್ದಾರೆ.
ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಬಂಧು ವರ್ಗ, ಅನುಯಾಯಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಎಚ್ಡಿಕೆ ಸಂತಾಪ :
ಹಿರಿಯ ರಾಜಕಾರಣಿ ಡಿ. ಮಂಜುನಾಥ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್, ಡಿ, ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಿ. ಮಂಜುನಾಥ್ ಅವರು ಸಚಿವರಾಗಿ,ವಿಧಾನ ಪರಿಷತ್ತಿನ ಸಭಾಪತಿಯಾಗಿ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದ್ದರು. ಸರಳ ವ್ಯಕ್ತಿತ್ವದ ಪ್ರತಿರೂಪದಂತೆ ಇದ್ದರು ಎಂದು ಸ್ಮರಿಸಿಕೊಂಡಿದ್ದಾರೆ.
ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಬಂಧು ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.