8, 9ಕ್ಕೂ ಪ್ರಶ್ನೆಪತ್ರಿಕೆ ಮಾದರಿ ಬದಲು
Team Udayavani, Feb 4, 2020, 6:30 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಸ್ವರೂಪದಲ್ಲಿ ಅಳವಡಿಸಿರುವ ಅಲ್ಪ ಬದಲಾವಣೆಯನ್ನು 8 ಮತ್ತು 9ನೇ ತರಗತಿಗಳಿಗೂ ಅಳವಡಿಸಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಿಸಿದೆ.
ಇದರಿಂದ 10ನೇ ತರಗತಿಯಲ್ಲಿ ಪರೀಕ್ಷೆ ಬರೆಯಲು ಅವರಿಗೆ ಅನುಕೂಲ ಆಗಲಿದೆ. ಬದಲಾದ ಈ ಪ್ರಶ್ನೆಪತ್ರಿಕೆ ಕ್ರಮವನ್ನು ಎಲ್ಲ ಪ್ರೌಢಶಾಲೆಗಳಲ್ಲೂ ಅಳವಡಿಸಿಕೊಳ್ಳಬೇಕು ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದೆ.
ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಪ್ರಶ್ನೆಪತ್ರಿಕೆಗಳ ಸ್ವರೂಪದಲ್ಲಿ ಈ ಸಾಲಿನಿಂದ ಅಲ್ಪಪ್ರಮಾಣದ ಬದಲಾವಣೆ ಮಾಡಲಾಗಿದೆ. ಬದಲಾಗುವ ಅಂಶಗಳು ಮತ್ತು ಅಂಕ ವಿವರ, ಭಾಷಾ ಹಾಗೂ ಕೋರ್ ವಿಷಯದ ಅಂಕ ಹಂಚಿಕೆಯನ್ನು ಈಗಾಗಲೇ ಮಂಡಳಿಯಿಂದ ಸ್ಪಷ್ಟಪಡಿಸಲಾಗಿದೆ.
ಬದಲಾವಣೆ ಏನು?
ಬಹು ಆಯ್ಕೆ ಪ್ರಶ್ನೆಯ ಜತೆಗೆ ಬರವಣಿಗೆಯೂ ಇರಬೇಕು ಎನ್ನುವುದು ಬದಲಾವಣೆಗೆ ಕಾರಣ. 3 ಅಂಕದ ಪ್ರಶ್ನೆಗಳ ಸಂಖ್ಯೆಯನ್ನು 6ರಿಂದ 9ಕ್ಕೆ ಏರಿಸಲಾಗಿದೆ. ಹಾಗೆಯೇ ಹೊಸದಾಗಿ 5 ಅಂಕದ ಒಂದು ಪ್ರಶ್ನೆಯನ್ನು ಸೇರಿಸಲಾಗಿದೆ. ಆದರೆ ಪರೀಕ್ಷೆಯ ಕಾಠಿನ್ಯದ ಮಟ್ಟದಲ್ಲಿ ಬದಲಾವಣೆ ಮಾಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.