ಆಟಕ್ಕುಂಟು ಲೆಕ್ಕಕ್ಕಿಲ್ಲ, ಇದೇನು ವಿಪರ್ಯಾಸವೇ, ಕಟು ಸತ್ಯವೇ: ಬಿಜೆಪಿ ಶಾಸಕ ಮಾಮನಿ ಅಸಮಧಾನ
Team Udayavani, Feb 4, 2020, 12:13 PM IST
ಬೆಂಗಳೂರು: ರಾಜ್ಯ ಬಿಜೆಪಿ ಸರಕಾರದಲ್ಲಿ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗಧಿಯಾಗುತ್ತಿದ್ದಂತೆ ಪಕ್ಷದಲ್ಲಿ ಅಸಮಧಾನದ ಕರಿ ಛಾಯೆ ಕಾಣಿಸಲಾರಂಭಿಸಿದೆ. ಕಾಂಗ್ರೆಸ್- ಜೆಡಿಎಸ್ ನಿಂದ ಬಿಜೆಪಿ ಸೇರಿದವರಲ್ಲಿ ಕೆಲವರು ಮತ್ತು ಸ್ವಪಕ್ಷದ ಹಲವರು ಸಚಿವಗಿರಿ ವಿಷಯದಲ್ಲಿ ಅಸಮಧಾನಗೊಂಡಿದ್ದಾರೆ.
ಉಪಚುನಾವಣೆಯಲ್ಲಿ ಸೋತ ಬಿಜೆಪಿ ವಲಸಿಗರು, ಸಚಿವ ಸ್ಥಾನದ ಆಕಾಂಕ್ಷಿಗಳಾದ ಮೂಲ ಶಾಸಕರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಂಪರ್ಕಿಸುತ್ತಿದ್ದಾರೆ. ಈ ಮೂಲಕ ಬಿಎಸ್ ವೈ ಗೆ ಒತ್ತಡ ಹೇರುತ್ತಿದ್ದಾರೆ.
ಸವದತ್ತಿ ಬಿಜೆಪಿ ಶಾಸಕರಾದ ಆನಂದ್ ಸಿ ಮಾಮನಿ ಟ್ವಿಟ್ಟರ್ ನಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್ ಗಳಲ್ಲಿ ಸ್ವಪಕ್ಷದ ವಿರುದ್ಧ ಹರಿಹಾಯ್ದಿರುವ ಮಾಮನಿ, ಪಕ್ಷವನ್ನು ಕಟ್ಟಿ ಬೆಳೆಸಿದವರಿಗೆ ಬೆಲೆಯಿಲ್ಲದಾಗಿದೆ ಎಂದಿದ್ದಾರೆ.
ಹೊಸತಾಗಿ ಪಕ್ಷ ಸೇರಿ ಮಂತ್ರಿಯಾಗುವವರೆದುರಿಗೆ, ಪಕ್ಷಕ್ಕೆ ಅಡಿಪಾಯ ಹಾಕಿ, ಕಟ್ಟಿ, ನಿಷ್ಠಾವಂತರಾಗಿ ದುಡಿದು ಸಾಕಷ್ಟು ಬಾರಿ ಶಾಸಕರಾದರೂ ಲೆಕ್ಕಕ್ಕಿಲ್ಲ.
ಪಕ್ಷದ ಮೇಲಿಟ್ಟಿರುವ ಕ್ಷೇತ್ರದ ಜನತೆಯ ಅಮೂಲ್ಯ ಪ್ರೀತಿ-ಅಭಿಮಾನಕ್ಕೂ, ಪಕ್ಷದಲ್ಲಿ ಬೆಲೆಯಿಲ್ಲದಾಯಿತೆ…?? !!
1 /2
— ANAND C MAMANI (@anandmamani) February 3, 2020
ಆಟಕ್ಕುಂಟು, ಲೆಕ್ಕಕ್ಕಿಲ್ಲ. ಇದೇನು ವಿಪರ್ಯಾಸವೇ, ಕಟು ಸತ್ಯವೇ?
ಈಗ ಸ್ಪಷ್ಟ ಹೇಳುವುದಿಷ್ಟೇ, ಕಾಲಾಯ ತಸ್ಮೈ ನಮಃ.
2/2
— ANAND C MAMANI (@anandmamani) February 3, 2020
ಇನ್ನಾದರೂ ನನ್ನ ಕ್ಷೇತ್ರವನ್ನು ಹಾಗೂ ನಮ್ಮಂಥವರನ್ನು ಬೆಳೆಸಲು, ಈಗಾಗಲೇ ಸಾಕಷ್ಟು ಬಾರಿ ಇಲ್ಲಿವರೆಗೆ ಸರ್ಕಾರದಲ್ಲಿ ಅಧಿಕಾರ ಅನುಭವಿಸಿದವರು ಯಾವತ್ತೂ ತಾವು ಪಡೆದ ಸ್ಥಾನಮಾನ ಕಿಂಚಿತ್ತೂ ತ್ಯಜಿಸಲು ಹಿಂದೆಟು ಹಾಕುತ್ತಿರುವುದು ಒಂದೆಡೆಗಾದರೆ, ಪಕ್ಷದ ಮುಖಂಡರೂ ಸಹ ನನ್ನ ಕ್ಷೇತ್ರವನ್ನು ಹಾಗೂ ನಮ್ಮಂಥವರನ್ನು ಬೆಳೆಸಲು
1/2
— ANAND C MAMANI (@anandmamani) February 4, 2020
ಯಾವುದೇ ಆಸಕ್ತಿ ತೋರಿಸದಿರುವುದು ಇನ್ನೊಂದೆಡೆ. ಇನ್ಮೇಲೆ ಪಕ್ಷ ನಿಷ್ಠರಿಗೆ ಕಾಲವಿಲ್ಲವೇ, ಎಂಬುದು ಯಕ್ಷಪ್ರಶ್ನೆ.
ಇದು ಪಕ್ಷ ನಿಷ್ಠರಿಗೆ ಹಾಗೂ ಮತದಾರರಿಗೆ ಆದ ಘೋರ ಅಪಮಾನ ಅಲ್ಲದೇ ಇನ್ನೇನು, ಎಂಬ ವಿಚಾರ ಎಲ್ಲರಲ್ಲೂ ಸ್ಪಷ್ಟ ಮೂಡಿದೆ. ಕಾಯ್ದು ನೋಡಬೇಕು. ಆದರೆ, ಮುಂದಿನ ನಡೆ ವಿಚಾರ ಮಾಡುವಂತದ್ದು.
2/2
— ANAND C MAMANI (@anandmamani) February 4, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.