ಕುಡಿಯುವ ನೀರಿಗೆ ಆಗ್ರಹಿಸಿ ಪ್ರತಿಭಟನೆ
Team Udayavani, Feb 4, 2020, 1:20 PM IST
ಹುಣಸಗಿ: ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಮಂಜಲಾಪುರಹಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳು, ಎಸ್‌ಡಿಎಂಸಿ ಪದಾಧಿಕಾರಿಗಳು ವಜ್ಜಲ ಗ್ರಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್ ಡಿಎಂಸಿ ಅಧ್ಯಕ್ಷ ಬಸವರಾಜ ಹಳ್ಳಿ, ಕಳೆದ ಒಂದು ತಿಂಗಳಿನಿಂದ ಮಂಜಲಾಪುರಹಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ನೀರಿನ ಸಮಸ್ಯೆ ಪರಿಹರಿಸಲು ಪಿಡಿಒ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಶಾಲೆಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಸರಕಾರ ನೀರಿನಂತೆ ಹಣ ಖರ್ಚು ಮಾಡಿದರೂ ಅಧಿಕಾರಿಗಳ ನಿರ್ಲಕ್ಷ ದಿಂದ ಮಕ್ಕಳು ಬಿಸಿಯೂಟದ ನಂತರ ಕುಡಿಯವ ನೀರಿಗಾಗಿ ಮನೆಗೆ ಬರುವಂತಾಗಿದೆ. ಗ್ರಾಮದಲ್ಲಿರುವ ಬಾವಿಯಿಂದ ದ್ವಿಚಕ್ರದ ಮೇಲೆ ನೀರು ತಂದು ಅಡುಗೆ ಮಾಡಿ ಮಕ್ಕಳಿಗೆ ಬಡಿಸುವ ಪರಿಸ್ಥಿತಿ ಬಂದಿದೆ. ಶಾಲೆ ಆವರಣದಲ್ಲಿ ಕುಡಿಯುವ ನೀರಿನ ಕೊಳವೆಬಾವಿ ಇದೆ. ಆದರೆ ಅದು ಕೆಟ್ಟು ಸುಮಾರು ಒಂದು ತಿಂಗಳು ಗತಿಸಿದೆ. ಪಿಡಿಒ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ. ಕುಡಿಯುವ ನೀರಿಗಾಗಿ ಶಾಲೆ ಬಿಟ್ಟು ಮನೆಯಲ್ಲಿರುವಂತಾಗಿದೆ. ಪಿಡಿಒ ಇದುವರೆಗೂ ಸಮಸ್ಯೆ ಕುರಿತು ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಲ್ಲ ಪಾಲಕರು ಹಾಗೂ ಗ್ರಾಪಂ ಸದಸ್ಯರು ವಿದ್ಯಾರ್ಥಿಗಳೊಂದಿಗೆ ಗ್ರಾಪಂ ಎದುರು ಪ್ರತಿಭಟನೆ ಹಮ್ಮಿಕೊಂಡು ಅಧಿಕಾರಿಯನ್ನು ಎಚ್ಚರಿಸಬೇಕಾದ ಪರಿಸ್ಥಿತಿ ಬಂದಿದೆ. ಸಂಬಂಧಿಸಿದ ಅಧಿಕಾರಿಗಳು ಶಾಲೆ ಮಕ್ಕಳಿಗೆ ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಾನಯ್ಯ ಬಿರಾದಾರ, ಪರಮಣ್ಣ ಕಂಬಳಿ, ಚಂದಪ್ಪ ಬೈಚಬಾಳ, ಪರಮಣ್ಣ ನೀಲೊಗಲ್ಲ, ಮಲ್ಲಪ್ಪ ಮೇಟಿ, ಮಾನಪ್ಪ ಹಾದಿಮನಿ ಸೇರಿದಂತೆ ಮಕ್ಕಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.