ಗಜೇಂದ್ರಗಡ ಉದ್ಯಾನವನ ಅವ್ಯವಸ್ಥೆ ಆಗರ

Team Udayavani, Feb 4, 2020, 3:31 PM IST

gadaga-tdy2

ಗಜೇಂದ್ರಗಡ: ಪಟ್ಟಣದ ಹೊರವಲಯದ ಗುಡ್ಡದ ಬಳಿ ಪುರಸಭೆಯಿಂದ ನಿರ್ಮಿಸಿರುವ ಉದ್ಯಾನವನ ಸೂಕ್ತ ನಿರ್ವಹಣೆ ಇಲ್ಲದೇ ಅವ್ಯವಸ್ಥೆಯ ಆಗರವಾಗಿದ್ದು, ವಾಯು ವಿಹಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ. ಕೂಡಲೇ ಪುರಸಭೆಯವರು ಉದ್ಯಾನವನ ಪುನಶ್ಚೇತಕ್ಕೆ ಮುಂದಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸ್ಥಳೀಯ ಇಂಗು ಕೆರೆಯ ಬುಡದಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿರುವ ಉದ್ಯಾನವನ ಗಜೇಂದ್ರಗಡ ಜನತೆಗೆ ಅಚ್ಚು ಮೆಚ್ಚಿನ ತಾಣವಾಗಿದೆ. ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ನಿತ್ಯ ಗಾರ್ಡನ್‌ ಗೆ ವಾಯು ವಿಹಾರಕ್ಕಾಗಿ ಹಲವಾರು ಜನರು ಆಗಮಿಸುತ್ತಾರೆ. ಆದರೆ ಪುರಸಭೆ ಗಾರ್ಡನನ್ನು ಸಂಪೂರ್ಣ ನಿರ್ಲಕ್ಷಿಸಿದ ಪರಿಣಾಮ ಸ್ಮಶಾನ ರೀತಿಯಲ್ಲಿ ಮಾರ್ಪಟ್ಟಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿದ್ದಾರೆ.

ಉದ್ಯಾನವನದಲ್ಲಿನ ಹಲವು ಪ್ರಬೇಧಗಳ ಗಿಡಗಳಿಗೆ ಸಮರ್ಪಕವಾಗಿ ನೀರುಣಿಸದ ಪರಿಣಾಮ ಗಿಡಗಳು ಸಂಪೂರ್ಣ ಒಣಗಿವೆ. ಜೊತೆಗೆ ಎಲ್ಲೆಂದರಲ್ಲಿಕಸದ ರಾಶಿಗಳು ರಾರಾಜಿಸುತ್ತಿವೆ. ಮಕ್ಕಳ ಆಟಿಕೆ ಸಾಮಾನುಗಳಂತೂ ದುರಸ್ತಿಗೊಂಡು ಚಿಣ್ಣರಿಗೆ ನಿರಾಸೆಯನ್ನುಂಟು ಮಾಡುತ್ತಿವೆ. ಉದ್ಯಾನವನಕ್ಕೆ ಓರ್ವ ಕಾವಲುಗಾರ ಇದ್ದರೂ ಉದ್ಯಾನವನದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಗಾರ್ಡನ್‌ ಗೆ ಆಗಮಿಸುವ ವೃದ್ಧರು, ಚಿಕ್ಕ ಮಕ್ಕಳು ಇಂತಹ ದೃಶ್ಯ ಕಂಡು ಮುಜುಗರಕ್ಕೆ ಒಳಗಾಗುವಂತಾಗಿದೆ. ಉದ್ಯಾನವನ ತುಂಬೆಲ್ಲಾ ಸಿಗರೇಟ್‌, ಮದ್ಯದ ಬಾಟಲಿಗಳು ರಾರಾಜಿಸುತ್ತಿವೆ.

ಉದ್ಯಾನವದಲ್ಲಿ ಹುಲ್ಲಿನ ಹಾಸಿಗೆ ಮಾಯವಾಗಿ ಸುಟ್ಟ ಕರಿ ನೆಲದ ಹಾಸಿಗೆಯಾಗಿರುವುದರಿಂದ ಉದ್ಯಾನವನ ಅಂದಗೆಟ್ಟಿದೆ. ಸರಿಯಾದ ಫುಟ್‌ಪಾತ್‌, ನೀರಿನ ವ್ಯವಸ್ಥೆ ಗಳಿಲ್ಲ. ವಿದ್ಯುತ್‌ ಸಂಪರ್ಕವಂತೂ ಗಗನ ಕುಸುಮವಾಗಿದೆ. ಎತ್ತೆಂದರತ್ತ ಬೆಳೆದ ಗಿಡಗಳ ರೆಂಬೆಕೊಂಬೆಗಳಿಂದಾಗಿ ಉದ್ಯಾನವದಲ್ಲಿ ಓಡಾಡುವವರಿಗೆ ತೀವ್ರ ತೊಂದರೆಯುಂಟಾಗುತ್ತಿವೆ. ಬಾಯ್ತೆರೆದ ನೀರಿನ ಟ್ಯಾಂಕ್‌ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದರೂ ಪುರಸಭೆ ಅಧಿಕಾರಿಗಳು ಮಾತ್ರ ಮೌನಕ್ಕೆ ಶರಣಾಗಿದ್ದಾರೆ.

ಮೂರು ಎಕರೆ ವಿಸ್ತೀರ್ಣದಲ್ಲಿರುವ ಉದ್ಯಾನವನ ಗಜೇಂದ್ರಗಡ ಜನತೆಯ ಅಚ್ಚು ಮೆಚ್ಚಿನ ಸ್ಥಳವಾಗಿದ್ದು, ಕೂಡಲೇ ಸ್ಥಳೀಯ ಶಾಸಕರು ಪುರಸಭೆಗೆ ಆದೇಶಿಸಿ ಉದ್ಯಾನವನ ಪುನಶ್ಚೇತನಕ್ಕೆ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.