ಶ್ರೀ ಮಲ್ಲಿಕಾರ್ಜುನ ಸ್ವಾಮಿ ಅದ್ಧೂರಿ ರಥೋತ್ಸವ


Team Udayavani, Feb 5, 2020, 3:00 AM IST

sri-mallikarjuna

ತಿ.ನರಸೀಪುರ: ತಾಲೂಕಿನ ಮುಡುಕುತೊರೆಯಲ್ಲಿ ಮಂಗಳವಾರ ಶ್ರೀ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಬ್ರಹ್ಮರಥೋತ್ಸವ, ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಸೋಮಶೈಲ ಕ್ಷೇತ್ರವೆಂಬ ಖ್ಯಾತಿ ಪಡೆದಿರುವ ಮುಡುಕುತೊರೆಯಲ್ಲಿ ಜಾತ್ರೋತ್ಸವದ ಸಂಭ್ರಮ ಕಳೆಗಟ್ಟಿತ್ತು. ಬಣ್ಣಬಣ್ಣದ ವಸ್ತ್ರ ಹಾಗೂ ಹೂವುಗಳಿಂದ ಅಲಂಕೃತಗೊಂಡಿದ್ದ ರಥದಲ್ಲಿ ವೀರಾಜಮಾನರಾಗಿದ್ದ ಶ್ರೀ ಭ್ರಮರಾಂಬಿಕೆ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದರ್ಶನ ಪಡೆದು ಪುನೀತವಾದ ಭಕ್ತ ಸಾಗರ, ಹಣ್ಣು ಜವನ ಎಸೆದು ಧೂಪ ಹಾಕಿ ಕೈಮುಗಿದು ಪ್ರಾರ್ಥಿಸಿದರು.

ರಥೋತ್ಸವಕ್ಕೂ ಮೊದಲು ಇಪ್ಪತ್ತು ಮಂಟಪಗಳಲ್ಲಿಯೂ ಮಂಟಪೋತ್ಸವ ನಡೆದ ಬಳಿಕ ಪ್ರದಕ್ಷಿಣೆ ಹಾಕಿದ ಸ್ವಸ್ತಿಶ್ರೀ ಶಾಲಿವಾಹನ ಶಕ, ಕಾರಿ ನಾಮ ಸಂವತ್ಸರದ ಮಾಘಶುದ್ಧ ರೊಹೀಣಿ, ನಕ್ಷತ್ರದ ಶುಭಗಳಿಗೆಯಲ್ಲಿ ರಥದಲ್ಲಿ ಉತ್ಸವಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಮಹಾಮಂಗಳಾರತಿ ನೇರವೇರಿಸಿದ ನಂತರ ಮಧ್ಯಾಹ್ನ 2 ಗಂಟೆಗೆ ವಿದ್ಯುಕ್ತವಾಗಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಮೊದಲು ಶ್ರೀ ಗಣಪತಿ-ಸುಬ್ರಹ್ಮಣ್ಯ, ನಂತರ ಶ್ರೀ ಪಾರ್ವತಿ ಹಾಗೂ ಶ್ರೀ ಮನೋನ್ಮಣಿ ಅಮ್ಮನವರು ಚಿಕ್ಕರಥಗಳು ಸಾಗಿದವು. ಬೆನ್ನಲ್ಲಿ ಶ್ರೀ ಭ್ರಮರಾಂಬಿಕ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ರಥ ವೈಭವದಿಂದ ಸಾಗಿತು. ಪಶ್ಚಿಮಾಭಿಮುಖವಾಗಿ ಚಲಿಸಿ, ಉತ್ತರ ದಿಕ್ಕಿಗೆ ತಿರುಗಿ ಮತ್ತೆ ಪಡುವಣ ದಿಕ್ಕಿನತ್ತ ಸಾಗಿದ ರಥೋತ್ಸವ ಅಡಚಣೆ ಅಥವಾ ಅಡ್ಡಿ-ಆತಂಕಗಳಿಲ್ಲದೆ ಸ್ವಸ್ಥಾನಕ್ಕೆ ಮರಳಿತು. ಮೆರವಣಿಗೆಯುದ್ದಕ್ಕೂ ಮೂರು ರಥಗಳಿಗೂ ಹಣ್ಣು ಜವನಗಳ ವೃಷ್ಟಿಯಾಯಿತು.

ಬೆಳಗೆಯಿಂದ ಮುಡುಕುತೊರೆಯತ್ತ ಜನಸಾಗರವೇ ಹರಿದು ಬರಲಾರಂಭಿಸಿತು. ದೇವಾಲಯದಲ್ಲಿನ ಗರ್ಭಗುಡಿಯಲ್ಲಿಯೂ ಕೂಡ ವಿಶೇಷ ಪೂಜಾ ಕೈಂಕರ್ಯಗಳು ಸಾಂಗವಾಗಿ ನೇರವೇರಿದವು. ನದಿ ತೀರದಲ್ಲಿಯೂ ಮುತ್ತೇದೆಯರು ಪೂಜೆ ಕಾರ್ಯ ನಡೆಸಿದರು. ಮೂಲ ದೇವರ ದರ್ಶನಕ್ಕೆ ಭಕ್ತರು ಸಾಲುಗಟ್ಟಿ ನಿಂತಿದ್ದರು. ಮುಡುಕುತೊರೆ ಶ್ರೀ ಭ್ರಮರಾಂಬಿಕೆ ಅಮ್ಮನವರು ಹಾಗೂ ಶ್ರೀ ಮಲ್ಲಿಕಾರ್ಜುನಸ್ವಾಮಿ ಭಕ್ತ ಸಾಗರವೇ ಹರಿದಿತ್ತು.

ದಾಸೋಹ: ಮುಡುಕುತೊರೆ ಜಾತ್ರೋತ್ಸವ ದಾಸೋಹಕ್ಕೆ ಹೆಸರು ವಾಸಿ. ಅದರಂತೆ ಬ್ರಹ್ಮರಥೋತ್ಸವದ ಹಿನ್ನೆಲೆಯಲ್ಲಿ ಬೆಳಗೆಯಿಂದ ಮಧ್ಯಾಹ್ನದವರೆಗೂ ಎಲ್ಲೆಡೆ ಭರ್ಜರಿಯಾಗಿ ದಾಸೋಹ ಹಾಗೂ ಮಜ್ಜಿಗೆ ಪಾನಕ ವಿತರಣೆ ಜೋರಾಗಿ ನಡೆಯಿತು. ದಾಸೋಹ ಭವನ(ಪರ ನಡೆಯುವ ಮನೆ)ಗಳು ಸೇರಿದಂತೆ ಬಯಲು ಪ್ರದೇಶಗಳಲ್ಲೇಲ್ಲಾ ಪೆಂಡಾಲ್‌ ಹಾಕಿ ಬರುವ ಭಕ್ತರು ಹಾಗೂ ಬಂಧು ಬಳಗಕ್ಕೆ ದಾಸೋಹ ನೀಡುತ್ತಿದ್ದುದು ಕಂಡು ಬಂದಿತ್ತು. ಹರಕೆ ಹೊತ್ತಿದ್ದ ಭಕ್ತರು ಮಜ್ಜಿಗೆ ಪಾನಕ ವಿತರಿಸಿ, ಜಾತ್ರೆಯಲ್ಲಿ ಬಿಸಿಲಿನಿಂದ ದಣಿದಿದ್ದವರ ದಾಹ ನೀಗಿಸುವ ಕಾಯಕ ಮಾಡಿದರು.

ಆನಂದ ಧಿಕ್ಷೀತ್‌ ಸೇರಿದಂತೆ ಅರ್ಚಕ ಮಹೇಶ್‌ ಪ್ರಸಾದ್‌, ಜಗದೀಶ್‌ಮೂರ್ತಿ, ನಾಗೇಶ್‌ಮೂರ್ತಿ, ರಮೇಶ್‌, ವಿಶ್ವನಾಥ್‌ ಸೇರಿದಂತೆ ಹಲವರ ತಂಡ ಧಾರ್ಮಿಕ ವಿಧಿ ವಿಧಾನ ನೇರವೇರಿಸಿದರು. ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ, ದೇವಾಲಯಕ್ಕೆ ಭೆಟಿ ನೀಡಿ ಪೂಜೆ ಸಲ್ಲಿಸಿದರು. ಮಳವಳ್ಳಿ ಮಾಜಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ರಥೋತ್ಸವ ಆರಂಭಕ್ಕೂ ಮೊದಲು ವಿಶೇಷ ಪೂಜೆ ಸಲ್ಲಿಸಿದರು. ಜಿಪಂ ಸದಸ್ಯ ಮಂಜುನಾಥನ್‌, ಮಹಾಮಂಗಳಾರತಿ ಸ್ವೀಕರಿಸಿದರು. ನಂಜನಗೂಡು ಡಿವೈಎಸ್ಪಿ ಪ್ರಭಾಕರ್‌ ರಾವ್‌ ಶಿಂಧೆ, ತಾಪಂ ಸದಸ್ಯ ರತ್ನರಾಜ್‌ ಸೇರಿದಂತೆ ಸ್ಥಳೀಯ ಚುನಾುತ ಜನಪ್ರತಿನಿಧಿಗಳು ಹಾಗೂ ಮುಖಂಡರು ಭಾಗÊಹಿ‌ಸಿದ್ದರು.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.