ರಾಜಧಾನಿ ನಿರ್ಮಾಣ ಆಯಾ ರಾಜ್ಯ ಸರ್ಕಾರದ ನಿರ್ಧಾರ : ಕೇಂದ್ರ
Team Udayavani, Feb 4, 2020, 9:19 PM IST
ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಮೂರು ರಾಜಧಾನಿಗಳನ್ನು ನಿರ್ಮಿಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಲೋಕಸಭೆಯಲ್ಲಿ ಟಿಡಿಪಿಯ ಜಯದೇವ್ ಗಲ್ಲಾ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದ ರಾಯ್, “ರಾಜಧಾನಿಗಳ ಬಗ್ಗೆ ನಿರ್ಧರಿಸುವ ಅಧಿಕಾರ ಆಯಾ ರಾಜ್ಯಗಳಿಗೆ ಇರುತ್ತದೆ. ಕೇಂದ್ರ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ’ ಎಂದಿದ್ದಾರೆ.
ಅಮರಾವತಿಯನ್ನು ರಾಜಧಾನಿಯನ್ನಾಗಿಸಲು ಸಾವಿರಾರು ರೈತರು ಕೃಷಿಭೂಮಿ ಬಿಟ್ಟುಕೊಟ್ಟಿದ್ದರು. ಸರ್ಕಾರ ಮತ್ತೆರಡು ರಾಜಧಾನಿಗಳನ್ನು ನಿರ್ಮಿಸಿದರೆ ಅವರಿಗೆ ನಷ್ಟವಾಗುತ್ತದೆ. ಹೀಗಾಗಿ ಕೇಂದ್ರ ರಾಜ್ಯ ಸರ್ಕಾರದ ನಡೆಗೆ ತಡೆಒಡ್ಡಬೇಕು ಎಂದು ಜಯದೇವ್ ಸಂಸತ್ತಿನಲ್ಲಿ ಮನವಿ ಮಾಡಿದ್ದರು.
ಕೇಂದ್ರ ಸರ್ಕಾರದ ಉತ್ತರದಿಂದಾಗಿ ಆಂಧ್ರಪ್ರದೇಶದ ವೈಎಸ್ಆರ್ ಕಾಂಗ್ರೆಸ್ ಸರ್ಕಾರ ನಿಟ್ಟುಸಿರು ಬಿಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.