ಸವದಿಯಿಂದ ಇಂದು ನಾಮಪತ್ರ ಸಲ್ಲಿಕೆ
Team Udayavani, Feb 5, 2020, 3:03 AM IST
ಬೆಂಗಳೂರು: ವಿಧಾನಪರಿಷತ್ನಲ್ಲಿ ಖಾಲಿ ಇರುವ ಒಂದು ಸ್ಥಾನಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ಕಾಂಗ್ರೆಸ್ ಸದಸ್ಯ ರಿಜ್ವಾನ್ ಅರ್ಷದ್ ಅವರಿಂದ ತೆರವಾದ ಸ್ಥಾನಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ನಾಮಪತ್ರ ಸಲ್ಲಿಸಲಿದ್ದಾರೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಿಜ್ವಾನ್ ಅರ್ಷದ್ ಜಯ ಸಾಧಿಸಿದ್ದರು.
ಮೇಲ್ಮನೆ ಸದಸ್ಯರೂ ಆಗಿದ್ದರಿಂದ ಈ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ, ಫೆ.17ರಂದು ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಸರ್ಕಾರದ ಮೊದಲ ಸಚಿವ ಸಂಪುಟದಲ್ಲಿಯೇ ಲಕ್ಷ್ಮಣ ಸವದಿಯವರಿಗೆ ಉಪಮುಖ್ಯಮಂತ್ರಿ ಹುದ್ದೆಯ ಜತೆಗೆ ಸಾರಿಗೆ ಇಲಾಖೆ ನೀಡಲಾಗಿದೆ.
2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿದ್ದ ಲಕ್ಷ್ಮಣ ಸವದಿಯವರು ಅಂದಿನ ಕಾಂಗ್ರೆಸ್ ಅಭ್ಯರ್ಥಿ (ಈಗ ಬಿಜೆಪಿ ಶಾಸಕ) ಮಹೇಶ್ ಕುಮಟಳ್ಳಿ ವಿರುದ್ಧ ಸೋತಿದ್ದರು. ಆದರೂ, ಬಿಜೆಪಿ ಸರ್ಕಾರ ರಚನೆಯಾದಾಗ ಲಕ್ಷ್ಮಣ ಸವದಿಯನ್ನು ಸಚಿವರನ್ನಾಗಿ ಮಾಡಲಾಗಿದೆ. ಫೆ.26ರೊಳಗೆ ಅವರು ಪರಿಷತ್ನ ಸದಸ್ಯರಾಗ ಬೇಕಿರುವುದರಿಂದ ನಾಮಪತ್ರವನ್ನು ಬಿಜೆಪಿ ವರಿಷ್ಠರ ಸೂಚನೆಯಂತೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.