ಸೋಂಕು ಪೀಡಿತ ದೇಶಗಳಿಂದ ಬಂದವರ ಮಾಹಿತಿಗೆ ಮನವಿ

ಕೊರೊನಾ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂಜಾಗ್ರತೆ ಕ್ರಮ ಮುಂದುವರಿಕೆ

Team Udayavani, Feb 5, 2020, 7:25 AM IST

pro-40

ಸಾಂದರ್ಭಿಕ ಚಿತ್ರ

ಮಂಗಳೂರು: ನೆರೆಯ ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮುಂಜಾಗ್ರತ ಕ್ರಮಗಳನ್ನು ಬಿಗಿಗೊಳಿಸಲಾಗಿದೆ. ಜಿಲ್ಲೆಯಲ್ಲಿ ಪ್ರಕರಣ ಪತ್ತೆಯಾಗಿಲ್ಲ, ಜನರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಜ್ವರ, ತಲೆನೋವಿಗೆ ಚಿಕಿತ್ಸೆ ಪಡೆಯಲು ಸೋಮವಾರ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದ ಫಿಲಿಪ್ಪೀನ್ಸ್‌ನ ದಂಪತಿ ಚೇತರಿಸಿಕೊಳ್ಳುತ್ತಿದ್ದಾರೆ. ಶೀತ, ತಲೆನೋವಿಗೆ ದಾಖಲಾಗಿದ್ದ ಕೇರಳ ಮೂಲದ ಜಪಾನ್‌ ವಿದ್ಯಾರ್ಥಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೂವರಿಗೂ ಸಾಮಾನ್ಯ ಶೀತ, ಜ್ವರ, ತಲೆನೋವು ಕಾಣಿಸಿಕೊಂಡಿತ್ತು. ಯಾವುದೇ ಕಾರಣಕ್ಕೂ ಅನಗತ್ಯ ವದಂತಿಗಳನ್ನು ಹರಡಬಾರದು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ನವೀನ್‌ಚಂದ್ರ ಕುಲಾಲ್‌ ಮನವಿ ಮಾಡಿದ್ದಾರೆ.

ಉಡುಪಿ: ಮುಂದುವರಿದ ಜಾಗೃತಿ
ಕೊರೊನಾ ವೈರಸ್‌ ಸೋಂಕು ತಡೆ ಹಾಗೂ ನಿಯಂತ್ರಣ ಕುರಿತು ಜಿಲ್ಲೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮುಂದುವರಿದಿದೆ. ಜಿಲ್ಲೆಯಲ್ಲಿ ಮಂಗಳವಾರದ ತನಕವೂ ಯಾವುದೇ ಶಂಕಿತ ಪ್ರಕರಣ ಕಂಡುಬಂದಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ಮುಂದುವರಿಸಲಾಗಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀಂದ್ರ ಚಂದ್ರ ಸೂಡ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಮುಂಜಾಗ್ರತೆ ಕ್ರಮಗಳನ್ನು ಆರೋಗ್ಯ ಅಧಿಕಾರಿಗಳು ಕೈಗೊಂಡಿದ್ದಾರೆ. ಜಿಲ್ಲಾ ಮಟ್ಟ, ತಾಲೂಕು ಮಟ್ಟ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಕೇಂದ್ರಗಳಲ್ಲಿ ಕೇಂದ್ರ ಮಟ್ಟದಲ್ಲಿ ವೈದ್ಯಾಧಿಕಾರಿಗಳು ನಿಗಾವಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸುತ್ತಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಯಾವುದೇ ಆತಂಕವಿಲ್ಲ ಎಂದು ತಿಳಿಸಿದ್ದಾರೆ.

ಮಾಹಿತಿ ನೀಡಿ: ಜಿಲ್ಲಾಧಿಕಾರಿ
ಕೊರೊನಾ ವೈರಸ್‌ ಸೋಂಕು ಪೀಡಿತ ದೇಶಗಳಾದ ಚೀನ, ಹಾಂಕಾಂಗ್‌, ಆಗ್ನೇಯ ಏಷ್ಯಾ, ಜಪಾನ್‌, ದಕ್ಷಿಣ ಕೊರಿಯಾ ಅಥವಾ ವಿಶ್ವದ ಇತರ ದೇಶಗಳಿಂದ ಕಳೆದ ಒಂದು ತಿಂಗಳಿನಿಂದೀಚೆಗೆ ದ.ಕ. ಜಿಲ್ಲೆಗೆ ಯಾವುದೇ ವ್ಯಕ್ತಿ ಬಂದಿರುವುದು ತಿಳಿದುಬಂದಲ್ಲಿ ಅಂತಹವರ ಬಗ್ಗೆ ಸಾರ್ವಜನಿಕರು ಆರೋಗ್ಯ ಇಲಾಖೆಗೆ ಮಾಹಿತಿ ನೀಡಬಹುದು. ಅವರಲ್ಲಿ ಕೊರೊನಾ ಸೋಂಕಿನ ಲಕ್ಷಣ ಇದ್ದರೂ ಇಲ್ಲದಿದ್ದರೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ದೂರವಾಣಿ ಸಂಖ್ಯೆ 0824-2423672 ಅಥವಾ ಜಿಲ್ಲಾ ಸರ್ವೆಲೆನ್ಸ್‌ ಘಟಕದ ದೂರವಾಣಿ ಸಂಖ್ಯೆ 0824-2427316 ಸಂಖ್ಯೆಗೆ ಮಾಹಿತಿ ನೀಡಬೇಕು. ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

BBK11: ಮಂಜಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

BBK11: ಮಂಜಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Naxal BIG

Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Mangaluru: ತ್ಯಾಜ್ಯ ಸಾಗಾಟ ವಾಹನಕ್ಕೆ ಏಳೇ ವರ್ಷ ಬಾಳಿಕೆ!

9

Mangaluru: ದ್ವಿಮುಖ ಸಂಚಾರ ನಿರ್ಧಾರಕ್ಕೆ ಅಡೆತಡೆ

5

Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್‌

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ಮಂಜಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

BBK11: ಮಂಜಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

11(1

Udupi: ಇಲ್ಲಿ ಹೊಂಡಗಳೇ ಸ್ಪೀಡ್‌ ಬ್ರೇಕರ್‌ಗಳು!

10-uv-fusion

Rainy Season: ಮೊಬೈಲ್‌ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.