ಕಡ್ಡಾಯ ಸ್ಕೌಟ್-ಗೈಡ್ಸ್ ಘಟಕ ಸ್ಥಾಪಿಸಿ
Team Udayavani, Feb 5, 2020, 12:06 PM IST
ಚಿಕ್ಕೋಡಿ: ಸ್ಕೌಟ್ ಮತ್ತು ಗೈಡ್ಸ್ ಇಲ್ಲದ ಪ್ರತಿ ಅನುದಾನಿತ, ಅನುದಾನರಹಿತ ಮತ್ತು ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ತರಬೇತಿ ನೀಡಿ ಕಡ್ಡಾಯವಾಗಿ ಘಟಕಗಳನ್ನು ಸ್ಥಾಪಿಸಬೇಕೆಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳಗಾವಿ ಜಿಲ್ಲಾ ಮುಖ್ಯ ಆಯುಕ್ತರು ಹಾಗೂ ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು.
ಇಲ್ಲಿನ ಸಿಟಿಇ ಸಂಸ್ಥೆಯ ಡಿ. ಕೆ. ಶಹಾ ಶಾಲಾ ಸಭಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ಚಿಕ್ಕೋಡಿ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಚಿಕ್ಕೋಡಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಗೆ ಕಾರ್ಯಕ್ರಮ ನಡೆಸಲು ಕೊಠಡಿಯ ಬೇಡಿಕೆಗೆ ಅನುಮೋದನೆ ನೀಡಿದ ಅವರು, ಶಿಕ್ಷಕರೊಂದಿಗೆ ಚರ್ಚೆ ನಡೆಸಿ ಹಲವಾರು ಸಮಸ್ಯೆಗಳಿಗೆ ಸ್ಪಂದಿಸಿದರು. ರಾಜ್ಯದಲ್ಲಿಯೇ ಚಿಕ್ಕೋಡಿ ತಾಲೂಕನ್ನು ಸ್ಕೌಟ್ಸ್ ಮತ್ತು ಗೈಡ್ಸ್‌ನ ಮಾದರಿ ತಾಲೂಕಾಗಿಸಲು ಸೂಚಿಸಿದರು. ಅಧ್ಯಕ್ಷತೆ ವಹಿಸಿದ್ದ ಚಿಕ್ಕೋಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎ. ಮೇಕನಮರಡಿ ಪ್ರತಿ ಶಾಲೆಯಲ್ಲಿ ಘಟಕಗಳನ್ನು ಸ್ಥಾಪಿಸಿ ವ್ಯವಸ್ಥಿತವಾಗಿ ಮುನ್ನಡೆಸಿಕೊಂಡು ಹೋಗುವಂತೆ ಸಲಹೆ ನೀಡಿದರು.
ಕಾರ್ಯಕ್ರಮಕ್ಕೆ ಜಿಲ್ಲಾ ಸಂಘಟಕರಾದ ಎನ್.ಬಿ. ಗುಡಸಿ, ಡಿ.ಬಿ. ಅತ್ತಾರ, ಡಿ.ಕೆ. ಶಹಾ ಶಾಲೆಯ ಆಡಳಿತಾಧಿಕಾರಿ ಆರ್.ಪಿ. ದೊಡಮನಿ, ಚಿಕ್ಕೋಡಿ ದೈಹಿಕ ಶಿಕ್ಷಣ ಪ್ರಭಾರಿ ಶಿಕ್ಷಣಾ ಧಿಕಾರಿ ಬಿ.ಎಸ್. ಶೇವಾಳೆ, ಸಂಪನ್ಮೂಲ ವ್ಯಕ್ತಿಗಳಾದ ಪಿ.ಪಿ. ಸಾಮಕ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಚಿಕ್ಕೋಡಿಯ ಕಾರ್ಯದರ್ಶಿಗಳಾದ ಎನ್.ಜಿ. ಪಾಟೀಲ, ಮತ್ತು ತಾಲೂಕಿನ ಎಲ್ಲ ಸ್ಕೌಟ್ ಮಾಸ್ಟರ್ ಮತ್ತು ಗೈಡ್ಸ್ ಕ್ಯಾಪ್ಟನ್ಸ್ ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ಎನ್.ಜಿ. ಪಾಟೀಲ ಸ್ವಾಗತಿಸಿದರು. ಕಿರಣ ಮುರಾಳೆ ವಂದಿಸಿದರು. ಶ್ರೀಮತಿ ಎಸ್.ಜಿ. ಜೋಶಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.